Connect with us

LATEST NEWS

ಪ್ರತಿಭಟನೆ ಮೂಲಕ ಕಾಂಗ್ರೆಸ್‌ EDಯನ್ನು ಬ್ಲ್ಯಾಕ್‌ಮೇಲ್‌ ಮಾಡುತ್ತಿದೆ: ದ.ಕ ಬಿಜೆಪಿ

Published

on

ಮಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಪ್ರತಿಭಟನೆ ಮೂಲಕ ದೇಶದ ಅತ್ಯುನ್ನತ ಸ್ವತಂತ್ರ ತನಿಖಾ ಸಂಸ್ಥೆಯನ್ನು ಬ್ಲ್ಯಾಕ್‌ಮೇಲ್‌ ಮಾಡಲು ಕಾಂಗ್ರೆಸ್‌ ದೇಶಾದ್ಯಂತ ಪ್ರತಿಭಟನೆ ಮಾಡುತ್ತಿದೆ ಎಂದು ದ.ಕ ಜಿಲ್ಲಾ ಬಿಜೆಪಿ ಆರೋಪಿಸಿದೆ.


ಈ ಬಗ್ಗೆ ಮಂಗಳೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ.ಕ ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ ಶೇಣವ ಮಾತನಾಡಿ, ಕಾಂಗ್ರೆಸ್‌ ದೇಶಾದ್ಯಂತ ದೊಂಬರಾಟ ಮಾಡುತ್ತಿದೆ. ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಸೋನಿಯಾ, ರಾಹುಲ್‌ ಜಾಮೀನಿನಲ್ಲಿದ್ದಾರೆ.

ಜಾಮೀನು ನೀಡುವಾಗ ತನಿಖೆಗೆ ಸಹಕರಿಸಬೇಕೆಂದು ಹೇಳಿ ಜಾಮೀನು ನೀಡುತ್ತದೆ. ಈಗ ತನಿಖೆಗೆ ಕರೆದಿದ್ದಾರೆ ಅಷ್ಟೆ. ಸದ್ಯ ಸೋನಿಯಾ ಆಸ್ಪತ್ರೆಯಲ್ಲಿರುವುದರಿಂದ ರಾಹುಲ್‌ ಗಾಂಧಿಯನ್ನು ಕಾನೂನಿನಂತೆ ವಿಚಾರಣೆಗೆ ಕರೆದಿದ್ದಾರೆ.

ಆದರೆ ಕಾಂಗ್ರೆಸ್‌ ದೇಶಾದ್ಯಂತ ಪ್ರತಿಭಟನೆ ನಡೆಸಿ ಒತ್ತಡ ತಂತ್ರ ಮಾಡುತ್ತಿದೆ. ಇವರ ಒತ್ತಡವನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಈ ದೇಶದ ಕಾನೂನು ಎಲ್ಲರಿಗೂ ಒಂದೇ. ನೀವು ಕಾನೂನಿಗಿಂತ ಮೀರಿದವರಾ ಎಂದು ಪ್ರಶ್ನಿಸಿದರು.


ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯದ ಸಂಸದ ಡಿ.ಕೆ ಸುರೇಶ್‌ ಪೊಲೀಸರಿಗೆ ಬೆದರಿಕೆ ಹಾಕಿ ನಮ್ಮನ್ನು ದೂಡಿ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ನಾವೂ ಸಹ ಈ ಹಿಂದೆ ಪ್ರತಿಭಟನೆ ನಡೆಸಿದಾಗ ನಮ್ಮನ್ನು ಸಹ ಎಳೆದುಕೊಂಡು ಹೋಗಿದ್ದಾರೆ, ಅಂಗಿ ಹರಿದು ಹಾಕಿದ್ದಾರೆ.

ಗಾಂಧಿ ಕುಟುಂಬ ಈ ದೇಶವನ್ನು 53 ವರ್ಷಗಳ ಕಾಲ ರಾಜರ ಪರಂಪರೆಯಂತೆ ದೇಶ ಆಳಿದ್ದಾರೆ. ನಾಳೆ ಜಾರಿ ನಿರ್ದೇಶನಾಲಯ ನನಗೂ ಅಥವಾ ಮೋದಿ, ಅಮಿತ್‌ ಷಾಗೂ ಬರಬಹುದು. ಅದೊಂದು ಸ್ವತಂತ್ರ ಸಂಸ್ಥೆ ಎಂದರು.

LATEST NEWS

ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?

Published

on

ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.

ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.

ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.

ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್‌ಟೈಮ್‌ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.

ಈ ಸೀರಿಯಲ್‌ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್​ ತಂಡ ಸಂತಸ ಹಂಚಿಕೊಂಡಿದೆ.

Continue Reading

LATEST NEWS

ಕೊಡಗು: ಮದುವೆ ಊಟ ಸೇವಿಸಿ ಅಸ್ವಸ್ಥ.. ಆಸ್ಪತ್ರೆ ಸೇರಿದ 150ಕ್ಕೂ ಹೆಚ್ಚು ಜನರು

Published

on

ಕೊಡಗು: ಮದುವೆಯಲ್ಲಿ ಊಟ ಮಾಡಿದ ನೂರಾರು ಜನತೆ ಅಸ್ವಸ್ಥಗೊಂಡ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದಲ್ಲಿ ನಡೆದಿದೆ. ಪರಿಣಾಮ ಸುಮಾರು 150 ಕ್ಕೂ ಹೆಚ್ಚು ಜನರು ಆಸ್ಪತ್ರೆ ಸೇರಿದ್ದಾರೆ.

ನಿನ್ನೆ ಮಧ್ಯಾಹ್ನ ಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಜನರು ಸೇವಿಸಿದ್ದಾರೆ. ಊಟ ಸೇವಿಸಿದ ಬಳಿಕ ಸಂಜೆಯ ವೇಳೆಗೆ ಹಲವರಲ್ಲಿ ವಾಂತಿ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ ಜನರು ಕೊಡಗಿನ ಕುಶಾಲನಗರ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಸುಮಾರು 150 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಕುಶಾಲನಗರ ಖಾಸಗಿ ಆಸ್ಪತ್ರೆಯಲ್ಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪಿರಿಯಾಪಟ್ಟಣ ಆಸ್ಪತ್ರೆಯಲ್ಲೂ ಹಲವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊಡಗು ಆರೋಗ್ಯಾಧಿಕಾರಿ ಕುಶಾಲನಗರ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮದುವೆ ಊಟದಿಂದಾಗಿ ಕುಶಾಲನಗರದ ಆಸ್ಪತ್ರೆ ಕ್ಲೀನಿಕ್ ಗಳು ಫುಲ್ ಆಗಿವೆ. ಅತ್ತ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗದೆ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೂ ಹೊಗಿದ್ದಾರೆ. ಆಸ್ಪತ್ರೆಗೆ ಮಡಿಕೇರಿ ಕ್ಷೇತ್ರದ ಶಾಸಕ ಮಂತರ್ ಗೌಡ ಭೇಟಿ‌ ನೀಡಿ ಜನರ ಆರೋಗ್ಯ ವಿಚಾರಿಸಿದ್ದಾರೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

LATEST NEWS

Trending