ಬೆಂಗಳೂರು: ಪ್ರೇಮಿಗಳ ದಿನಾಚರಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಐಟಿ ಸೆಲ್ ವಿಭಿನ್ನವಾಗಿ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಪ್ರೇಮಿಗಳ ದಿನಾಚರಣೆಯ ಶುಭಾಶಯ ತಿಳಿಸಿದೆ. ಅದರ ಒಂದಷ್ಟು ಝಲಕ್ ನೋಡಿ….
1.ಬಿಜೆಪಿಗರು ಶುದ್ಧ 40% ಪ್ರೇಮಿಗಳು, 40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು!! ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನ…..!!
2. ಬಿಜೆಪಿಗರದ್ದು ಗೋ ಪ್ರೀತಿಯಲ್ಲ, Go ಪ್ರೀತಿ!! ಬಿಜೆಪಿಗರು ಗೋವಿನ ಎದುರು ಫ್ಲರ್ಟ್ ಮಾಡುತ್ತಾರೆ ಹೊರತು ಪ್ರೀತಿಯಲ್ಲ!.
3. ಭಗ್ನ ಪ್ರೇಮಿಯೊಬ್ಬನ ಪ್ರಲಾಪಗಳು,
ವಿಮಾನದ ತುರ್ತು ನಿರ್ಗಮನದ ಬಾಗಿಲು ತೆಗೆಯುವುದು.
ಸಿಎಂ ಮನೆಗೆ ಕಲ್ಲು ಹೊಡೆಯುವುದು.
ರೈತರಿಗೆ ಅವಮಾನಿಸುವುದು.
ಪ್ರೀತಿ ಕಳೆದುಕೊಂಡು ವಿಚಿತ್ರವಾಗಿ ವರ್ತಿಸುತ್ತಿರುವ ಈ ಭಗ್ನಪ್ರೇಮಿಗೆ ಕೌನ್ಸ್‌ಲಿಂಗ್ ಅಗತ್ಯವಿದೆ!.
4. ಒಮ್ಮೆ ತಿರಸ್ಕಾರ ಭಾವ ಮೂಡಿದರೆ ಮತ್ತೆಂದೂ ಅಲ್ಲಿ ಪ್ರೀತಿಗೆ ಜಾಗವಿಲ್ಲ. ಮಂಡ್ಯದಲ್ಲಿ ತಿರಸ್ಕಾರದ ಪ್ರೇಮವೈಫಲ್ಯ ಅನುಭವಿಸಿ ನೋವಿನಲ್ಲಿರುವ ಭಗ್ನಪ್ರೇಮಿಗೆ ನಮ್ಮ ಸಾಂತ್ವಾನಗಳು!
5. “ಪ್ರೀತಿ ಮಧುರ, ತ್ಯಾಗ ಅಮರ” ಕುರ್ಚಿಯೊಂದಿಗಿನ ಪ್ರೇಮದ ಸವಿಗಳಿಗೆಯ ನೆನಪು, ವಿರಹದ ನೋವು ಸದಾ ಕಾಡುತ್ತಿರುತ್ತದೆ.. ಈಶ್ವರಪ್ಪನವರೇ ತಮಗೆ ವಿರಹದ ನೋವು ಭರಿಸುವ ಶಕ್ತಿ ಸಿಗಲಿ!!
6. ಒಂದು ಮುತ್ತಿನ ಕತೆಯಲ್ಲಿ ಪ್ರೇಮಿಗೆ ಜಯ ಸಿಗಲಿಲ್ಲ! “ಸಚಿವ ಹುದ್ದೆ” ಎಂಬ ಪ್ರೇಮ ವೈಫಲ್ಯದಿಂದ ಭಗ್ನಪ್ರೇಮಿಯಾಗಿ ತಿರುಗುತ್ತಿರುವವರ ನೋವು ಜಗತ್ತಿನ ಕಣ್ಣಿಗೆ ಕಾಣುವುದಿಲ್ಲ!
7. ಈ ಸ್ಪೆಷಲ್ ಡಾಕ್ಟರ್‌ಗೆ ಹೃದಯ ಬಡಿತವೂ ತಿಳಿಯುತ್ತದೆ.
ಲೂಟಿ ಹೊಡೆತವೂ ತಿಳಿದಿದೆ! ಈ ಡಾಕ್ಟರ್‌ಗೂ ಲವ್ವಾಗಿದೆ – PSI ಹುದ್ದೆಗಳ ಮೇಲೆ!.
8. ಪ್ರೇಮದಲ್ಲಿ ಮುಳುಗಿದವರು ಸದಾ ಕಲ್ಪನಾಲೋಕದಲ್ಲಿ ವಿಹರಿಸುತ್ತಿರುತ್ತಾರೆ. ಮತ್ತು ಆ ಭ್ರಮೆಗಳನ್ನೇ ವಾಸ್ತವ ಎಂದು ತಿಳಿದುಕೊಂಡಿರುತ್ತಾರೆ. ಇದು ಪ್ರೇಮದ ಮೊದಲ ಹಂತ.
9. ಪ್ರೇಮವಿರುವ ಕಡೆ ದ್ವೇಷಕ್ಕೆ ಜಾಗವಿಲ್ಲ..ಆದರೆ ದ್ವೇಷವನ್ನೇ ಪ್ರೇಮಿಸಿದರೆ….!? ದ್ವೇಷವನ್ನೇ ಪ್ರೀತಿಸಿ, ದ್ವೇಷವನ್ನೇ ಧ್ಯಾನಿಸಿ, ದ್ವೇಷದೊಂದಿಗೆ ರೊಮ್ಯಾನ್ಸ್ ಮಾಡುವ ವಿಶಿಷ್ಠ ಪ್ರೇಮಿ ಇವರು!!
10. “ಸರಸ ಸಲ್ಲಾಪದ ಸಿಡಿಗಳು” ಬಿಜೆಪಿಗರ ‘ಸಿಡಿ ಸಂಭ್ರಮ’ದ ಎಪಿಸೋಡ್‌ಗಳು ನೂರಾರಿವೆಯಂತೆ. ಯತ್ನಾಳರು ಹೇಳುವ ಸಿಡಿ ಸಿಡಿಯುವುದು ಯಾವಾಗ?
ಕನಸಲ್ಲೂ ನೀನೇ, ಮನಸಲ್ಲೂ ನೀನೇ, ಉಸಿರಲ್ಲೂ ನೀನೇ, ಹೆಸರಲ್ಲೂ ನೀನೇ..
ಹೃದಯದ “ಆಕ್ಸಿಜನ್”! ಕಮಿಷನ್ ಕೊಡಿಸುವ,
ಖಜಾನೆ ತುಂಬುವ “ಆಕ್ಸಿಜನ್” ಎಂದರೆ ಇವರಿಗೆ ಅದಮ್ಯ ಪ್ರೇಮ!!