Connect with us

    DAKSHINA KANNADA

    ವೈದ್ಯ ಸಿಬಂದಿ ಹಲ್ಲೆ ಆರೋಪ- ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಬಂಧನ: ಕಾಂಗ್ರೆಸ್ ಪ್ರತಿಭಟನೆ

    Published

    on

    ಮಂಗಳೂರು : ಕೊರೊನಾ ಸಂದರ್ಭದಲ್ಲಿ ಕೊರೊನಾ ಸೋಂಕಿತರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಅವರನ್ನು ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಂಗಳೂರು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.

    ಸುಹೈಲ್ ಕಂದಕ್ ಬಂಧನ ವಿಚಾರ ತಿಳಿಯುತ್ತಿದ್ದಂತೆ ಕಾಂಗ್ರೆಸ್ ನಾಯಕರು, ಮುಖಂಡರು, ಕಂಕನಾಡಿ ನಗರ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

    ಮಂಗಳೂರಿನ ಇಂಡಿಯಾನ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ವಿಪರೀತ ದರ ವಿಧಿಸಿದ ಬಗ್ಗೆ ಕಾಂಗ್ರೆಸ್ ಮುಖಂಡ ಸುಹೈಲ್ ಕಂದಕ್ ಇತ್ತೀಚೆಗೆ ಆಸ್ಪತ್ರೆ ಮುಂಭಾಗ ಧರಣಿ ನಡೆಸಿದ್ದರು. ಕೊರೊನಾ ಸೋಂಕಿತರ ಅಂತ್ಯಕ್ರಿಯೆ ಸೇರಿದಂತೆ ಸುಹೈಲ್ ಕಂದಕ್ ಅವರ ನೇತೃತ್ವದಲ್ಲಿ ಸಾಮಾಜಿಕ ಕಾರ್ಯಗಳು ನಡೆಯುತ್ತಿದ್ದವು. ಆದರೆ, ಸುಹೈಲ್ ಕಂದಕ್ , ಇಂಡಿಯಾನ ಆಸ್ಪತ್ರೆಯ ಐಸಿಯುಗೆ ನುಗ್ಗಿ ಮಹಿಳಾ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಕರ್ತವ್ಯದಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕಂಕನಾಡಿ ಪೊಲೀಸರು ಅವರನ್ನು ಬಂಧಿಸಿದ್ದಾರೆ.

    ಕೋವಿಡ್ ವಾರಿಯರ್ ಮೇಲಿನ ಹಲ್ಲೆ ಸಹಿಸಲಾಗದು: ಪೊಲೀಸ್ ಆಯುಕ್ತ ಶಶಿಕುಮಾರ್

    ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕೋವಿಡ್‌ನಂತಹ ತುರ್ತು ಸಂದರ್ಭದಲ್ಲಿ ಮುಂಚೂಣಿಯಲ್ಲಿದ್ದು ಸೇವೆ ಸಲ್ಲಿಸುತ್ತಿರುವ ಕೊರೋನ ಯೋಧರುಗಳ ಮೇಲಿನ ಹಲ್ಲೆಯನ್ನು ಸಹಿಸುವಂತಿಲ್ಲ. ಸಾರ್ವಜನಿಕರು ಈ ಬಗ್ಗೆ ಸಹಕರಿಸಬೇಕು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.

    ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಇತ್ತೀಚೆಗೆ ನಡೆದ ವೈದ್ಯರ ಮೇಲಿನ ಹಲ್ಲೆ ಹಾಗೂ ಕೋವಿಡ್ ಸೋಂಕಿಂತ ಗರ್ಭಿಣಿಗೆ ಚಿಕಿತ್ಸೆ ನಿರಾಕರಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಂಡಿದೆ.

    ಕರ್ತವ್ಯದಲ್ಲಿದ್ದ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ.

    ಸುಹೈಲ್ ಕಂದಕ್ ಬಂಧನ – ಎಸ್ ಡಿಪಿ ಐ ತೀವ್ರ ಖಂಡನೆ

    ಮಂಗಳೂರಿನ ಮೆಡಿಕಲ್ ಮಾಫಿಯಾದ ಅಹಂಕಾರದ ವರ್ತನೆ ಹಾಗೂ ಹಗಲು ದರೋಡೆ ಯನ್ನು ಪ್ರಶ್ನಿಸುವವರನ್ನು ಮಾಫಿಯಾದ ಒತ್ತಡದಿಂದ ಪೊಲೀಸರು ಬಂಧಿಸುತ್ತಿರುವುದು ಖಂಡನೀಯ, ಈ ಮೂಲಕ ಅನ್ಯಾಯವನ್ನು ಪ್ರಶ್ನಿಸುವವರ ಶಬ್ಧವನ್ನು ದಮನಿಸಬಹುದೆಂದು ಪೊಲೀಸರು ಬಾವಿಸಿದ್ದರೆ ಅದು ಅವರ ಮೂರ್ಖತನ ಎಂದು ಎಸ್ಡಿಪಿಐ ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ

    ಕೋವಿಡ್ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹಲವಾರು ಸಂಘಟನೆಗಳು, ರಾಜಕೀಯ ಪಕ್ಷದ ನಾಯಕರು ,ಕಾರ್ಯಕರ್ತರು ಸೋಂಕಿನ ಅಪಾಯವನ್ನು ಲೆಕ್ಕಿಸದೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ರಾತ್ರಿ ಹಗಲೆನ್ನದೇ ತಂಡಗಳಾಗಿ ಕೋವಿಡ್ ರೋಗಿಗಳ ಸೇವೆಯಲ್ಲಿ ನಿರತರಾಗಿದ್ದಾರೆ. ಹಳ್ಳಿಗಳಿಂದ, ಹೊರಜಿಲ್ಲೆ, ಹೊರರಾಜ್ಯಗಳಿಂದ ಚಿಕಿತ್ಸೆಗಾಗಿ ಮಂಗಳೂರಿಗೆ ಬರುವ ರೋಗಿಗಳಿಗೆ ಬೇಕಾದ ನೆರವುಗಳನ್ನು ಇವರು ಒದಗಿಸುತ್ತಿರುವುದು ,ಅದರೊಂದಿಗೆ ಮಂಗಳೂರಿನ ಕೆಲವು ವೈದ್ಯರು ಹಾಗೂ ಆಸ್ಪತ್ರೆಗಳ ಹಗಲು ದರೋಡೆ, ಬೇಕಾಬಿಟ್ಟಿ ಸುಲಿಗೆಯನ್ನು ಪ್ರಶ್ನಿಸಿ ಜನಸಾಮಾನ್ಯರಿಗೆ ನ್ಯಾಯ ಒದಗಿಸಿ ಕೊಡುತ್ತಿರುವುದು ಆಸ್ಪತ್ರೆ ಮಂಡಳಿಗೆ ನುಂಗಲಾರದ ತುತ್ತಾಗಿದೆ . ಕೋವಿಡ್ ಹೆಸರಿನಲ್ಲಿ ಪ್ಯಾಕೇಜ್ ಗಳನ್ನು ಮಾಡಿಕೊಂಡು ಆರೋಗ್ಯ ಕ್ಷೇತ್ರವನ್ನು ಅಪ್ಪಟ ವ್ಯಾಪಾರೀ ಕೇಂದ್ರವಾಗಿಸಿದ ಮಂಗಳೂರಿನ ಆಸ್ಪತ್ರೆಗಳ ಆಹಂನಿಂದ ಕೂಡಿದ ಸರ್ವಾಧಿಕಾರಿ ದೋರಣೆಗೆ ಜಿಲ್ಲೆಯ ಜನತೆ ಬೀದಿಗಿಳಿದು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಎಸ್ಡಿಪಿಐ ಆಗ್ರಹಿಸುತ್ತಿದೆ.

    ಹಣದ ಅಹಂನಲ್ಲಿರುವ ಆಸ್ಪತ್ರೆ ಆಡಳಿತ ಮಂಡಳಿ ನೀಡುವ ದೂರನ್ನು ಕೂಡಲೇ ಪಡೆದು ಸಾಮಾಜಿಕ ಸೇವೆಯಲ್ಲಿ ನಿರತರಾದ ಯುವಕರನ್ನು ಬಂಧಿಸಲು ಅವಸರ ತೋರಿಸುವ ಪೊಲೀಸರು ಇತ್ತೀಚೆಗೆ ಮಂಗಳೂರಿನಲ್ಲಿ ಡಾಕ್ಟರ್ ಪ್ರಿಯಾ ಬಲ್ಲಾಳ್ ಹಾಗೂ ಕೆಲವು ವೈದ್ಯರು ಮತ್ತು ಹಲವು ಆಸ್ಪತ್ರೆಗಳ ಅಮಾನವೀಯ ಕ್ರತ್ಯಗಳಿಂದ ಪಡಬಾರದ ಸಂಕಷ್ಟ ಅನುಭವಿಸಿದ ಖತೀಜಾ ಜಾಸ್ಮಿನ್ ಎಂಬ ತುಂಬು ಗರ್ಭಣಿ ಮಹಿಳೆಯ ದೂರನ್ನು ಏಕೆ ಸ್ವೀಕರಿಸಲಿಲ್ಲ, ಈ ವಿಚಾರದಲ್ಲಿ
    ಎಸ್ ಡಿ ಪಿ ಐ ಸೇರಿದಂತೆ ಹಲವಾರು ಸಂಘಟನೆಗಳು ಧ್ವನಿಗೂಡಿಸಿದರೂ ಚಕಾರವೆತ್ತದ ಪೊಲೀಸರು ಸಂತ್ರಸ್ತ ಕುಟುಂಬದ ಸದಸ್ಯರನ್ನೇ ಬಂಧಿಸಿ ಮಾನಸಿಕ ಹಿಂಸೆ ನೀಡಿದ್ದು ಗಮನಿಸುವಾಗ ಇಲಾಖೆಯ ಅಧಿಕಾರಿಗಳು ಯಾರ ಪರವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ಎಂಬ ಸಂಶಯ ಕಾಡುತ್ತಿದೆ ಇದನ್ನು ಪೊಲೀಸ್ ಇಲಾಖೆ ಸ್ಪಷ್ಟ ಪಡಿಸಬೇಕೆಂದು SDPI ಆಗ್ರಹಿಸುತ್ತಿದೆ

    ಮಂಗಳೂರಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ಇರುವ ಹಳೆಯ ಕಡತಗಳನ್ನು ಪರಿಶೀಲಿಸಿದರೆ ಅನ್ಯಾಯಕ್ಕೊಳಗಾದವರು ವೈದ್ಯರ ಹಾಗೂ ಅಸ್ಪತ್ರೆಗಳ ನಿರ್ಲಕ್ಷ್ಯದ ವಿರುದ್ಧ ನೀಡಿದ ನೂರಾರು ದೂರುಗಳ ಪ್ರತಿಗಳು ಸಿಗಬಹುದು ಆದರೆ ಇಲ್ಲೆಲ್ಲೂ ಕ್ರಮ ಕೈಗೊಳ್ಳದ ಪೊಲೀಸ್ ಇಲಾಖೆ ಇಂದು ಕಾರ್ಪೊರೇಟ್ ನಿಯಂತ್ರಣ ದಲ್ಲಿರುವ ಆಸ್ಪತ್ರೆಯ ಆಡಳಿತ ಮಂಡಳಿ ನೀಡಿದ ದೂರಿಗೆ ಕೂಡಲೇ ಸ್ಪಂದಿಸಿ ಸುಹೈಲ್ ಕಂದಕ್ ರಂತವರನ್ನು ಬಂಧಿಸಿದ್ದಾರೆ, ಎಂದರೆ ಮೆಡಿಕಲ್ ಮಾಫಿಯಾದ ಕರಾಳ ಬೇರುಗಳು ಎಷ್ಟೊಂದು ಆಳವಾಗಿದೆ ಎಂಬುದು ಮನವರಿಕೆ ಆಗುತ್ತದೆ .

    ಜನಸಾಮಾನ್ಯರ ಪರವಾಗಿ ನಿಲ್ಲಬೇಕಾದ ಸರಕಾರ, ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈರೀತಿ ಅಮಾಯಕರನ್ನ ಬಂಧಿಸಿ ಬಂಡವಾಳಶಾಹಿಯ ಪರವಾಗಿ ನಿಲ್ಲುವುದಾದರೆ ನಾಗರಿಕರು ಇಲಾಖೆ ಮೇಲಿನ ವಿಶ್ವಾಸ ಕಳೆದುಕೊಂಡು ಬೀದಿಗಿಳಿಯ ಬೇಕಾಗಬಹುದು .ಇದಕ್ಕೆ ಅವಕಾಶ ನೀಡದೇ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆಕಿಸಿ ಸಂವಿಧಾನ ಬದ್ದವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಇಲ್ಲದಿದ್ದರೆ ಜನಸಾಮಾನ್ಯರ ಪರವಾಗಿ ಅನ್ಯಾಯದ ವಿರುದ್ಧ ವಾಗಿ ಎಸ್ಡಿಪಿಐ ಕಾನೂನು ಹೋರಾಟ ಕೈಗೆತ್ತಿಕೊಳ್ಳಲಿದೆ ಎಂದು ಅಥಾವುಲ್ಲಾ ಎಚ್ಚರಿಕೆ ನೀಡಿದ್ದಾರೆ.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending