Connect with us

    LATEST NEWS

    ರಾಹುಲ್‌ ಗಾಂಧಿ ಅವಹೇಳನ: ನಳಿನ್‌ ವಿರುದ್ಧ ಕಾಂಗ್ರೆಸ್‌ ನಾಯಕರ ವಾಗ್ದಾಳಿ

    Published

    on

    ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಅವಿವೇಕಿ. ಅವರಿಗೆ ತಲೆ ಕೆಟ್ಟಿದೆ’ ಎಂದು ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್ ವಾಗ್ದಾಳಿ ನಡೆಸಿದರು.


    ಸುದ್ದಿಗಾರರ ಜೊತೆ ಮಾತನಾಡಿ, ‘ನಳಿನ್ ಕುಮಾರ್ ಕಟೀಲ್ ಅವರು ರಾಹುಲ್ ಗಾಂಧಿ ಬಗ್ಗೆ ಮಾತನಾಡಿದ್ದಾರೆ. ಎಂಥ ಅವಿವೇಕಿಯನ್ನು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷನನ್ನಾಗಿ ಮಾಡಿದೆ ಎನ್ನುವುದನ್ನು ಇದು ತೋರಿಸುತ್ತದೆ’ ಎಂದರು.


    ‘ನಳಿನ್‌ ಕುಮಾರ್ ಕಟೀಲ್ ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ. ಬಿಜೆಪಿ ಅಧ್ಯಕ್ಷರಾದ ನಂತರ ಅವರು ಮನಸ್ಸು ಎಷ್ಟು ಕೊಳಕಾಗಿದೆ ಎನ್ನುವುದು ಗೊತ್ತಾಗುತ್ತದೆ. ಅವರಿಗೆ ಕ್ಷಮೆ ಕೇಳುವ ಅರ್ಹತೆಯೂ ಇಲ್ಲಕ. ಆ ಸ್ಥಾನದಿಂದ ಅವರನ್ನು ತಕ್ಷಣ ವಜಾ ಮಾಡಬೇಕು‌’ ಎಂದು ಆಗ್ರಹಿಸಿದರು.
    ಇದರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಟ್ವೀಟ್‌ ಮಾಡಿ, ನಿನ್ನೆ ನಾನು ಮಾತನಾಡುವಾಗ “ರಾಜಕೀಯ ವಿರೋಧಿಗಳೊಡನೆ ನಾಗರಿಕ ಮೌಲ್ಯದ ಜೊತೆಗೆ ಗೌರವಯುತವಾಗಿ ನಡೆದುಕೊಳ್ಳೋದ್ರಲ್ಲಿ ನಂಬಿಕೆಯಿದೆ” ಎಂದಿದ್ದೆ. ಬಿಜೆಪಿ ಇದನ್ನು ಒಪ್ಪುತ್ತದೆಂದು ಭಾವಿಸಿದ್ದೆ ಆದರೆ, ಬಿಜೆಪಿ ರಾಜ್ಯಾಧ್ಯಕ್ಷರು ಶ್ರೀ ರಾಹುಲ್ ಗಾಂಧಿಯವರನ್ನು ಅಸಂಸದೀಯ ಪದಗಳಿಂದ ನಿಂದಿಸಿದ್ದು, ಕ್ಷಮೆ ಯಾಚಿಸುತ್ತಾರೆಂದು ಭಾವಿಸುತ್ತೇನೆ ಎಂದಿದ್ದಾರೆ.
    ಕಟೀಲ್ ಒಬ್ಬ ಮೆಚ್ಯೂರಿಟಿ ಇಲ್ಲದ ರಾಜಕಾರಣಿ. ಅವರಿಗೆ ಮೆಂಟಲ್ ಬ್ಯಾಲೇನ್ಸ್ ಹೋಗಿದೆ. ನಿಮ್ಹಾನ್ಸ್​ನಲ್ಲಿ ತೋರಿಕೊಳ್ಳೋದು ಒಳ್ಳೆಯದು. ಬಿಜೆಪಿ ವರಿಷ್ಠರು ಕಟೀಲ್​ರನ್ನ ಹುಚ್ಚಾಸ್ಪತ್ರೆಗೆ ಸೇರಿಸಬೇಕು. ರಾಹುಲ್ ಕುರಿತು ಅಸಂಬದ್ಧ ಹೇಳಿಕೆಯನ್ನ ಖಂಡಿಸುವೆ ಎಂದು ಸಿಂದಗಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
    ಬಿಜೆಪಿಯವ್ರನ್ನ ಆದಷ್ಟು ಬೇಗನೇ ನಶಾಮುಕ್ತಿ ಕೇಂದ್ರಕ್ಕೆ ಸೇರಿಸಬೇಕು. ಅಧಿಕಾರದ ನಶೆಯಲ್ಲಿ ಬಿಜೆಪಿ ನಾಯಕರು ತೇಲುತ್ತಿದ್ದಾರೆ. ಹೀಗಾಗಿ ಇಂಥಹ ಹೀನ ಹೇಳಿಕೆ ನೀಡ್ತಿದ್ದಾರೆ. ಗುಜರಾತ್ ಅದಾನಿ ಪೋರ್ಟ್​ನಿಂದ 2 ಲಕ್ಷ ಕೋಟಿ ಮೌಲ್ಯದ 25 ಸಾವಿರ ಕೆಜಿ ಡ್ರಗ್ ಬಂತಲ್ಲ, ಅದನ್ನ ಅವರು ಸೇವಿಸಿರಬೇಕು. ಕಟೀಲ್​ರನ್ನ ಹುಚ್ಚಾಸ್ಪತ್ರೆಗೆ ಸೇರಿಸಬೇಕು. ಮದ ತುಂಬಿ ಹೀಗೆ ಮಾತನಾಡ್ತಿದ್ದಾರೆ ಎಂದು ರಣದೀಪ್ ಸುರ್ಜೆವಾಲಾ ಆಕ್ರೋಶ ಹೊರಹಾಕಿದ್ದಾರೆ.

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    Trending