Saturday, August 20, 2022

ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗಿ ಒಡೆತನಕ್ಕೆ ಖಂಡನೆ; ಕೆಂಜಾರಿನಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಖಾಸಗಿ ಒಡೆತನಕ್ಕೆ ಖಂಡನೆ; ಕೆಂಜಾರಿನಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು:ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಂಬಯಿ ಮೂಲದ ಅದಾನಿ ಗ್ರೂಪಿಗೆ ವಹಿಸಿರುವುದನ್ನು ಖಂಡಿಸಿ, ನಗರದ ಕೆಂಜಾರಿನ ಮುಖ್ಯ ದ್ವಾರದ ಬಳಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಬೃಹತ್ ಪ್ರತಿಭಟನೆ ನಡೆಯಿತು.

ಈ ಸಂದರ್ಭ ಮಾಜಿಉಸ್ತುವಾರಿ ಸಚಿವ ಬಿ. ರಮಾನಾಥ ರೈ  ಮಾತನಾಡಿ ಇನ್ನು ಈ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಕೇಂದ್ರ ಸರ್ಕಾರವು ಈಗಾಗಲೇ ಹಲವು ವಿಚಾರಗಳಲ್ಲಿ ಕರಾವಳಿ ಜಿಲ್ಲೆಗೆ ಮೋಸ ಮಾಡಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಂಗಳೂರು ಏರ್ ಪೋರ್ಟ್  ವಿಚಾರಕ್ಕೆ ಸಂಬಂಧ ಪಟ್ಟಂತೆ ಕರಾವಳಿಗೆ ಮತ್ತೊಮ್ಮೆ ಮೋಸ ಮಾಡಿದೆ. ಮೋದಿ ಸರಕಾರದ ಜನವಿರೋಧಿ ನೀತಿಯನ್ನು ಜಿಲ್ಲೆಯ ಜನರು ಕ್ಷಮಿಸಲಾರರು ಎಂದು ಹೇಳಿದರು.

ದ.ಕ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಮಾತನಾಡಿ ಸುಮಾರು 40 ವರ್ಷಗಳ ಹಿಂದೆ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ನಿರ್ಮಾಣವಾದ ಜಿಲ್ಲೆಯ ಸ್ವಾಭಿಮಾನದ ಸಂಕೇತವಾದ ವಿಮಾನ ನಿಲ್ದಾಣವನ್ನ ಕೇಂದ್ರ ಸರಕಾರ ನಿರ್ವಹಣೆ ನೆಪದಲ್ಲಿ ಅದಾನಿ ಕಂಪನಿಗೆ ಮಾರಾಟ ಮಾಡಿದೆ.

ಮುಂದಿನ ದಿನಗಳಲ್ಲಿ ವಿಮಾನ ನಿಲ್ದಾಣಕ್ಕೆ ಕರಾವಳಿಯ ಯುಗ ಪುರುಷರಾದ ಕೋಟಿ ಚನ್ನಯರ ಹೆಸರು ನಾಮಕರಣ ಮಾಡಬೇಕು ಎಂದು ದ.ಕ ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೀಥುನ್ ರೈ ಆಗ್ರಹಿಸಿದರು.ಇನ್ನೂ ಪ್ರತಿಭಟನೆಯಲ್ಲಿ ಮಾಜಿ ಸಚಿವ ಬಿ.ರಮಾನಥ ರೈ.ಮಾಜಿ ಶಾಸಕ ಜೆ.ಆರ್ ಲೋಬೋ.ಮೋಯಿದ್ದಿನ್ ಬಾವ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics