Connect with us

DAKSHINA KANNADA

ಕಾಂಗ್ರೆಸ್ ಸರಕಾರದಿಂದ ಭಯೋತ್ಪಾದಕರಿಗೆ ಕುಮ್ಮಕ್ಕು ಕೊಡುವ ಕೆಲಸ: ಶಾಸಕ ಕಾಮತ್ ಆರೋಪ

Published

on

ಬೆಂಗಳೂರಿನಲ್ಲಿ 2020ರ ಆಗಸ್ಟ್ ನಲ್ಲಿ ನಡೆದಿದ್ದ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆಯ ಪ್ರಕರಣದ ಆರೋಪಿಗಳ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಲು ರಾಜ್ಯ ಸರಕಾರ ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿದ್ದು, ಇದು ಭಯೋತ್ಪಾದಕರಿಗೆ ಕುಮ್ಮಕ್ಕು ಕೊಟ್ಟಂತಾಗುತ್ತದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.

ಮಂಗಳೂರು :  ಬೆಂಗಳೂರಿನಲ್ಲಿ 2020ರ ಆಗಸ್ಟ್ ನಲ್ಲಿ ನಡೆದಿದ್ದ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆಯ ಪ್ರಕರಣದ ಆರೋಪಿಗಳ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಲು ರಾಜ್ಯ ಸರಕಾರ ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿದ್ದು, ಇದು ಭಯೋತ್ಪಾದಕರಿಗೆ ಕುಮ್ಮಕ್ಕು ಕೊಟ್ಟಂತಾಗುತ್ತದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.

ಡಿಜೆ ಹಳ್ಳಿ, ಕೇಜೆ ಹಳ್ಳಿ ಗಲಭೆ ಅತ್ಯಂತ ಗಂಭೀರ ಸ್ವರೂಪದ ಪ್ರಕರಣವಾಗಿದೆ. ಕಾಂಗ್ರೆಸ್ ಪಕ್ಷದವರೇ ಆಗಿದ್ದ ದಲಿತ ಸಮುದಾಯದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆಗೆ ಹಾಗೂ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ ಸೇರಿದಂತೆ ರಾತ್ರೋರಾತ್ರಿ ಇಡೀ ಡಿಜೆ ಹಳ್ಳಿ ಕೆಜೆ ಹಳ್ಳಿಯನ್ನ ಹೊತ್ತಿ ಉರಿಸಿದ ಬಗ್ಗೆ ನೂರಾರು ಮಂದಿ ಮೇಲೆ ಮುಖದ್ದಮೆ ದಾಖಲಿಸಲಾಗಿತ್ತು.

ಆದರೆ ಎಲ್ಲ ಗಲಭೆಕೋರರ ಮೇಲಿನ ಮೊಖದ್ದಮೆಯನ್ನು ಹಿಂಪಡೆಯಬೇಕು ಎಂದು ಶಾಸಕ ತನ್ವೀರ್ ಸೇಠ್ ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.

ಈ ಮನವಿ ಆಧಾರದಲ್ಲಿ ಸೂಕ್ತ ಪರಿಶೀಲನೆ ನಡೆಸುವಂತೆ ಗೃಹ ಸಚಿವರು ಪೊಲೀಸ್ ಇಲಾಖೆಗೆ ಪತ್ರ ಬರೆದಿರುವುದು ದುರ್ದೈವದ ವಿಚಾರ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

ಇಂತಹ ಗಂಭೀರ ಪ್ರಕರಣಗಳು ದಾಖಲಾಗಿರುವ ಸಂದರ್ಭದಲ್ಲಿ ಅವರ ಮೇಲಿನ ಮೊಖದ್ದಮೆಗಳನ್ನು ಹಿಂಪಡೆದರೆ ಸರಕಾರವೇ ಭಯೋತ್ಪಾದನೆಗೆ ಪರೋಕ್ಷವಾಗಿ ಬೆಂಬಲಿಸಿದಂತಾಗುತ್ತದೆ.

ಹಿಂದೆ ಶಿವಮೊಗ್ಗದ ಗಲಭೆಯಲ್ಲಿ ಭಾಗಿಯಾಗಿದ್ದ ಆರೋಪಿ ಶಾರಿಕ್ ಎಂಬಾತ ಮಂಗಳೂರಿನಲ್ಲಿ ಬಾಂಬ್ ಸಾಗಿಸುವಾಗ ಸ್ಫೋಟಗೊಂಡಿರುವ ಉದಾಹರಣೆ ನಮ್ಮ ಮುಂದಿದೆ.

ಹಾಗಿರುವಾಗ ಯಾವುದೇ ಕಾರಣಕ್ಕೂ ಗಲಭೆಕೋರದ ಮೇಲಿನ ಪ್ರಕರಣವನ್ನು ಹಿಂಪಡೆಯುವ ಅಥವಾ ರದ್ದುಪಡಿಸುವ ದುಸ್ಸಾಹಸಕ್ಕೆ ಸರಕಾರ ಕೈ ಹಾಕಬಾರದು ಎಂದು ಅವರು ಆಗ್ರಹಿಸಿದರು.

ಈ ಹಿಂದೆ ಇದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪಿಎಫ್ ಐ ಮೇಲಿನ ನೂರಾರು ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಅವರ ದುಷ್ಕೃತ್ಯಕ್ಕೆ ಪರೋಕ್ಷವಾಗಿ ಬೆಂಬಲಿಸಿರುವುದನ್ನು ಈ ದೇಶ ಕಂಡಿದೆ.

ಅದೇ ಸಂಘಟನೆ ಭಯೋತ್ಪಾದನಾ ಸಂಘಟನೆಗಳೊಂದಿಗೆ ನಂಟು ಹೊಂದಿದ್ದ ಕಾರಣಕ್ಕೆ ನಿಷೇಧಗೊಂಡಿರುವುದನ್ನು ಸಿದ್ದರಾಮಯ್ಯ ನೆನಪಿಸಿಕೊಳ್ಳಬೇಕು.

ಇದೀಗ ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ಮೇಲಿನ ಮೊಖದ್ದಮೆಯನ್ನು ಹಿಂಪಡೆದರೆ ಮುಂದೆ ಇದು ಕೂಡಾ ರಾಜ್ಯದಲ್ಲಿ ಗಂಭೀರ ಸ್ವರೂಪದ ಗಲಭೆಗಳಿಗೆ ಉತ್ತೇಜನ ಕೊಟ್ಟಂತಾಗಲಿದೆ.

ಯಾವುದೇ ಕಾರಣಕ್ಕೂ ಈ ಆರೋಪಿಗಳ ಮೇಲಿನ ಪ್ರಕರಣವನ್ನು ಹಿಂದಕ್ಕೆ ಪಡೆಯುವ ಪ್ರಯತ್ನವನ್ನು ರಾಜ್ಯ ಸರಕಾರ ಮಾಡಬಾರದು ಎಂದು ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

LATEST NEWS

Trending