Wednesday, October 5, 2022

ಗ್ಯಾಸ್‌ ಸಿಲಿಂಡರ್‌-ಬೈಕ್‌ಗೆ ಹೂಹಾರ ಹಾಕಿ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಬೆಂಗಳೂರು: ಬೆಲೆ ಏರಿಕೆ ಖಂಡಿಸಿ ಇಂದು ದೇಶಾದ್ಯಂತ ಸಿಲಿಂಡರ್, ಬೈಕ್‌​ಗಳಿಗೆ ಹೂವಿನ ಹಾರ ಹಾಕಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.


ಈ ವೇಳೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬೆಲೆ ಏರಿಕೆ ಗಗನಕ್ಕೆ ಹೋಗಿದೆ. ಆದಾಯ ಪಾತಾಳಕ್ಕೆ ಹೋಗಿದೆ.

ಇವತ್ತಿಗೆ ಆರ್ಥಿಕ ವರ್ಷದ ಲೆಕ್ಕಾಚಾರ ಮುಗಿದಿದೆ. ಹೀಗಾಗಿ ಇವತ್ತೇ ಈ ಪ್ರತಿಭಟನೆ ಮಾಡಿದ್ದೇವೆ.

ಗ್ಯಾಸ್ ಸಿಲಿಂಡರ್, ಬೈಕ್ ಕಾರಿಗೆ ಹಾರ ಹಾಕಿ ಪೂಜೆ ಮಾಡಿ ವಿನೂತನ ಪ್ರತಿಭಟನೆ ಮಾಡಿದ್ದೇವೆ. ಜನರು ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದು ತಿಳಿಸಿದರು.

ನೂರು ಬಾರಿ ಪಟ ಪಟ ಅಂತ ಚಪ್ಪಲಿ ಏಟಾದರೂ ತಿನ್ನಬಹುದು.

ದುಡ್ಡಿನ ಏಟು ತಿನ್ನೋಕಾಗಲ್ಲ. ಚಪ್ಪಲಿ ಏಟು ಬಿದ್ದರೆ ಏನೋ ಮಾಡಿ ತೆಗೆಸ್ಕೋಬಹುದು. ಆದರೆ ದುಡ್ಡಿನ ಏಟು ಸಹಿಸಿಕೊಳ್ಳಲಾಗಲ್ಲ ಎಂದರು.

LEAVE A REPLY

Please enter your comment!
Please enter your name here

Hot Topics

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...