Connect with us

DAKSHINA KANNADA

ಪೊಲೀಸರನ್ನು ಒಂದು ಪಾರ್ಟಿಗೆ ಸೀಮಿತ ಮಾಡುವ ಹೀನ ರಾಜಕಾರಣ ಕಾಂಗ್ರೆಸ್​ನಿಂದ ಆಗುತ್ತಿದೆ: ಸಂಸದ ನಳಿನ್‌

Published

on

ಮಂಗಳೂರು: ಒಬ್ಬ ಸಿಎಂ ಸಾಂವಿಧಾನಿಕವಾಗಿ ಜನರ ಧಾರ್ಮಿಕ ಆಚರಣೆಗೆ ಅಡ್ಡಿ ಬರೋದು ಸರಿಯಲ್ಲ. ಪೊಲೀಸರನ್ನು ಒಂದು ಪಾರ್ಟಿಗೆ ಸೀಮಿತ ಮಾಡುವ ಹೀನ ರಾಜಕಾರಣ ಕಾಂಗ್ರೆಸ್​ನಿಂದ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಕಾಂಗ್ರೆಸ್‌ ವಿರುದ್ಧ ಗರಂ ಆಗಿದ್ದಾರೆ.


ಪೊಲೀಸ್ ಇಲಾಖೆಯಲ್ಲಿ ಕೇಸರೀಕರಣ ಸಹಿಸುವುದಿಲ್ಲ ಎಂದು ಡಿ ಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿ, ಸಂವಿಧಾನಾತ್ಮಕವಾಗಿ ನಡೆಯುವ ಎಲ್ಲ ಇಲಾಖೆಯಲ್ಲಿ ಪ್ರತಿಯೊಬ್ಬ ನಾಗರಿಕನು ಆತನ ಧರ್ಮವನ್ನು ಪಾಲಿಸಲು ಅವಕಾಶವಿದೆ ಕಳೆದ 16 ವರ್ಷಗಳಲ್ಲಿ ಎಲ್ಲ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳನ್ನು ಮಾಡಿಕೊಂಡು ಬಂದಿರುವುದನ್ನು ನಾವು ಕಂಡಿದ್ದೇವೆ ಇದನ್ನು ತಡೆಯುವ ಕಾರ್ಯವನ್ನು ಕಾಂಗ್ರೆಸ್ ಮಾಡುತ್ತಿದೆ ಅವರ ಹೀನ ರಾಜಕಾರಣ ಸಿದ್ದರಾಮಯ್ಯ ಅವರ ಮಾನಸಿಕತೆ ಇದರಿಂದ ಬಯಲಾಗಿದೆ.

ಹಿಂದಿನಿಂದ ನಡೆದುಕೊಂಡು ಬಂದ ಪೂಜೆಗಳನ್ನು ಕೆಲವು ಇಲಾಖೆಗಳಲ್ಲಿ ಮಾಡುತ್ತಾರೆ ನಂಬಿಕೆಗಳ ಆಧಾರದಲ್ಲಿ ಕೆಎಸ್​ಆರ್​ಟಿಸಿ ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ಮಾಡಲಾಗುತ್ತದೆ. ಇಂತಹ ಪೂಜೆಗಳನ್ನು ನಿಷೇಧಿಸುವ ಬಹಿಷ್ಕಾರ ಹಾಕುವ ಕ್ರಮ ಸರಿಯಲ್ಲ ಪೂಜೆ ಮಾಡುವ ಪೊಲೀಸರನ್ನು ಒಂದು ಪಾರ್ಟಿಗೆ ಸೀಮಿತ ಮಾಡುವ ಹೀನ ರಾಜಕಾರಣ ಕಾಂಗ್ರೆಸ್​ನಿಂದ ಆಗುತ್ತಿದೆ ಎಂದರು.

ನೈತಿಕ ಪೊಲೀಸ್ ಗಿರಿಯನ್ನು ಹತ್ತಿಕ್ಕುವ ವಿಚಾರದಲ್ಲಿ ಮಾತನಾಡಿ, ಬಜರಂಗದಳವನ್ನು ನಿಷೇಧವನ್ನು ಉಲ್ಲೇಖಿಸುತ್ತಿದ್ದಾರೆ. ಇದು ಕಾಂಗ್ರೆಸ್ ಹಿಂದೂ ಸಮಾಜದ ಮೇಲೆ ಹಿಂದೂ ಆಚರಣೆ ಹಾಗೂ ರಾಷ್ಟ್ರಭಕ್ತ ಕಾರ್ಯಕರ್ತರ ಮೇಲೆ ಹೇಗೆ ಸವಾರಿ ಮಾಡುತ್ತದೆ ಎಂಬುದನ್ನು ತೋರಿಸುತ್ತದೆ ಇಂಥದ್ದರ ವಿರುದ್ಧ ಹೋರಾಟ ಮಾಡಿ ಉತ್ತರ ಕೊಡುವ ಶಕ್ತಿ ಬಿಜೆಪಿಗಿದೆ ಎಂದರು.

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

DAKSHINA KANNADA

ಮಂಗಳೂರು: 30.98% ಮತದಾರರಿಂದ ಮತ ಚಲಾವಣೆ

Published

on

ಮಂಗಳೂರು: 17-ದ.ಕ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ 30.98 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ.

ಸುಳ್ಯದಲ್ಲಿ ಅತಿ ಹೆಚ್ಚು ಮತ ಚಲಾವಣೆಯಾಗಿದ್ದು, 16.46 ಪ್ರತಿಶತ ಮತದಾರರು ಮತ ಚಲಾವಣೆ ಮಾಡಿದ್ದಾರೆ. ಮೂಡುಬಿದಿರೆ ಕ್ಷೇತ್ರದಲ್ಲಿ ಅತಿ ಕನಿಷ್ಠ ಮತ ಚಲಾವಣೆಯಾಗಿದ್ದು, 12.2 ಪ್ರತಿಶತ ಮತದಾರರು ಮತ ಚಲಾಯಿಸಿದ್ದಾರೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಕಾರ್ ಸ್ಟ್ರೀಟ್ ಸರ್ಕಾರಿ ಬಾಲಕಿಯರ ಎಪಿಯು ಕಾಲೇಜಿನಲ್ಲಿ ಮತದಾರರು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಛತ್ರಿ ಹಿಡಿದು ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತ ದೃಶ್ಯ ಕಂಡುಬಂತು.

Continue Reading

DAKSHINA KANNADA

ಮಂಗಳೂರು: ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ಗೂಂಡಾಗಿರಿ; ಪೊಲೀಸ್ ಅಧಿಕಾರಿಗಳ ಜೊತೆಯಲ್ಲೇ ಅನುಚಿತ ವರ್ತನೆ

Published

on

ಮಂಗಳೂರು: ನಗರದ ಕಪಿತಾನಿಯೋ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ ಚಲಾಯಿಸಿದ ಬಳಿಕ ಮಾಧ್ಯಮ ಪ್ರತಿನಿಧಿ ಜೊತೆ ಪ್ರತಿಕ್ರಿಯೆ ನೀಡುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಪೊಲೀಸ್ ಹಾಗೂ ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿ ವಾಗ್ವಾದವುಂಟಾದ ಘಟನೆ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿಯವರು ಮತದಾನ ಮಾಡಿ ಹೊರಬಂದಾಗ ಮಾಧ್ಯಮದವರು ಗೇಟಿನ ಹೊರಭಾಗದಲ್ಲಿ ಅವರ ಹೇಳಿಕೆ ತೆಗೆದುಕೊಳ್ಳುತ್ತಿದ್ದರು. ಆಗ “ಎಷ್ಟು ಹೊತ್ತು ಪ್ರತಿಕ್ರಿಯೆ ಪಡೆಯುವುದು”ಎಂದು ಸಂದೀಪ್ ಎಕ್ಕೂರು ಎಂಬಾತ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಅಲ್ಲಿಯೇ ಇದ್ದ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಸೇರಿದಂತೆ ಇತರ ಪೊಲೀಸರು ಆತನನ್ನು ತಳ್ಳಿಕೊಂಡು ಒಂದಷ್ಟು ದೂರ ಹೋಗಿದ್ದಾರೆ. ಈ ವೇಳೆ ಆತನೊಂದಿಗೆ ಇದ್ದವರು ಸಮಾಧಾನ ಮಾಡಲು ಯತ್ನಿಸಿದರೂ, ಆತ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿ, ವಾಗ್ವಾದ ನಡೆಸಿದ್ದಾನೆ. ಆಗ ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಪೊಲೀಸರು ಅಲ್ಲಿಂದ ಹಿಂದಿರುಗಿದ ಬಳಿಕ ತಂಡದಲ್ಲಿದ್ದ ಮತ್ತೊಬ್ಬ ಘಟನೆಯ ದೃಶ್ಯ ಚಿತ್ರೀಕರಿಸುತ್ತಿದ್ದ ಮಾಧ್ಯಮ ವರದಿಗಾರರ ಮೇಲೆ ಹರಿಹಾಯ್ದಿದ್ದಾನೆ. ಈ ವೇಳೆ ಪತ್ರಕರ್ತರೊಂದಿಗೂ ತಂಡದಿಂದ ವಾಗ್ವಾದ ನಡೆದಿದೆ. ಈ ವೇಳೆ ಸ್ಥಳದಲ್ಲಿ ಸ್ವಲ್ಪ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಸಂಜೆ ವೇಳೆ ಆತನ ಮೇಲೆ ಪ್ರಕರಣ ದಾಖಲಿಸಿ ಅರೆಸ್ಟ್ ಮಾಡುತ್ತೇನೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಚ್ಚರಿಕೆ ನೀಡಿದ ಬಳಿಕ ಪರಿಸ್ಥಿತಿ ಶಾಂತವಾಯಿತು.

Continue Reading

LATEST NEWS

Trending