Connect with us

DAKSHINA KANNADA

ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್ ಕೊಡುವುದು ಗ್ಯಾರಂಟಿ ಕಾರ್ಡ್‌ ಅಲ್ಲ – ವಿಸಿಟಿಂಗ್ ಕಾರ್ಡ್‌ : ಸಿಎಂ ಬೊಮ್ಮಾಯಿ ವ್ಯಂಗ್ಯ..!

Published

on

ರಾಜ್ಯದಲ್ಲಿ ಚುನಾವಣೆ ಸಂದರ್ಭ ಕಾಂಗ್ರೆಸ್ ನಾಯಕರು ಕೊಡುವುದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ವಿಸಿಂಟಿಗ್ ಕಾರ್ಡ್ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ ವಾಡಿದ್ದಾರೆ.

ಮಂಗಳೂರು : ರಾಜ್ಯದಲ್ಲಿ ಚುನಾವಣೆ ಸಂದರ್ಭ ಕಾಂಗ್ರೆಸ್ ನಾಯಕರು ಕೊಡುವುದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ವಿಸಿಂಟಿಗ್ ಕಾರ್ಡ್ ಎಂದು ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯ ವಾಡಿದ್ದಾರೆ.

ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನವನ್ನು ಉದ್ಘಾಟಿಸಲು ಮಂಗಳೂರಿಗೆ ಆಗಮಿಸದ್ದ ಮುಖ್ಯಮಂತ್ರಿಗಳು ಏರ್ಪೋರ್ಟಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ಬೇಸಗೆ ಕಾಲದಲ್ಲಿ ಅಲ್ಲಲ್ಲಿ ಕಂಡು ಬರುತ್ತಿರುವ ಕಾಡ್ಗಿಚ್ಚಿನ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ.

ವಾಯುಪಡೆಯ ಸಹಾಯವನ್ನು ಪಡೆಯುವ ಬಗ್ಗೆ ಚಿಂತನೆ ನಡೆದಿದೆ. ಅರಣ್ಯ ಇಲಾಖೆಗೆ ಹೆಲಿಕಾಫ್ಟರ್ ನೀಡುವ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ.

ಜಿಲ್ಲಾಧಿಕಾರಿಗಳ ಬಗ್ಗೆ ಈ ಬಗ್ಗೆ ಚರ್ಚಿಸಲಾಗಿದೆ ಎಂದರು.

ಚುನಾವಣೆ ಬರುವ ಸಂದರ್ಭದಲ್ಲಿ ಹಲವು ಮಂದಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುವುದು ಮಾಮೂಲಾಗಿದೆ.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬಗ್ಗೆ ಯಾರಿಗೂ ಪಕ್ಷದಲ್ಲಿ ಭಿನ್ನಾಭಿಪ್ರಾಯವಿಲ್ಲ.

ಸೋಮಣ್ಣ ಅವರಿಗೂ ಭಿನ್ನಾಭಿಪ್ರಾಯ ಇಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ ಎಂದರು.

ಕಾಂಗ್ರೆಸ್ಸಿನ ಗ್ಯಾರೆಂಟಿ ಕಾರ್ಡಿನ ಬಗ್ಗೆ ವ್ಯಂಗ್ಯ ಮಾಡಿದ ಅವರು ಇದು ಗ್ಯಾರಂಟಿ ಕಾರ್ಡ್‌ ಅಲ್ಲ ವಿಸಿಟಿಂಗ್ ಕಾರ್ಡ್‌ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ವಿ ಸುನಿಲ್ ಕುಮಾರ್, ಎಸ್. ಅಂಗಾರ, ಕೋಟ ಶ್ರೀನಿವಾಸ್ ಪೂಜಾರಿ, ಸೋಮಶೇಖರ್, ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದರು.

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending