Connect with us

  BANTWAL

  ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಕೆಸರುಮಯ- ಚಾಲಕರ ಗೋಳಾಟ..!!

  Published

  on

  ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದ ರಸ್ತೆಯ ಅವ್ಯವಸ್ಥೆಯನ್ನು ಹೇಳಲು ಅಸಾಧ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಲು ಕೆಸರು ಗದ್ದೆಯಾಗಿದೆ. 

  ಬಂಟ್ವಾಳ: ಕಳೆದ ಒಂದು ವಾರದಿಂದ ಸುರಿಯುವ ಮಳೆಗೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದ ರಸ್ತೆಯ ಅವ್ಯವಸ್ಥೆಯನ್ನು ಹೇಳಲು ಅಸಾಧ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಲು ಕೆಸರು ಗದ್ದೆಯಾಗಿದೆ.

  ರಸ್ತೆ ಅಂತ ಬೋರ್ಡ್ ಹಾಕಿದರೆ ಮಾತ್ರ ನೀವು ರಸ್ತೆ ಎಂದು ನಂಬಬಹುದು.

  ಅಂತಹ ದುಸ್ಥಿತಿಯಲ್ಲಿರುವ ಕಲ್ಲಡ್ಕದ ಅವಸ್ಥೆಯನ್ನು ಹೇಳುವುದು ಯಾರ ಬಳಿ, ಕೇಳುವವರು ಯಾರು ? ಎಂಬ ಚಿಂತೆಯಲ್ಲಿದ್ದಾರೆ.

  ಮನೆಯ ಅಂಗಳ ತುಂಬಾ ಕೆಸರು ನೀರು, ಅಂಗಡಿ ಬಾಗಿಲು ತೆರೆದರೆ ಒಳಗೆ ನುಗ್ಗುತ್ತದೆ ಕೆಸರು, ನಡೆದುಕೊಂಡು ಹೋಗಲು ದಾರಿಯಿಲ್ಲ, ನೀರು ಹರಿದು ಹೋಗಲು ಚರಂಡಿಯಿಲ್ಲ, ನಿತ್ಯ ಟ್ರಾಫಿಕ್ ಜಾಮ್ ಇದು ನಮ್ಮೂರ ಕಲ್ಲಡ್ಕದ ಸಮಸ್ಯೆ.

  ವಾಹನಗಳ ಓಡಾಟದ ಭರಾಟೆಯ ನಡುವೆ ಇಕ್ಕಟ್ಟಾದ ಸರ್ವೀಸ್ ರಸ್ತೆಯಲ್ಲಿ ಓವರ್ ಟೇಕ್ ಮಾಡುವುದರಿಂದ ಅಪಘಾತವೇ ಮೊದಲಾದ ವಿಷಯಗಳನ್ನು ಇಟ್ಟುಕೊಂಡು ಕೆಲ ದಿನಗಳ ಹಿಂದೆ ರಸ್ತೆ ದುರಸ್ತಿಗೊಳಿಸಬೇಕು.

  ಧೂಳಿನಿಂದ ಮುಕ್ತಿ ನೀಡಬೇಕು ಎಂದು ಆಗ್ರಹಿಸಿ ಕಲ್ಲಡ್ಕದಲ್ಲಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.

  ಆಗಸ್ಟ್ ಅಂತ್ಯದೊಳಗೆ ಕಾಮಗಾರಿ ಆರಂಭಿಸಿ ಎಲ್ಲದಕ್ಕೂ ಮುಕ್ತಿ ನೀಡುತ್ತೇವೆ ಎಂದು ಗುತ್ತಿಗೆದಾರ ಕಂಪನಿ ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆಗೆ ಅಂತ್ಯ ದೊರಕಿತ್ತು.

  ಆದರೆ ಇದೀಗ ಕಾಮಗಾರಿ ನಡೆಸಲು ಮಳೆ ಅಡ್ಡಿಯಾಗಿರುವುದು ಒಂದು ಸಮಸ್ಯೆಯಾದರೆ, ರಸ್ತೆಯಲ್ಲಿ ನೀರು ಹರಿದುಹೋಗಲು ಜಾಗವೇ ಇಲ್ಲದ ಕಾರಣ, ಮೂರು ನಾಲ್ಕಿಂಚು ನೀರು ನಿಲ್ಲುವುದು ಹಾಗೂ ಇಡೀ ರಸ್ತೆ ಕೆಸರುಮಯವಾಗಿ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳ ಜೀವಕ್ಕೆ ಅಪಾಯ ತಂದೊಡ್ಡಿರುವುದು ಇನ್ನೊಂದು ಸಮಸ್ಯೆ.

  ಶಾಲೆ, ಕಾಲೇಜುಗಳಿಗೆ ಬಸ್ಸಿಗಾಗಿ ಕಾಯುವವರು ಸಂಕಟ ಅನುಭವಿಸುತ್ತಿದ್ದಾರೆ.

  ಇಷ್ಟಾದರೂ ಘನಗಾತ್ರದ ವಾಹನಗಳು ವೇಗವಾಗಿ ಹೋಗುವುದನ್ನು ನಿಲ್ಲಿಸಿಲ್ಲ.

  ಆದ್ದರಿಂದ ಕೂಡಲೇ ಸಂಬಂಧಪಟ್ಟವರು ಇದರತ್ತ ಗಮನ ಹರಿಸಬೇಕಾಗಿದೆ.

  BANTWAL

  ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

  Published

  on

  ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

  ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

  ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

  ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

  Continue Reading

  BANTWAL

  ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

  Published

  on

  ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

  ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

  Continue Reading

  BANTWAL

  ಬಂಟ್ವಾಳ: ಹಂಚಿಕಟ್ಟೆಯಲ್ಲಿ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸೋರಿಕೆ

  Published

  on

  ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ವಗ್ಗ ಸಮೀಪದ ಹಂಚಿಕಟ್ಟೆಯಲ್ಲಿ ಗೇಲ್ ಕಂಪನಿಯ ಸಿಎನ್‌ಜಿ ಗ್ಯಾಸ್ ಸಾಗಾಟದ ಲಾರಿಯಲ್ಲಿದ್ದ ಸಿಎನ್‌ಜಿ ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾದ ಘಟನೆ ನಡೆದಿದೆ.

  ಸಿಎನ್‌ಜಿ ಸೋರಿಕೆ ಗಮನಕ್ಕೆ ಬಂದ ತಕ್ಷಣ ಲಾರಿ ಚಾಲಕ ಹೆದ್ದಾರಿ ಬದಿಗೆ ನಿಲ್ಲಿಸಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿದ್ದಾರೆ.

  ಅದಾಗಲೇ ಸೋರಿಕೆಯನ್ನು ಚಾಲಕ ಹಾಗೂ ಸ್ಥಳೀಯರು ಸೇರಿ ತಡೆದಿದ್ದಾರೆ.

  Continue Reading

  LATEST NEWS

  Trending