Sunday, November 27, 2022

ಪುತ್ತೂರು: ಹಿಂದೂ ದೇವರ ಬಗ್ಗೆ ತುಚ್ಛವಾಗಿ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತೆ: ಬಂಧನಕ್ಕೆ ಆಗ್ರಹ..!

ಪುತ್ತೂರು: ಸಾಮಾಜಿಕ ಜಾಲತಾಣದ ಕ್ಲಬ್‌ಹೌಸ್‌ನಲ್ಲಿ ಹಿಂದೂಗಳ ಆರಾಧ್ಯ ದೇವರುಗಳಾದ ಶ್ರೀರಾಮ, ಸೀತೆ ಹಾಗೂ ಹನುಮಂತನ ಬಗ್ಗೆ ಅತ್ಯಂತ ತುಚ್ಛವಾಗಿ ಮಾತನಾಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.


ಸಾಮಾಜಿಕ ಜಾಲತಾಣದ ಕ್ಲಬ್‌ ಹೌಸ್‌ನಲ್ಲಿ ನಡೆಸಿದ ಚರ್ಚೆಯೊಂದರಲ್ಲಿ ಭಾಗವಹಿಸಿದ್ದ ಕಾಂಗ್ರೆಸ್‌ ಐಟಿ ಸೆಲ್‌ನ ಕಾರ್ಯದರ್ಶಿ ಹಾಗೂ ವಕೀಲೆ ಶೈಲಜಾ ಅಮರನಾಥ, ಅನಿಲ್‌ ಹಾಗೂ ಇತರರು ನಡೆಸಿದ ಚರ್ಚೆಯಲ್ಲಿ ರಾಮ ಸೀತೆಗಿಂತ ಹನುಮಂತನನ್ನೇ ಯಾವಾಗಲೂ ತಬ್ಬಿಕೊಂಡಿರುತ್ತಾನೆ.

ಅವನೇನು ಸಲಿಂಗಕಾಮಿಯಾ ಎಂದು ಕೀಳು ಭಾಷೆಯಲ್ಲಿ ಪ್ರಶ್ನಿಸಿದ್ದು, ಜೊತೆಗೆ ಸೀತಾಮಾತೆಗೆ ಚಿಕನ್‌, ಮಟನ್‌, ಫ್ರೆಂಚ್‌ ಫ್ರೈಡ್‌ ರೈಸ್‌ ಬಹಳ ಖುಷಿಯಿಂದ ತಿಂದು ಬರುತ್ತೇನೆ. ನಮ್ಮ ರಾಮನಿಗೆ ಹಂದಿ ಮಾಂಸ ಎಂದರೆ ಬಹಳ ಇಷ್ಟ ಎಂದು ಹೇಳಿರುವುದು ದಾಖಲಾಗಿದೆ.


ಈ ವಿವಾದಾತ್ಮಕ ಆಡಿಯೋ ತುಣುಕು ವೈರಲ್‌ ಆಗಿದ್ದು, ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಪುತ್ತೂರು ಮತ್ತು ವಿಶ್ವ ಹಿಂದೂ ಪರಿಷತ್‌ ಬಜರಂಗದಳ ಜಂಟಿಯಾಗಿ ಪುತ್ತೂರು ನಗರ ಪೊಲೀಸ್‌ ಠಾಣೆಗೆ ಲಿಖಿತ ದೂರು ನೀಡಿದ್ದಾರೆ.

 

ಹಿಂದೂ ದೇವರುಗಳ ವಿರುದ್ಧ ಕೆಟ್ಟ ಪದ ಬಳಸಿ ಅವಹೇಳನ ಮಾಡಿದ ಧರ್ಮ ಭಾವನೆಗಳನ್ನು ತಂದು ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಕೆರಳಿಸುವ ಪ್ರಯತ್ನ ಮಾಡಲಾಗಿದೆ. ಆದ್ದರಿಂದ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ದೂರಿನಲ್ಲಿ ಆಗ್ರಹಿಸಲಾಗಿದೆ.

ಘಟನೆಯ ಬೆನ್ನಲ್ಲೇ ಹಿಂದೂ ಕಾರ್ಯಕರ್ತರು ಶೈಲಜಾ ಅಮರನಾಥ್ ಮನೆಗೆ ದಾಳಿ ನಡೆಸಿ ಕಿಟಕಿ ಗಾಜುಗಳನ್ನು ಹಾನಿಗೊಳಿಸಿದೆ. ಸ್ಥಳಕ್ಕೆ ಪೊಲಿಸರು ಭೇಟಿ ನೀಡಿ ಪರಿಶೀಲಿಸಿದ್ಧಾರೆ.

ಈ ಹಿಂದೆ ಕೂಡಾ ಪ್ರಧಾನಿ ಮೋದಿ, ಅಮಿತ್ ಷಾ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದರು.

LEAVE A REPLY

Please enter your comment!
Please enter your name here

Hot Topics

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...