Connect with us

DAKSHINA KANNADA

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾಂಗ್ರೆಸ್ ನಾಯಕ ಮಿಥುನ್ ರೈ ವಿರುದ್ಧ ದೂರು..!

Published

on

ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾಂಗ್ರೆಸ್ ನಾಯಕ ಮಿಥುನ್ ರೈ ವಿರುದ್ಧ ದೂರು..!

ಪುತ್ತೂರು: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ವಿರುದ್ಧ ದೂರು ದಾಖಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಹಿಂದೂ ಜಾಗರಣ ವೇದಿಕೆಯ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ ಮಿಥುನ್ ರೈ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಯೋಗಿ ಆದಿತ್ಯನಾಥ್ ಹಿಂದೂ ಧರ್ಮದ ಹಾಗೂ ನಾಥ ಪಂಥದ ಗುರುವಾಗಿದ್ದು, ಸ್ವಾಮೀಜಿ ಸ್ಥಾನದಲ್ಲಿರುವ ಮಿಥುನ್ ರೈ ಅವಹೇಳನಕಾರಿಯಾಗಿ ಮಾತನಾಡಿರುವುದು ಹಿಂದೂ ಧರ್ಮದ ಅನುಯಾಯಿಗಳ ಭಾವನೆಗೆ ಧಕ್ಕೆಯಾಗಿದೆ ಎಂದೂ ದೂರಿನಲ್ಲಿ ಆರೋಪಿಸಲಾಗಿದೆ.

ಉತ್ತರಪ್ರದೇಶದ ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಸಂಬಂಧ ಮಂಗಳೂರಿನ ತೊಕ್ಕೊಟ್ಟುವಿನಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಿಥುನ್ ರೈ ಮಾತನಾಡಿದ್ದರು.

ಯೋಗಿ ಆದಿತ್ಯನಾಥ ಒಬ್ಬ ಗಂಡಸಾ, ಆವ ಒರ್ವ ಆಯೋಗ್ಯ, ಅವ ಒಬ್ಬ ಹಿಂದೂ ಎಂದು ಹೇಳಲು ನಾಚಿಕೆಯಾಗುತ್ತದೆ. ಮಂಗಳೂರಿಗೆ ಬಂದರೆ ಆತನ ಮುಖಕ್ಕೆ ಮಸಿ ಬಳಿಯುವುದಾಗಿ ಹೇಳಿಕೆ ನೀಡಿದ್ದರು.

ಈ ಹೇಳಿಕೆ ಇದೀಗ ವಿವಾದ ಬಿಂದುವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ವಾಕ್ಸಾಮರಕ್ಕೆ ವೇದಿಕೆಯಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

DAKSHINA KANNADA

ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ

Published

on

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಮಂಗಳೂರಿನಲ್ಲಿ ತಮ್ಮ ಮತ ಚಲಾಯಿಸಿದ್ದಾರೆ. ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಗೆ ತನ್ನ ಪತ್ನಿ ಹಾಗೂ ಮಗಳ ಜೊತೆ ಆಗಮಿಸಿ ಮತ ಚಲಾಯಿಸಿದ್ದಾರೆ.

ಮುಂಜಾನೆ ಏಳುಗಂಟೆಗೆ ಮತಗಟ್ಟೆಗೆ ಆಗಮಿಸಿದ ಪದ್ಮರಾಜ್ ಅವರು ಬರುವ ವೇಳೆಗೆ ಜನರು ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು. ಹೀಗಾಗಿ ಪದ್ಮರಾಜ್ ಹಾಗೂ ಅವರ ಪತ್ನಿ ಮತ್ತು ಮಗಳು ಸರತಿ ಸಾಲಿನಲ್ಲಿ ನಿಂತೇ ಮತ ಚಲಾಯಿಸಿದ್ದಾರೆ. ಪದ್ಮರಾಜ್ ಆಗಮಿಸುವ ವೇಳೆ ಅವರ ಸಾಕಷ್ಟು ಅಭಿಮಾನಿಗಳು ಮತಗಟ್ಟೆಯ  ಹೊರಗೆ ನಿಂತು ಅವರಿಗೆ ಶುಭ ಕೋರಿದ್ದಾರೆ.

 

ಮತದಾನ ಮಾಡಿದ ಪದ್ಮರಾಜ್ ಬಳಿಕ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಣೆಗೆ ತೆರಳಿದ್ದಾರೆ.

Continue Reading

LATEST NEWS

Trending