Tuesday, July 5, 2022

ಇನ್​​ಸ್ಟಾಗ್ರಾಂನಲ್ಲಿ ಕೋಮು ಪ್ರಚೋದನಾಕಾರಿ ಪೋಸ್ಟ್: ಬಾಲಕ ಮಂಗಳೂರು ಪೊಲೀಸ್ ವಶಕ್ಕೆ

ಮಂಗಳೂರು: ಇನ್​​ಸ್ಟಾಗ್ರಾಂ ಖಾತೆಯಲ್ಲಿ ನಿರ್ದಿಷ್ಟ ಸಮುದಾಯವೊಂದನ್ನು ಗುರಿ ಮಾಡಿ ಕೋಮು ಭಾವನೆ ಕೆರಳಿಸುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಅಪ್ರಾಪ್ತನನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಆರಂಭಿಸಿದ್ದಾರೆ.

ಅಪ್ರಾಪ್ತ ದಕ್ಷಿಣ ಕನ್ನಡ ಜಿಲ್ಲೆಯವನಾಗಿದ್ದು ಹೆಚ್ಚಿನ ಮಾಹಿತಿ ನೀಡಲು ಮಂಗಳೂರು ನಗರ ಪೊಲೀಸ್ ಆಯುಕ್ತರು ನಿರಾಕರಿಸಿದ್ದಾರೆ.

17 ವರ್ಷದ ಈತ ಎಸ್ಎಸ್ಎಲ್​ಸಿಯಲ್ಲಿ ಅನುತ್ತೀರ್ಣನಾದ ಬಳಿಕ ಬೆಂಗಳೂರಿಗೆ ಹೋಗಿ ತರಕಾರಿ ಮಾರಾಟ ಮಾಡುವ ಮಂಡಿಯಲ್ಲಿ ಕೆಲಸ ಮಾಡುತ್ತಿದ್ದ.

ಇನ್​​ಸ್ಟಾಗ್ರಾಂನಲ್ಲಿ ‘troll_king_193’ ಹೆಸರಿನಲ್ಲಿ ಖಾತೆ ತೆರೆದು ಹಿಂದೂ ದೇವಾಲಯಗಳ ಗೋಪುರಗಳ ಮೇಲೆ ಮುಸ್ಲಿಂ ಸಮುದಾಯದ ಹಸಿರು ಧ್ವಜ ಹಾರಾಟ ಆಗುತ್ತಿರುವ ರೀತಿಯಲ್ಲಿ ವಿಡಿಯೋಗಳನ್ನು ಎಡಿಟ್ ಮಾಡಿ ಪೋಸ್ಟ್ ಮಾಡಿದ್ದಾನೆ.

ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತರು ಕಳೆದ ಕೆಲ ತಿಂಗಳುಗಳಿಂದ ಈತ ಈ ರೀತಿಯಲ್ಲಿ ಹಿಂದೂ ದೇವಾಲಯಗಳನ್ನು ವಿರೂಪಗೊಳಿಸುತ್ತಿರುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಮತ್ತು ಆ ಎಡಿಟ್ ಮಾಡಿದ ವಿಡಿಯೊಗಳನ್ನು troll ಪೇಜ್‌ನಲ್ಲಿ ಹಾಕಿ ವೈರಲ್ ಮಾಡುತ್ತಿದ್ದ.

ಇದೀಗ ಆತನನ್ನು ವಶಕ್ಕೆ ಪಡೆದು ದುಕೊಂಡು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ವರ್ಕ್ ಶಾಪ್‌ಗೆ ನೀರು ನುಗ್ಗಿ ಅಪಾರ ಹಾನಿ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವರ್ಕ್ ಶಾಪ್‌ಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಮಂಗಳೂರು ನಗರ ಹೊರವಲಯದ ಕುಲಶೇಖರದ ಬಜ್ಜೋಡಿ ಎಂಬಲ್ಲಿ ನಡೆದಿದೆ.ಭಾರೀ ಮಳೆ ಹಿನ್ನಲೆ ವರ್ಕ್ ಶಾಪ್...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...