Tuesday, July 27, 2021

ಕ್ಷೀಣಿಸುತ್ತಿರುವ ಆಸ್ಕರ್‌ ಆರೋಗ್ಯ: ಕೇಂದ್ರ-ರಾಜ್ಯ ನಾಯಕರು ಮಂಗಳೂರಿಗೆ ದೌಡು

ಬೆಂಗಳೂರು: ಮಾಜಿ ಕೇಂದ್ರ ಸಚಿವ ಆಸ್ಕರ್‌ ಫೆರ್ನಾಂಡಿಸ್‌ ಯೋಗ ವೇಳೆ ಬಿದ್ದು ಮೆದುಳಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.


ಜು. 23ರಂದು ಪಂಚ ಜಿಲ್ಲೆಗಳ ಆಹ್ವಾನಿತ ಕಾಂಗ್ರೆಸ್ ಮುಖಂಡರ ಸಭೆ ಮಂಗಳೂರಿನಲ್ಲಿ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅಧ್ಯಕ್ಷತೆಯಲ್ಲಿ ಪೂರ್ವ ನಿಗದಿಯಂತೆ ಕಾರ್ಯಕ್ರಮ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಪ್ರತಿಪಕ್ಷ ಮುಖಂಡ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್‌.ಆರ್‌. ಪಾಟೀಲ್‌, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಧೃವನಾರಾಯಣ್, ಈಶ್ವರ ಖಂಡ್ರೆ ಮತ್ತಿತರ ಮುಖಂಡರು ಇಂದು ಸಂಜೆ ನಗರಕ್ಕೆ ಆಗಮಿಸಲಿದ್ದಾರೆ.

ಈ ಮಧ್ಯೆ ಹಿರಿಯ ನಾಯಕನ ಆರೋಗ್ಯ ವಿಚಾರಿಸಲು ರಣದೀಪ್ ಸಿಂಗ್ ಸುರ್ಜೆವಾಲ, ಸಿದ್ದರಾಮಯ್ಯ ಸೇರಿದಂತೆ ಹಲವರು ಆಸ್ಪತ್ರೆಗೆ ಭೇಟಿ ನೀಡುವ ನಿರೀಕ್ಷೆ ಇದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...