Connect with us

DAKSHINA KANNADA

ಆರ್‌ಎಎಫ್‌ ಘಟಕ ನಿರ್ಮಾಣ ಶಿವಮೊಗ್ಗಕ್ಕೆ ಸ್ಥಳಾಂತರ ಏಕೆ  ಬಿಜೆಪಿಗೆ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಪ್ರಶ್ನೆ..!

Published

on

ಆರ್‌ಎಎಫ್‌ ಘಟಕ ನಿರ್ಮಾಣ ಶಿವಮೊಗ್ಗಕ್ಕೆ ಸ್ಥಳಾಂತರ ಏಕೆ  ಬಿಜೆಪಿಗೆ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಪ್ರಶ್ನೆ..!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಕೇಂದ್ರ ಸರಕಾರ ಅನ್ಯಾಯ ಮಾಡಿಕೊಂಡೇ ಬಂದಿದ್ದು, ಕೇಂದ್ರ ಸರಕಾರದ ಹಲವು ನಿರ್ಧಾರಗಳಿಂದ ಇದು ಬಿಂಬಿತವಾಗಿದೆ ಎಂದು ಯುವ ಕಾಂಗ್ರೆಸ್‌ ನಾಯಕ ಮಿಥುನ್  ರೈ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರ್.ಎ.ಎಪ್. ಘಟಕ ನಿರ್ಮಾಣಕ್ಕೆ ಜಿಲ್ಲೆಯ ಮೂಲ್ಕಿ ಮೂಡುಬಿದಿರೆ ಕ್ಷೇತ್ರದಲ್ಲಿ ಸ್ಥಳ ನಿಗದಿಯಾಗಿತ್ತು.

ಸುಮಾರು 48 ಎಕರೆ ಭೂಮಿಯನ್ನು ಬಡಗ ಎಕ್ಕೂರಿನಲ್ಲಿ ಮೀಸಲು ಇರಿಸಲಾಗಿತ್ತು. ಆದರೆ ಈ ಯೋಜನೆ ಶಿವಮೊಗ್ಗ ಜಿಲ್ಲೆಗೆ ಸ್ಥಳಾಂತರವಾಗಿದೆ.

ಎಲ್ಲಾ ರೀತಿಯ ಸಾರಿಗೆ – ಸಂಪರ್ಕ ಹೊಂದಿರುವ ದ.ಕ ಜಿಲ್ಲೆಗೆ ಇಂತಹ ಸ್ಥಿತಿ ಏಕೆ ಎಂದರು. ದ.ಕ ಜಿಲ್ಲೆ  ಕೋಮು- ಸೂಕ್ಷ್ಮ ಆಡಳಿತ ಪ್ರದೇಶ ಹೊಂದಿದ್ದು, ಬಿಜೆಪಿಯವರು ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು  ಕಣ್ಣಿಗೆ ಸುಣ್ಣ ಹಚ್ಚುವವರು.

ಯೋಜನೆ ಬೇರೆ ಜಿಲ್ಲೆಗೆ ಹೋಗುವವರೆಗೂ ಸಂಸದರು ಯಾಕೆ ಮೌನವಾಗಿದ್ದಾರೆ. ಶಾಸಕರು ಸಂಸದರು ಈ ಯೋಜನೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ.

ಈ ಯೋಜನೆಯಿಂದ ಎಲ್ಲರಲ್ಲೂ ಸೌಹಾರ್ದತೆ ಮೂಡಿಬರುತ್ತಿತ್ತು. ಬಿಜೆಪಿ ಶಾಸಕರು ಮತ್ತು ಸಂಸದರಿಗೆ ಸೌಹಾರ್ದತೆ  ಬೇಡ ಎಂದು ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮಿಥುನ್ ರೈ ಹೇಳಿದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending