Connect with us

ವೆನ್ಲಾಕ್‌ ಜಿಲ್ಲಾ ಆಸ್ಪತ್ರೆಯಲ್ಲಿ ಸಮುದಾಯ ಸಹಾಯ ಕೇಂದ್ರ ಕಾರ್ಯಾರಂಭ.

Published

on

ವೆನ್ಲಾಕ್‌ ಜಿಲ್ಲಾ ಆಸ್ಪತ್ರೆಯಲ್ಲಿ ಸಮುದಾಯ ಸಹಾಯ ಕೇಂದ್ರ ಕಾರ್ಯಾರಂಭ

ಮಂಗಳೂರು : ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ದಕ್ಷಿಣ ಜಿಲ್ಲಾ ಶಾಖೆ ಯುವ ರೆಡ್ ಕ್ರಾಸ್, ಮಂಗಳೂರು ವಿಶ್ವವಿದ್ಯಾಲಯ ಹಾಗು ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ಸಮುದಾಯ ಸಹಾಯ ಕೇಂದ್ರದ” ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ವೆನ್ಲಾಕ್ ಜಿಲ್ಲಾ ಆಸ್ಪತೆಯ ಒಪಿಡಿ ಬ್ಲಾಕ್‍ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ದೂರು ಊರುಗಳಿಂದ ರೋಗಿಗಳು ಚಿಕಿತ್ಸೆಗಾಗಿ ಆಗಮಿಸುತ್ತಾರೆ.

ಇವರಿಗೆ ಉತ್ತಮ ಚಿಕಿತ್ಸೆ ಹಾಗು ಮಾಹಿತಿಯನ್ನು ಒದಗಿಸುವ ದೃಷ್ಟಿಯಿಂದ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸಮುದಾಯ ಸಹಾಯ ಕೇಂದ್ರಕ್ಕೆ ಚಾಲನೆಯನ್ನು ನೀಡಲಾಗಿದೆ.

ಇಲ್ಲಿ ಜನರಿಗೆ ವೈದ್ಯಕೀಯ ಸೇವೆಗಳ ಕುರಿತು ಮಾಹಿತಿ ಪಡೆಯಲು ಅವಕಾಶವಿದೆ ಅಂತ ಅವರು ಹೇಳಿದರು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್,ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಹರೀಶ್ ಕುಮಾರ್, ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೋ.ಪಿ.ಎಸ್ ಯಡಪಡಿತ್ತಾಯ , ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ .ರೂಪೇಶ್ ಸೇರಿದಂತೆ ಇನ್ನೀತರರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಸಾಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ ಡಾ ನಾ ಡಿ ಸೋಜ ಅಂತಿಮ ದರ್ಶನ

Published

on

ಮಂಗಳೂರು : ನಾಡಿನ ಹಿರಿಯ ಸಾಹಿತಿ ಡಾ ನಾ ಡಿ ಸೋಜ ಅವರು ತಮ್ಮ 87ರ ಹರೆಯದಲ್ಲಿ ವಯೋಸಹಜ ಅನಾರೋಗ್ಯದಿಂದ ರವಿವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

75ಕ್ಕೂ ಹೆಚ್ಚು ಕಾದಂಬರಿಗಳನ್ನು ಬರೆದಿರುವ ಇವರ ಮಂಜಿನ ಕಾನು, ಈ ನೆಲ ಈ ಜಲ, ಕೆಂಪು ತ್ರಿಕೋನ, ನೆಲೆ, ಗಾಂಧಿ ಬಂದರು, ದ್ವೀಪ, ಜೀವಕಳೆ, ಚೆನ್ನೈ ಚೆನ್ನಮ್ಮ ಚೆನ್ನಮ್ಮಾಜಿ ಪ್ರಸಿದ್ದ ಕಾದಂಬರಿಗಳು.

1964ರಲ್ಲಿ ಡಿಸೋಜರ ಮೊದಲ ಕಾದಂಬರಿ ‘ಬಂಜೆ ಬೆಂಕಿ’ ಪ್ರಕಟಗೊಂಡಿತ್ತು. ಇವರು ಬರೆದ ಮುಳುಗಡೆ, ಕೊಳಗ, ಒಳಿತನ್ನು ಮಾಡಲು ಬಂದವರು, ಬಣ್ಣ ಪಾದರಿಯಾಗುವ ಹುಡುಗ, ‘ಇಬ್ಬರು ಮಾಜಿಗಳು’ ಮುಂತಾದ ಕಾದಂಬರಿಗಳು ಕುವೆಂಪು ವಿಶ್ವ ವಿದ್ಯಾನಿಲಯ, ಬೆಂಗಳೂರು ವಿವಿ, ಮಂಗಳೂರು ವಿವಿ ಮತ್ತು ಧಾರವಾಡದ ಕರ್ನಾಟಕ ವಿವಿಯ ಪಠ್ಯಪುಸ್ತಕಗಳಾಗಿಯೂ ಆಯ್ಕೆಯಾಗಿದೆ.

ಇದನ್ನೂ ಓದಿ: ಮಂಗಳೂರು : ಎನ್‌ಸಿಸಿಯ ರಾಷ್ಟ್ರಮಟ್ಟದ ಪ್ಯಾರಾ ಜಂಪ್‌ನಲ್ಲಿ ತೇರ್ಗಡೆಯಾದ ಗ್ರಾಮೀಣ ಪ್ರತಿಭೆ

ಕೇಂದ್ರ ಸಾಹಿತ್ಯ ಅಕಾಡಮಿಯ ಬಾಲ ಸಾಹಿತ್ಯ ಪುರಸ್ಕಾರ,ಸೇರಿದಂತೆ ನೂರಾರು ಪ್ರಶಸ್ತಿಗಳನ್ನು ಇವರು ಪಡೆದಿದ್ದಾರೆ. ಇವರು ಬರೆದ ದ್ವೀಪ ಕೃತಿ ಸಿನೆಮಾವಾಗಿ ಅದಕ್ಕೆ ರಾಷ್ಟ್ರ ಪ್ರಶಸ್ತಿಯೂ ಬಂದಿತ್ತು. ಮುಂಬೈಯ ಅಖಿಲ ಭಾರತ ಸಂಸ್ಕೃತಿ ಸಮ್ಮೇಳನದ ಅಧ್ಯಕ್ಷತೆ, ಮಡಿಕೇರಿಯಲ್ಲಿ ನಡೆದ 80ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರೂ ಆಗಿದ್ದರು.

ಅಗಲಿದ ಸಾಹಿತಿಯ ಅಂತಿಮ ದರ್ಶನ ಇಂದು ಮುಂಜಾನೆ 10ರಿಂದ 3 ಗಂಟೆಯವರೆಗೆ ಸಾಗರದ ಗಾಂಧಿ ಮೈದಾನದಲ್ಲಿ ಅವಕಾಶ ಇದ್ದು, 4 ಗಂಟೆಗೆ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Continue Reading

LATEST NEWS

ಶೀತ, ಜ್ವರವಿದ್ದರೆ ಸಾರ್ವಜನಿಕ ಸ್ಥಳಕ್ಕೆ ಹೋಗಬಾರದು; ರಾಜ್ಯಸರ್ಕಾರದ ಮಾರ್ಗಸೂಚಿ

Published

on

ಮಂಗಳೂರು/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಚೀನಾದಲ್ಲಿ ಹೊಸ ಹ್ಯೂಮನ್ ಮೆಟಾ ಫ್ನ್ಯೊಮೋ ವೈರಸ್ (ಹೆಚ್‌ಎಂಪಿವಿ) ಅಬ್ಬರಿಸಿ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಕೇಂದ್ರ ಸರ್ಕಾರವು ಚೀನಾದಲ್ಲಿ ಕಾಣಿಸಿಕೊಂಡಿರುವ ಹೆಚ್‌ಎಂಪಿವಿ ವೈರಸ್ ಬಗ್ಗೆ ಎಚ್ಚರಿಕೆಯಿಂದಿರುವಂತೆ ರಾಜ್ಯಗಳಿಗೆ ಸೂಚನೆ ನೀಡಿರುವ ಬೆನ್ನಲ್ಲೆ ರಾಜ್ಯ ಆರೋಗ್ಯ ಇಲಾಖೆ ವೈರಸ್‌ ನಿಯಂತ್ರಿಸಲು ಕೆಲವು ಮಾರ್ಗಸೂಚಿಗಳನ್ನು ಪಾಲಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡಿದೆ. ಅಲ್ಲದೆ, ಕರ್ನಾಟಕದಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲದ ಕಾರಣ ಆತಂಕ ಪಡುವ ಅಗತ್ಯವಿಲ್ಲ ಎಂದೂ ಹೇಳಿದೆ.

ಸರ್ಕಾರ ಮಾರ್ಗಸೂಚಿ ಹಾಗೂ ಮನವಿ ಇಂತಿದೆ:

  • ಜ್ವರ ಇದ್ದರೆ ಜನವಿರುವ ಪ್ರದೇಶಕ್ಕೆ ಹೋಗದಂತೆ ಹಾಗೂ ಅನಗತ್ಯ ಓಡಾಟ ತಪ್ಪಿಸಿ
  • ಆಗಾಗ್ಗ್ಯೆ ಕೈಗಳನ್ನೂ ಸಾಬೂನು ಹಾಗೂ ಸ್ಯಾನಿಟೈಸರ್‌ಗಳಿಂದ ಸ್ವಚ್ಛಗೊಳಿಸುತ್ತಿರಬೇಕು.
  • ಜ್ವರ, ಕೆಮ್ಮು, ನೆಗಡಿ ಇರುವವರು ಆದಷ್ಟು ಹೊರಗೆ ಓಡಾಡದೆ ಮನೆಯಲ್ಲೇ ಇದ್ದು, ಚಿಕಿತ್ಸೆ ಪಡೆಯಿರಿ.
  • ಇಂತಹವರು ಬಳಿಸಿದ ಟವಲ್ ಮತ್ತು ಬಟ್ಟೆಗಳನ್ನು ಬೇರೆಯವರು ಬಳಸದಿರಿ.
  • ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ತಪ್ಪಿಸಿ ಸ್ವಯಂ ಔಷಧಗಳನ್ನು ಸೇವಿಸದೆ ನೆಗಡಿ, ಕೆಮ್ಮು ಕಾಣಿಸಿಕೊಂಡರೆ ವೈದ್ಯರನ್ನು ಭೇಟಿ ಮಾಡಿ, ಚಿಕಿತ್ಸೆ ಪಡೆಯಿರಿ.
  • ಮನೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ, ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಿ.
  • ಪೌಷ್ಠಿಕಾಂಶವಿರುವ ಆಹಾರ ಸೇವಿಸಿ,
  • ಮಕ್ಕಳು ಹಾಗೂ ಹಿರಿಯರ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಿ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಡಿಸೆಂಬರ್‌ನಲ್ಲಿ ಸಾಮಾನ್ಯ ಶೀತ, ಐಎಲ್‌ಯ ಮತ್ತು ಸಾರಿ ಪ್ರಕರಣಗಳಲ್ಲಿ ಯಾವುದೇ ಗಮನಾರ್ಹ ಏರಿಕೆ ಇಲ್ಲ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಹೆಚ್‌ಎಂಪಿವಿ ಒಂದು ಉಸಿರಾಟದ ಕಾಯಿಲೆಯಾಗಿದ್ದು, ಚಳಿಗಾಲದಲ್ಲಿ ಶೀತ ಮತ್ತು ಜ್ವರದ ತರಹದ ಲಕ್ಷಣಗಳನ್ನು ಉಂಟು ಮಾಡುತ್ತದೆ, ವಿಶೇಷವಾಗಿ ಮಕ್ಕಳು ಮತ್ತು ವಯಸ್ಸಾದ ವ್ಯಕ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ರಾಜ್ಯದಲ್ಲಿ ಇದೂವರೆಗೆ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ. ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ನಿಭಾಯಿಸಲು ರಾಜ್ಯ ಸನ್ನದ್ಧವಾಗಿದೆ ಎಂದು ರಾಜ್ಯದ ಸಮಗ್ರ ರೋಗ ಕಣ್ಗಾವಲು ಕಾರ್ಯಕ್ರಮದ ಯೋಜನಾ ನಿರ್ದೇಶಕ ಡಾ. ಅನ್ಸಾರ್ ಅಹ್ಮದ್ ಹೇಳಿದ್ದಾರೆ.

Continue Reading

DAKSHINA KANNADA

ಎಡಪದವು : ಇರುಮುಡಿ ಕಟ್ಟಿ, ಶಬರಿಮಲೆಗೆ ಹೊರಟ ಅಯ್ಯಪ್ಪ ಮಾಲಾಧಾರಿಗಳು

Published

on

ಎಡಪದವು : ಶ್ರೀ ಅಯ್ಯಪ್ಪ ಮಂದಿರ , ಶ್ರೀರಾಮಾನಗರ ಎಡಪದವು ಇಲ್ಲಿನ ಅಯ್ಯಪ್ಪ ವೃತಾಧಾರಿಗಳ ಇರುಮುಡಿ ಕಟ್ಟುವ ಕಾರ್ಯ ಭಾನುವಾರ(ಡಿ.5) ನಡೆಯಿತು.

ಬೆಳಿಗ್ಗೆ ಗುರುಸ್ವಾಮಿಗಳ ಮಾರ್ಗದರ್ಶನದಲ್ಲಿ ಅಯ್ಯಪ್ಪ ಮಲಾಧಾರಿಗಳ ಇರುಮುಡಿ ಕಟ್ಟುವಿಕೆ ನಡೆಯಿತು. ಜೊತೆಗೆ ಭಜನಾ ತಂಡ ಹಾಗೂ ಸ್ಥಳೀಯರಿಂದ ಭಜನಾ ಸಂಕೀರ್ತನೆ ನೆರವೇರಿತು. ಬಳಿಕ ಮಹಾಪೂಜೆ ಹಾಗೂ ಅನ್ನಸಂತರ್ಪಣೆ ಜರುಗಿತು. ಸಾವಿರಾರು ಭಕ್ತಾಭಿಮಾನಿಗಳು ಪ್ರಸನ್ನ ಕಾಲದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ : ಅಯ್ಯಪ್ಪ ಮಾಲಾಧಾರಿಗಳು ಕಪ್ಪು ಬಟ್ಟೆ ಯಾಕೆ ಧರಿಸುತ್ತಾರೆ ಗೊತ್ತಾ?

ಸುಮಾರು 30 ವರ್ಷಗಳಿಂದ ಅಯ್ಯಪ್ಪ ಮಂದಿರ ಶ್ರೀ ರಾಮನಗರದಲ್ಲಿ ಭಕ್ತರು ಮಾಲೆ ಧರಿಸುತ್ತಾ ಬರುತ್ತಿರುವುದು ವಿಶೇಷವೇ ಸರಿ. ಈ ಬಾರಿ 54 ಜನ ಅಯ್ಯಪ್ಪ ಭಕ್ತರು ಮಾಲೆ ಧರಿಸಿ, ಶ್ರದ್ಧಾ ನಿಷ್ಠೆಯಿಂದ ವೃತಾಚಣೆ ಮಾಡಿ ಶಬರಿಮಲೆ ಯಾತ್ರೆಗೆ ತೆರಳಿದ್ದಾರೆ.

ಸಂಜೆ 4.30 ರ ಸುಮಾರಿಗೆ ಅಯ್ಯಪ್ಪ ಸ್ವಾಮಿ ಪೂಜೆ ನೆರವೇರಿದ್ದು, ಅದಾದ ಬಳಿಕ ವೃತಾಧಾರಿಗಳು ಕಟ್ಟು ಹೊತ್ತು ಶಬರಿಮಲೆ ಯಾತ್ರೆಗೆ ತೆರಳಿದರು.

Continue Reading

LATEST NEWS

Trending

Exit mobile version