Connect with us

DAKSHINA KANNADA

ಕಾಂಗ್ರೆಸ್‌ನಿಂದ ಬಿಲ್ಲವರಿಗೆ ಅನ್ಯಾಯ-ಸರಿಪಡಿಸದಿದ್ದರೆ ನಮ್ಮ ದಾರಿ ನಮಗೆ: ಪ್ರಣವಾನಂದ ಶ್ರೀ

Published

on

ಮಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್‌ ಪಕ್ಷ ಪ್ರಕಟಿಸಿದ 124 ಕ್ಷೇತ್ರಗಳ ಪಟ್ಟಿಯಲ್ಲಿ ಬಿಲ್ಲವ ಸಮಾಜಕ್ಕೆ ಅನ್ಯಾಯವಾಗಿದೆ. ಮುಂದಿನ ಪಟ್ಟಿ ಪ್ರಕಟಿಸುವ ಸಂದರ್ಭದಲ್ಲಿ ಇದನ್ನು ಸರಿ ಪಡಿಸದಿದ್ದರೆ ನಮ್ಮ ದಾರಿ ನಾವು ನೋಡುತ್ತೇವೆ ಎಂದು ಕಲಬುರಗಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ತಿಳಿಸಿದ್ದಾರೆ.


ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಬಿಲ್ಲವ, ಈಡಿಗ, ನಾಮಧಾರಿ ಸಮಾಜಕ್ಕೆ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳು ತಲಾ 10 ಸೀಟುಗಳಲ್ಲಿ ಸ್ಪರ್ಧಿಸಲು ಅವಕಾಶ ನೀಡಬೇಕೆಂದು ಈ ಹಿಂದೆಯೇ ಮೂರೂ ರಾಜಕೀಯ ಪಕ್ಷಗಳ ಮುಖಂಡರನ್ನು ಭೇಟಿ ಮಾಡಿ ತಿಳಿಸಲಾಗಿದೆ.

ಆದರೆ ಇದೀಗ ಕಾಂಗ್ರೆಸ್‌ನ ಮೊದಲ ಪಟ್ಟಿಯಲ್ಲಿಯೇ ನಮಗೆ ಅನ್ಯಾಯವಾಗಿದೆ. 124 ರಲ್ಲಿ ಕೇವಲ 6 ಸೀಟು ನೀಡಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಕ್ಷೇತ್ರಗಳಲ್ಲಿ ಗರಿಷ್ಠ ಸಂಖ್ಯೆಯ ಬಿಲ್ಲವ ಮತದಾರರಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಬೆಳ್ತಂಗಡಿ ಕ್ಷೇತ್ರವೊಂದರಲ್ಲಿ ಮಾತ್ರ ಅವಕಾಶ ಕೊಡಲಾಗಿದೆ. ಇದು ಅನ್ಯಾಯ. ನಮಗೆ ಸಾಮಾಜಿಕ ನ್ಯಾಯ ಒದಗಿಸ ಬೇಕು. ನಮಗೆ ರಾಜಕೀಯ ಪಕ್ಷ ಮುಖ್ಯವಲ್ಲ. ನಮ್ಮ ಸಮುದಾಯ ಮುಖ್ಯ ಎಂದರು.

ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಬಯಸಿ ಶುಲ್ಕ ಪಾವತಿಸಿ ಅರ್ಜಿ ಹಾಕಿದ ಮತ್ತು ಬಿಲ್ಲವ ಸಮಾಜದ ಇತರ ಚುನಾಯಿತ ಪ್ರತಿನಿಧಿಗಳ ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending