Connect with us

LATEST NEWS

ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರಕಾರ ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದೆ : ಬಿ ರಮಾನಾಥ ರೈ

Published

on

ರಾಜ್ಯದಲ್ಲಿ ಪ್ರಚಂಡ ಬಹುಮತದಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಚುನಾವಣಾ ಪೂರ್ವ ನೀಡಲಾಗಿದ್ದ ಗ್ಯಾರಂಟಿ ಭರವಸೆಗಳನ್ನು ಸಿದ್ಧರಾಮಯ್ಯ ಸರಕಾರ ಜಾರಿಗೊಳಿಸಿದೆ. ದೇಶದಲ್ಲೇ ಕಾಂಗ್ರೆಸ್‌ ಇತಿಹಾಸ ಸೃಷ್ಟಿಸಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

ಮಂಗಳೂರು: ರಾಜ್ಯದಲ್ಲಿ ಪ್ರಚಂಡ ಬಹುಮತದಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಚುನಾವಣಾ ಪೂರ್ವ ನೀಡಲಾಗಿದ್ದ ಗ್ಯಾರಂಟಿ ಭರವಸೆಗಳನ್ನು ಸಿದ್ಧರಾಮಯ್ಯ ಸರಕಾರ ಜಾರಿಗೊಳಿಸಿದೆ. ದೇಶದಲ್ಲೇ ಕಾಂಗ್ರೆಸ್‌ ಇತಿಹಾಸ ಸೃಷ್ಟಿಸಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.

ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಈ ಹಿಂದೆ ಕಾಂಗ್ರೆಸ್ ಸರಕಾರ ಅಧಿಕಾರ ಸ್ವೀಕರಿಸಿದ್ದ ಸಂದರ್ಭದಲ್ಲೂ ಶೇಕಡಾ 95 ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ನೀಡಿದ್ದೇವೆ.

ಆದರೆ ಬಳಿಕ ಬಂದ ಬಿಜೆಪಿ ಸರಕಾರ ವಚನ ಭ್ರಷ್ಟ ಸರಕಾರವಾಗಿತ್ತು. ಅವರ ಸುಳ್ಳು ಭರವಸೆಗಳನ್ನು ಕಂಡ ಜನತೆ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮತ ಬಹುಮತ ನೀಡಿ ಗೆಲ್ಲಿಸಿದ್ದು, ಕೊಟ್ಟ ಮಾತನ್ನು ಕಾಂಗ್ರೆಸ್ ಉಳಿಸಿಕೊಂಡಿದೆ.

ಸ್ವತಂತ್ರ್ಯ ಭಾರತದಲ್ಲಿ ಇಷ್ಟೊಂದು ಜನಪ್ರಿಯ ಯೋಜನೆಗಳನ್ನು ಇದುವರೆಗೆ ಯಾರೂ ಜಾರಿ ಮಾಡಿಲ್ಲ. ಸಿಎಂ ಸಿದ್ಧರಾಮಯ್ಯ ಜಾರಿ ಮಾಡಿರುವುದು ಸುವರ್ಣ ಅಕ್ಷರಗಳಲ್ಲಿ ಬರೆದಿಡಬೇಕಾದ ಸಂಗತಿಯಾಗಿದೆ ಎಂದರು.

ಚುನಾವಣಾ ಪೂರ್ವದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿಗರು ಕಾಂಗ್ರೆಸ್ ಅಧಿಕಾರಕ್ಕೇರಿದಾಗ ತಕ್ಷಣ ಗ್ಯಾರಂಟಿ ಯೋಜನೆ ಜಾರಿಗೆ ತನ್ನಿ ಎಂದು ಹೇಳುವ ಮೂಲಕ ದ್ವಂದ್ವ ನಿಲುವು ತಾಳಿದ್ದಾರೆ ಎಂದರು.

ಕಾಂಗ್ರೆಸ್ ಸರಕಾರದ ಗೃಹಜ್ಯೋತಿ, ಯುವನಿಧಿ, ಉಚಿತ ವಿದ್ಯುತ್‌, ಉಚಿತವಾಗಿ ಮಹಿಳೆಯರಿಗೆ ಸರಕಾರಿ ಬಸ್ಸುಗಳಲಲ್ಲಿ ಪ್ರಯಾಣ ಯೋಜನೆಗಳನ್ನು ಕ್ರಮಬದ್ಧವಾಗಿ ಜಾರಿಗೊಳಿಸಲಾಗಿದೆ.

ಇದಕ್ಕೆ ನಾನು ಸರಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಸಚಿವ ಸಂಪುಟ ರಚನೆ ಮುನ್ನವೇ ಬಿಜೆಪಿ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿತ್ತು.

ಅದು ಆ ಪಕ್ಷದ ದ್ವಂದ್ವ ನಿಲುವನ್ನು ತೋರಿಸುತ್ತದೆ ಎಂದರು.

ಬಿಜೆಪಿ ಇಲ್ಲಸಲ್ಲದ ಆರೋಪ, ಟೀಕೆಗಳನ್ನು ಮಾಡಿತ್ತು. ಆದರೆ ಇದೀಗ ಅವರೇ ಕಾಂಗ್ರೆಸ್ ಸರಕಾರದ ಯೋಜನೆಗಳನ್ನು ಸ್ವಾಗತಿಸುತ್ತಿದ್ದಾರೆ ಎಂದರು.

Click to comment

Leave a Reply

Your email address will not be published. Required fields are marked *

LATEST NEWS

ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ

Published

on

ಗದಗ : ಗದಗ ಬೆಟಗೇರಿ ಅವಳಿ ನಗರದಲ್ಲಿ ಒಂದೇ ಕುಟುಂಬದ ನಾಲ್ಕು ಜನರನ್ನು ಬರ್ಬರ ಹ*ತ್ಯೆ ಮಾಡಲಾಗಿದೆ. ನಗರಸಭೆ ಉಪಾಧ್ಯಕ್ಷೆಯ ಮಗ ಸೇರಿದಂತೆ ನಾಲ್ವರನ್ನು ರಾತೋರಾತ್ರಿ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ್ ಓಣಿಯ ನಿವಾಸಿಯಾದ ಪ್ರಕಾಶ ಬಾಕಳೆ ಅವರ ಮನೆಯಲ್ಲಿ ಈ ಹ*ತ್ಯಾಕಾಂಡ ನಡೆದಿದೆ.


ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ 27 ವರ್ಷದ ಕಾರ್ತಿಕ್ ಬಾಕಳೆ, ಸಂಬಂಧಿಕರಾದ 66 ವರ್ಷದ ಪರಶುರಾಮ, 45 ವರ್ಷದ ಲಕ್ಷ್ಮಿ ಹಾಗೂ 16 ವರ್ಷದ ಆಕಾಂಕ್ಷಾ ಎನ್ನುವವರ ಕೊ*ಲೆಯಾಗಿದೆ.

 

ಚರಂಡಿಯಲ್ಲಿ ಮಾರಕಾಸ್ತ್ರ ಪತ್ತೆ :

ಮಧ್ಯರಾತ್ರಿ 1 ಗಂಟೆಯಿಂದ 2 ಗಂಟೆಯ ಅವಧಿಯಲ್ಲಿ ಮನೆಯ ಹಿಂದಿನ ಕಿಟಕಿ ಮೂಲಕ ಎಂಟ್ರಿ ಹೊಡೆದ ದುಷ್ಕರ್ಮಿಗಳು ಮೊದಲು ಒಂದನೇಯ ಮಹಡಿಯಲ್ಲಿ ಮಲಗಿಕೊಂಡಿದ್ದ ಕಾರ್ತಿಕ ಹಾಗೂ ಪರಶುರಾಮ ಅವರನ್ನು ಹ*ತ್ಯೆ ಮಾಡಿದ್ದಾರೆ. ಬಳಿಕ ತಳ ಮಹಡಿಯಲ್ಲಿ ಮಲಗಿಕೊಂಡಿದ್ದ ತಾಯಿ ಲಕ್ಷ್ಮಿ ಹಾಗೂ ಮಗಳು ಆಕಾಂಕ್ಷಾ ಅವರನ್ನು ಮಾರಕಾಸ್ತ್ರಗಳಿಂದ ಕೊ*ಚ್ಚಿ ಕೊ*ಲೆ ಮಾಡಿದ್ದಾರೆ.


ಈ ವೇಳೆ ಪಕ್ಕದ ರೂಮಿನಲ್ಲಿದ್ದ ಪ್ರಕಾಶ ಬಾಕಳೆ ಹಾಗೂ ಸುನಂದಾ ಬಾಕಳೆ ಎಂಬವರು ರೂಮ್ ಬಾಗಿಲು ತೆರೆಯದೆ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಪೊಲೀಸರು ಬರುತ್ತಾ ಇದ್ದಂತೆ, ಹಂ*ತಕರು ಮನೆಯ ಹಿಂದಿನ ಕಿಟಕಿ ‌ಮೂಲಕ ಎಸ್ಕೇಪಾಗಿದ್ದಾರೆ. ಈ ವೇಳೆ ಹಂ*ತಕರು ಉಪಯೋಗ ಮಾಡಿದ್ದ ಮಾರಕಾಸ್ತ್ರಗಳನ್ನು ಚರಂಡಿಯಲ್ಲಿ ಎಸೆದು ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ : ಚುನಾವಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ.. 40 ಮಂದಿಗೆ ಗಾಯ
ಬಿಜೆಪಿ ಮುಖಂಡ ಹಾಗೂ ನಗರಸಭೆ ಉಪಾಧ್ಯಕ್ಷೆಯ ಪತಿಯಾದ ಪ್ರಕಾಶ ಬಾಕಳೆಗೆ ಇಬ್ಬರು ಪತ್ನಿಯರು. ಮೊದಲ ಪತ್ನಿ ಈ ಹಿಂದಿಯೇ ಸಾವನ್ನಪ್ಪಿದ್ದಾಳೆ. ಎರಡನೇಯ ಪತ್ನಿಯಾದ ಸುನಂದಾಳ ಜೊತೆಗೆ ಇದೇ ಮನೆಯಲ್ಲಿ ಜೀವನ ನಡೆಸುತ್ತಿದ್ದ. ಏಪ್ರಿಲ್ 17 ರಂದು ಎರಡನೇಯ ಪತ್ನಿ ಸುನಂದಾ ಬಾಕಳೆ ಅವ್ರ ಪುತ್ರ ಕಾರ್ತಿಕ್ ಎಂಗೇಜ್ಮೆಂಟ್ ಸಮಾರಂಭ ನಡೆಸಲಾಗಿತ್ತು.
ಮೊದಲ ಪತ್ನಿಯ ಸಹೋದರ ಪರಶುರಾಮ ಅವರ ಪತ್ನಿ ಲಕ್ಷ್ಮಿ, ಅವರ ಪುತ್ರಿ ಆಕಾಂಕ್ಷಾ ಕೊಪ್ಪಳ ಜಿಲ್ಲೆಯಿಂದ ಎಂಗೇಜ್ಮೆಂಟ್ ಕಾರ್ಯಕ್ಕೆ ಬಂದಿದ್ದರು. ಆದ್ರೆ, ಎಂಗೇಜ್ಮೆಂಟ್ ಮುಗಿಸಿ ವಾಪಾಸಾಗಬೇಕಾದವರು ಕಾರಣಾಂತರದಿಂದ ಇಲ್ಲೇ ಉಳಿದುಕೊಂಡಿದ್ದರು.

ತನಿಖೆಗೆ 4 ತಂಡ ರಚನೆ :

ಉತ್ತರ ವಲಯ ಐಜಿಪಿ ವಿಕಾಸಕುಮಾರ ಅವರು ಘಟನಾ ಸ್ಥಳವನ್ನು ಪರಿಶೀಲನೆ ಮಾಡಿದರು. ಈಗಾಗಲೇ ಗದಗ ಎಸ್ಪಿ ಬಿ.ಎಸ್.ನೇಮಗೌಡ ಅವರ ನೇತೃತ್ವದಲ್ಲಿ 4 ತಂಡವನ್ನು ರಚನೆ ಮಾಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕೊ*ಲೆ ಮಾಡಿರೋದು ದರೋಡೆಕೋರರ ಅಲ್ಲಾ ಅಥವಾ ಇನ್ಯಾರು ಎಂಬ ಬಗ್ಗೆ ಎಲ್ಲಾ ಆಯಾಮಗಳಲ್ಲಿ ತನಿಖೆ ‌‌ಮಾಡ್ತಾಯಿದ್ದೇವೆ, ಆದಷ್ಟು ಬೇಗ ಹಂತಕರನ್ನು ಪತ್ತೆ ಮಾಡುವ ಭರವಸೆ ನೀಡಿದ್ದಾರೆ.

ರಾಜಕೀಯ ಹಿನ್ನೆಲೆ, ರಿಯಲ್ ಎಸ್ಟೇಟ್, ಕೌಟುಂಬಿಕ ಕಲಹ ಸೇರಿದಂತೆ ಎಲ್ಲಾ ಆ್ಯಂಗಲ್ ‌ಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಒಂದು ಕುಟುಂಬದ ನಾಲ್ಕು ಜನರ ಹತ್ಯೆ ಮಾಡುವಷ್ಟು ದ್ವೇಷ ಏನೂ ಎನ್ನುವುದು ಪೊಲೀಸರ ಸಮಗ್ರ ತನಿಖೆಯಿಂದಲೇ ಬಯಲಾಗಬೇಕಾಗಿದೆ.

Continue Reading

LATEST NEWS

ಚುನಾವಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿ.. 40 ಮಂದಿಗೆ ಗಾಯ

Published

on

ಮಧ್ಯಪ್ರದೇಶ: ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಬಸ್ ಪಲ್ಟಿಯಾದ ಘಟನೆ ಎ.20ರಂದು ಮುಂಜಾನೆ ಮಧ್ಯಪ್ರದೇಶ್ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ.

palti

ಘಟನೆಯಿಂದ 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಗಾಯಗೊಂಡಿರುವ ಅಧಿಕಾರಿಗಳು ಚುನಾವಣಾ ಕರ್ತವ್ಯ ಮುಗಿಸಿ ರಾಜ್‌ಗಢಕ್ಕೆ ಹಿಂತಿರುಗುತ್ತಿದ್ದಾಗ ಭೋಪಾಲ್-ಬೇತುಲ್ ಹೆದ್ದಾರಿಯ ಬರೇತಾ ಘಾಟ್ ಬಳಿ ಅಪಘಾತ ಸಂಭವಿಸಿದೆ.

Read More..; ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

ಐವರು ಪೊಲೀಸರು ಮತ್ತು ಉಳಿದ ಗೃಹರಕ್ಷಕರು (ಹೋಮ್ ಗಾರ್ಡ್)​​​​​ ಸೇರಿದಂತೆ ಒಟ್ಟು 40 ಜನ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಉಪ ವಿಭಾಗಾಧಿಕಾರಿ ಶಾಲಿನಿ ಪರಸ್ತೆ ತಿಳಿಸಿದ್ದಾರೆ.

 

Continue Reading

DAKSHINA KANNADA

ತ್ರಿಶೂರ್ ಪೂರಂ..! ದೇಶದ ಹೆಮ್ಮೆಯ ಉತ್ಸವ..!

Published

on

ವಿವಿಧತೆಯಲ್ಲಿ ಏಕತೆ ಕಾಣುವ ನಮ್ಮ ದೇಶ ಹಲವು ಸಂಸ್ಕೃತಿ, ಕಲೆ, ಆಚರಣೆ, ಭಾಷೆ, ಜಾತಿ, ಧರ್ಮದ ಮೂಲಕ ವಿಶ್ವದ ಗಮನ ಸೆಳೆದಿದೆ. ದಿಪಾವಳಿ, ಹೋಳಿ, ಈದ್ , ಕ್ರಿಸ್ಮಸ್‌, ಹೀಗೆ ಹಲವು ಹಬ್ಬಗಳು ರಾಷ್ಟ್ರೀಯ ಮಟ್ಟದಲ್ಲಿ ಆಚರಣೆ ಆದ್ರೆ, ಇನ್ನೂ ಕೆಲವು ಹಬ್ಬಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆಯಾಗಿದೆ. ಅದರಲ್ಲಿ ವಿಶೇಷ ಹಬ್ಬವಾಗಿ ಕೇರಳದಲ್ಲಿ ಆಚರಿಸುವ ತ್ರಿಶೂರ್ ಪೂರಂ ಸದ್ಯ ಏಷ್ಯಾದಲ್ಲೇ ಅತೀ ಹೆಚ್ಚು ಜನರು ಭಾಗವಹಿಸುವ ಉತ್ಸವವಾಗಿ ಜಗತ್ಪ್ರಸಿದ್ದಿಯನ್ನು ಪಡೆದುಕೊಂಡಿದೆ.

ಏನಿದು ತ್ರಿಶೂರ್ ಪೂರಂ ಹಬ್ಬ

ತ್ರಿಶೂರ್ ಪೂರಂ ಅನ್ನೋದು ತ್ರಿಶೂರಿನ ಶಿವ ದೇವಾಲಯದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವ. ಮಲೆಯಾಳಂ ಕ್ಯಾಲೆಂಡರ್ ಪ್ರಕಾರ ಪೂರಂ ನಕ್ಷತ್ರದಲ್ಲಿ ಚಂದ್ರೋದಯದ ವೇಳೆಯಲ್ಲಿ ನಡೆಯುವ ಉತ್ಸವ ಇದು. ತ್ರಿಶೂರ್ ನಲ್ಲಿರೋ ವಡಕ್ಕುನಾಥನ್‌ ಅರ್ಥಾತ್ ಶಿವ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಇದು. ಆನೆಗಳ ಮೂಲಕ ದೇವರನ್ನು ಹೊತ್ತುಕೊಂಡು ದೇವಸ್ಥಾನದ ಬಾಗಿಲು ಪ್ರವೇಶ ಮಾಡೋದು ಈ ಉತ್ಸವದ ವಿಶೇಷ. ಹೀಗಾಗಿ  ಸಾವಿರಾರು ವಿದೇಶಿಗರು ಉತ್ಸವ ನೋಡಲು ಆಗಮಿಸ್ತಾರೆ ಅನ್ನೋದೇ ವಿಶೇಷ.

ತ್ರಿಶೂರ್ ಪೂರಂ ಹಬ್ಬದ ಹಿನ್ನೆಲೆ

ರಾಮವರ್ಮ ಕುಂಞಿಪಿಳ್ಳೆ ಎಂಬ ಕೊಚ್ಚಿನ್ ಮಹಾರಾಜ 17 ನೇ ಶತಮಾನದಲ್ಲಿ ಅರುಟ್ಟುಪುಳ ಪೂರಂ ಎಂಬ ಉತ್ಸವವನ್ನು ನಡೆಸಿಕೊಂಡು ಬಂದಿದ್ದರು. ಅರುಟ್ಟುಪುಳ ಪೂರಂ ಎಂಬ ಒಂದು ದಿನದ ಉತ್ಸವಕ್ಕೆ ತ್ರಿಶೂರು ಸೇರಿದಂತೆ ಸುತ್ತಮುತ್ತಲಿನ ದೇವಸ್ತಾನಗಳು ಇದರಲ್ಲಿ ಭಾಗಿ ಆಗುತ್ತಿದ್ದವು. 1796 ರಲ್ಲಿ ಮಳೆಯ ಕಾರಣಿದಿಂದ ತ್ರಿಶೂರ್‌ನಿಂದ ಹೊರಟಿದ್ದ ದೇವಾಲಯ ತಂಡಗಳಿಗೆ ಅರುಟ್ಟುಪುಳ ಪೂರಂ ಉತ್ಸವದಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿತ್ತು. ಇದರಿಂದ ಕೋಪಗೊಂಡಿದ್ದ ತ್ರಿಶೂರಿನ ರಾಜ ಶಕ್ತನ್ 1796 ರಲ್ಲೇ ತ್ರಿಶೂರಿನಲ್ಲೇ ಈ ಪೂರಂ ಉತ್ಸವ ಆರಂಭಿಸಿದ್ರು ಅನ್ನೋ ಐತಿಹಾಸಿಕ ಕಥೆ ಇದೆ. ಅಂದಿನಿಂದ ತ್ರಿಶೂರಿನ ಹತ್ತು ದೇವಾಲಯಗಳು ಒಟ್ಟಾಗಿ ತ್ರಿಶೂರ್ ಪೂರಂ ಆಚರಿಸಲು ಆರಂಭವಾಯ್ತು ಅನ್ನೋ ದಾಖಲೆಗಳು ಸಿಗುತ್ತದೆ.

ಧರ್ಮಾತೀತವಾಗಿ ನಡೆಯುವ ಪೂರಂ ಉತ್ಸವ

ತ್ರಿಶೂರ್ ಪೂರಂ ಅಂದ ತಕ್ಷಣ ನೆನಪಾಗುವುದು ಅಲ್ಲಿ ಕಾಣಸಿಗುವ ಸರ್ವಧರ್ಮ ಸಮನ್ವಯತೆ. ಇಂತಹ ದೃಶ್ಯ  ಬಹುಶಃ  ದೇಶದ ಬೇರೆಲ್ಲೂ ಕಾಣಲು ಸಿಗಲಾರದು. ತ್ರಿಶೂರ್ ಪೂರಂ ಉತ್ಸವದಲ್ಲಿ ಪ್ರತಿ ವರ್ಷ ಹೊಸ ಕೊಡೆಗಳನ್ನು ತಯಾರಿಸಲಾಗುತ್ತದೆ. ಕುಡವಟ್ಟಂ ಎಂದು ಕರೆಯುವ ಈ ಕೊಡೆಗಳ ವಿಶೇಷ ಆಕರ್ಷಣೆಗೆ ಕ್ರೈಸ್ತ ಸಮೂದಾಯದವರ ಕೊಡುಗೆ ಇದ್ರೆ, ಪೂರಂಗೆ ಬೇಕಾದ ಪೆಂಡಾಲ್ ಹಾಕೋದು ಇಲ್ಲಿನ ಮುಸ್ಲಿಂ ಸಮೂದಾಯದವರು. ಇನ್ನು ಉತ್ಸವ ನೋಡಲು ಹಿಂದೂ ಮುಸ್ಲಿಂ ಕ್ರೈಸ್ತ ಹೀಗೆ ಎಲ್ಲಾ ಧರ್ಮದವರೂ ಆಗಮಿಸುವುದು ಇಲ್ಲಿನ ವಿಶೇಷ. ಇದೇ ಕಾರಣಕ್ಕೆ ಈ ತ್ರಿಶೂರ್ ಪೂರಂ ಇಂದು ಜಗತ್ಪ್ರಸಿದ್ಧಿಯನ್ನು ಪಡೆದುಕೊಂಡಿದೆ.

ತ್ರಿಶೂರ್ ಪೂರಂ ಹಬ್ಬ ಹೇಗೆ ನಡೆಯುತ್ತದೆ

ತ್ರಿಶೂರು ಹಾಗೂ ಸುತ್ತಮುತ್ತಲಿನ ಹತ್ತು ದೇವಲಾಯಗಳಿಂದ ಆನೆಯ ಮೂಲಕ ದೇವರನ್ನು ಹೊತ್ತು ಶಿವ ದೇವಾಲಯಕ್ಕೆ ತರಲಾಗುತ್ತದೆ. ಒಂದೊಂದು ದೇವಸ್ಥಾನದಿಂದ ದೇವರನ್ನು ಹೊತ್ತು ಬಾಗಿಲು ದಾಟಿ ಬರುವ ಆನೆಗಳನ್ನು ನೋಡಲು ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿರುತ್ತಾರೆ. ಈ ವೇಳೆ ಮೊಳಗುವ ಪಂಚ ವಾದ್ಯಗಳನ್ನು ಕೇಳಲೆಂದೇ ಕೆಲವರು ಬರುವುದಿದೆ. ಕಣಿಮಂಗಲಂ ಶಾಸ್ತಾವು ದೇವಾಲಯದಿಂದ ಆರಂಭವಾಗುವ ಈ ಉತ್ಸವ ಬಳಿಕ ಒಂದೊಂದೆ ದೇವಸ್ಥಾನದಿಂದ ಬರಲು ಆರಂಭವಾಗುತ್ತದೆ. ಚಂಡೆ, ಮದ್ದಳೆ, ಕಹಳೆ,ತಾಳ ಹಾಗೂ ಎಡಕ್ಕ ಹೀಗೆ ಪಂಚವಾದ್ಯದ ಮೆರವಣಿಗೆ ನಡೆಯುತ್ತದೆ. ಹತ್ತು ಆನೆಗಳು ದೇವಾಲಯದ ಮುಂದೆ ನಿಂತಿದ್ದರೆ , ಐವತ್ತಕ್ಕೂ ಹೆಚ್ಚು ಆನೆಗಳು ಉತ್ಸವದಲ್ಲಿ ಭಾಗಿಯಾಗುತ್ತದೆ. ಚಿನ್ನದ ಹಣೆಪಟ್ಟಿ, ಚಿನ್ನದ ಪ್ರಭಾವಳಿಯನ್ನು ಹಿಡಿದು , ಪಾರೆಮೆಕ್ಕಾವು ಮತ್ತು ತಿರುವಂಬಾಡಿ ಎಂಬ ಎರಡು ತಂಡಗಳು ಪೂರಂ ನಡೆಯುವ ಸ್ಥಳದಲ್ಲಿ ಮುಖಾಮುಖಿಯಾಗಿ ನಿಂತು ಛತ್ರಿ ವಿನಿಯಮ ಮಾಡಿಕೊಳ್ಳುವ ದೃಶ್ಯ ಪೂರಂನಲ್ಲಿ ವಿಶೇಷ ಅನುಭವ ನೀಡುವ ದೃಶ್ಯ ಕೂಡಾ ಹೌದು. ಕುಡಮಟ್ಟಂ ಅಂತ ಇದನ್ನು ಕರೆಯಲಾಗುತ್ತಿದ್ದು ಶಿವದೇವಲಾಯದ ಪಶ್ಚಿಮ ಗೋಪುರದ ಬಳಿ ಇದು ಸಂಪನ್ನಗೊಳ್ಳುತ್ತದೆ.

 

Continue Reading

LATEST NEWS

Trending