Connect with us

LATEST NEWS

MLC ಚುನಾವಣಾ ಫೈಟ್‌: ಎಂಎನ್‌ಆರ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡುವಂತೆ ಡಿಕೆಶಿ ಭೇಟಿ ಮಾಡಿ ಕೈ ನಾಯಕರ ಒತ್ತಾಯ

Published

on

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಿಂದ ಸ್ಥಳೀಯಾಡಳಿತ ಸದಸ್ಯರಿಂದ ಆಯ್ಕೆಯಾಗಲು ನಡೆಯುವ ಎರಡು ವಿಧಾನಪರಿಷತ್ ಚುನಾವಣೆ ಸಹಕಾರಿ ಧುರೀಣ ಎಂ ಎನ್ ರಾಜೇಂದ್ರ ಕುಮಾರ್ ಎಂಟ್ರಿಯಾದಾಗಿನಿಂದ ಹೊಸ ಟ್ವಿಸ್ಟ್‌ ಸಿಕ್ಕಿದೆ.


ವಿಧಾನಪರಿಷತ್​ಗೆ ಇಬ್ಬರ ಅವರ ಅವಧಿ ಮುಗಿದ ಹಿನ್ನೆಲೆಯಲ್ಲಿ ಖಾಲಿಯಾಗುವ ಎರಡು ಸ್ಥಾನಗಳಿಗೆ ಈಗಾಗಲೇ ಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ ಒಂದು ಸ್ಥಾನಕ್ಕೆ ಎರಡು ಪಕ್ಷಗಳು ತಯಾರಿಗಳನ್ನು ಆರಂಭಿಸಿವೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮತ್ತೊಮ್ಮೆ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆಯಿದೆ.

ಕಾಂಗ್ರೆಸ್​ನಿಂದ ಈ ಬಾರಿ ಪ್ರತಾಪ್ ಚಂದ್ರ ಶೆಟ್ಟಿ ಸ್ಪರ್ಧೆ ಮಾಡದೆ ಇರುವುದರಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈಗಾಗಲೇ 11 ಮಂದಿ ಕಾಂಗ್ರೆಸ್​ನಿಂದ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ಅಭ್ಯರ್ಥಿಗಳ ಘೋಷಣೆಯಾಗಬೇಕಿದೆ.

ಇದರ ನಡುವೆ ಎಸ್‌ಸಿ ಡಿಸಿಸಿ ಬ್ಯಾಂಕ್​ನ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ (SCDCC Bank Chairman Dr. MN Rajendra Kumar) ಅವರ ಸ್ಪರ್ಧೆ ಕಾಂಗ್ರೆಸ್-ಬಿಜೆಪಿಯ ಲೆಕ್ಕಾಚಾರವನ್ನು ತಲೆ ಕೆಳಗು ಮಾಡಿದೆ.
ಸ್ಥಳೀಯಾಡಳಿತ ಬಲಾಬಲ ಪ್ರಕಾರ, ಎರಡು ಸ್ಥಾನದಲ್ಲಿ ಬಿಜೆಪಿಗೆ ಒಂದು ಸ್ಥಾನ ಗೆಲ್ಲುವ ಮತಗಳು ಇದ್ದರೆ, ಕಾಂಗ್ರೆಸ್​ಗೆ ಒಂದು ಸ್ಥಾನ ಗೆಲ್ಲಲು ಕೆಲವು ಮತಗಳ ಕೊರತೆಯಿದೆ.

ಸಾಧಾರಣವಾಗಿ ಪಕ್ಷೇತರ ಅಭ್ಯರ್ಥಿಗಳು ದಕ್ಷಿಣ ಕನ್ನಡ ಚುನಾವಣೆಯಲ್ಲಿ ನಿರ್ಣಾಯಕವಾಗದೆ ಇದ್ದರೂ ಪ್ರಭಾವಿಯಾಗಿರುವ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಸ್ಪರ್ಧಿಸುತ್ತಿರುವುದು ಬಿಜೆಪಿ ಕಾಂಗ್ರೆಸ್ ಪಕ್ಷದ ಒಂದು ಸ್ಥಾನ ಗೆಲುವು ಎಂಬ ನಿರೀಕ್ಷೆಗೆ ತಣ್ಣೀರೆರಚಿದೆ.

ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಇನ್ನೂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಆದರೆ, ಪಕ್ಷೇತರ ಅಭ್ಯರ್ಥಿ ಡಾ. ಎಂ. ಎನ್ ರಾಜೇಂದ್ರ ಕುಮಾರ್ ಅವರು ಸ್ಪರ್ಧೆಯ ಘೋಷಣೆ ಮಾಡಿ ಚುನಾವಣಾ ಕಚೇರಿಯನ್ನು ಉದ್ಘಾಟಿಸಿದ್ದಾರೆ.

ಚುನಾವಣಾ ಕಚೇರಿ ಉದ್ಘಾಟನೆ ವೇಳೆಯೆ ಅವರು ತಮ್ಮ ಬಲಪ್ರದರ್ಶನವನ್ನು ಮಾಡಿದ್ದಾರೆ. ನವೆಂಬರ್ 22 ರಂದು ನಾಮಪತ್ರ ಸಲ್ಲಿಸುವ ಘೋಷಣೆಯನ್ನು ಮಾಡಿದ್ದಾರೆ.

ಈ ಮಧ್ಯೆ ಅನಿವಾರ್ಯವಾಗಿ ಕಾಂಗ್ರೆಸ್‌ ಸಹ ಚುನಾವಣೆಗೆ ಅಭ್ಯರ್ಥಿ ಘೋಷಿಸಿದರೆ ಗೆಲ್ಲುವುದು ಅಷ್ಟು ಸುಲಭವಲ್ಲ. ಆದ್ದರಿಂದ ಎಂ. ಎನ್ ರಾಜೇಂದ್ರ ಕುಮಾರ್ ಅವರಿಗೆ ಬೆಂಬ ನೀಡುವ ಸಾಧ್ಯತೆಯೂ ಹೆಚ್ಚಿದೆ.

ಎಂಎನ್‌ಆರ್‌ ಟಿಕೆಟ್‌ ನೀಡುವಂತೆ ಕೈ ಮುಖಂಡರಿಂದ ಒತ್ತಾಯ

ಈ ಮಧ್ಯೆ ಬುಧವಾರ ಸಂಜೆ ನಡೆದ ಅತ್ಯಂತ ಅನಿರೀಕ್ಷಿತ ಬೆಳವಣಿಗೆಯಲ್ಲಿ ಜಿಲ್ಲೆಯ ಕೆಲವು ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ನಿಂದ ಎಂ.ಎನ್ ರಾಜೇಂದ್ರಕುಮಾರ್‌ಗೆ ವಿಧಾನಪರಿಷತ್ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಕಣಚೂರು ಮೋಹನ್ ಹಾಗೂ ಎಂ.ಎನ್.ರಾಜೇಂದ್ರಕುಮಾರ್ ಅವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಎಂ.ಎನ್.ರಾಜೇಂದ್ರಕುಮಾರ್ ಅವರಿಗೆ ದ.ಕ. -ಉಡುಪಿಯಿಂದ ಕಾಂಗ್ರೆಸ್ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಡಿಕೆಶಿ ಅವರನ್ನು ಒತ್ತಾಯಿಸಿದ್ದಾರೆ.

LATEST NEWS

ಈಜಲು ಹೋದ ಅಣ್ಣ ನೀರು*ಪಾಲು.! ತಂಗಿಯ ವೀಡಿಯೋದಲ್ಲಿ ಸೆರೆಯಾಯ್ತು ಅಣ್ಣನ ಸಾ*ವಿನ ಕೊನೆ ಕ್ಷಣ..!

Published

on

ಕೋಲಾರ: ಕೃಷಿ ಹೊಂಡದಲ್ಲಿ ಈಜುತ್ತಿರುವುದನ್ನು ತಂಗಿ ವೀಡಿಯೋ ಮಾಡುತ್ತಿದ್ದಾಗಲೇ ಸಹೋದರ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆಯೊಂದು ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನ ನಾಗವಾಳ ಗ್ರಾಮದಲ್ಲಿಈ ಘಟನೆ ನಡೆದಿದೆ.

swim death

ಮುಂದೆ ಓದಿ..; ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕಾಮಕಾಂಡ?

ಮೈಸೂರಿನ ರಾಘವೇಂದ್ರ ನಗರ ನಿವಾಸಿ ಗೌತಮ್(26 ವ) ಮೃತ ದುರ್ದೈವಿ. ಗೌತಮ್ ತನ್ನ ತಂದೆಯ ಊರು ವೇಮಗಲ್ ಸಮೀಪದ ನಾಗಾವಾಳಕ್ಕೆ ಬಂದಿದ್ದರು. ಈ ವೇಳೆ ಕುಟುಂಬ ಸದಸ್ಯರು ಹಾಗೂ ತಂಗಿಯ ಜೊತೆ ಕೃಷಿ ಹೊಂಡದ ಬಳಿ ಹೋಗಿದ್ದಾರೆ.  ಅಲ್ಲಿ ತಂಗಿಯ ಬಳಿ ವೀಡಿಯೋ ಮಾಡಲು ಮೊಬೈಲ್ ಕೊಟ್ಟು ಹೊಂಡಕ್ಕೆ ಈಜಲು ಧುಮುಕಿದ್ದಾರೆ. ಸರಿಯಾಗಿ ಈಜಲು ಗೊತ್ತಿರದ ಗೌತಮ್ ನೀರಿಗೆ ಧುಮುಕಿದ್ದು, ಇತ್ತ ತಂಗಿ ಈಚೆ ಬಾ ಎಂದು ಕೂಗುವುದು ವೀಡಿಯೋದಲ್ಲಿ ರೆಕಾರ್ಡ್‌ ಆಗಿದೆ. ನೋಡು ನೋಡುತ್ತಿದ್ದಂತೆ ಗೌತಮ್ ನೀರಲ್ಲಿ ಮುಳುಗಿ ಉಸಿರು ಚೆಲ್ಲಿದ್ದಾರೆ. ಇನ್ನು ಈ ವೀಡಿಯೋದಲ್ಲಿ ಗೌತಮ್ ನೀರಿನಲ್ಲಿ ಮುಳುಗುವ ದೃಶ್ಯ ಸೆರಯಾಗಿದೆ. ಈ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading

FILM

ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ‘ಗಬ್ಬರ್ ಸಿಂಗ್’ ತುಳು ಚಲನಚಿತ್ರ ಬಿಡುಗಡೆ

Published

on

ಉಡುಪಿ : ಬಹು ನಿರೀಕ್ಷಿತ ತುಳು ಚಿತ್ರ “ಗಬ್ಬರ್ ಸಿಂಗ್” ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ ಸಮಾರಂಭವೂ ನಡೆಯಿತು.

ತೊಟ್ಟಂ ಚರ್ಚ್ ನ ಧರ್ಮಗುರು ಫಾದರ್ ಡೆನಿಸ್ ಡೆಸಾ, ಶಂಕರಪುರದ ಸಾಯಿ ಈಶ್ವರ ಗುರೂಜಿ, ಮಿಯಾರ್ ಮಸೀದಿಯ ಮೌಲ್ವಿ  ಅಬುಲ್ ಹಸನ್, ರಾಜಕೀಯ ಮುಖಂಡರಾದ ಗೀತಾಂಜಲಿ ಸುವರ್ಣ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಸರಳಾ ಕಾಂಚನ್, ಶಿಲ್ಪಾ ಭಟ್, ಉಡುಪಿ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೃಷ್ಣಮೂರ್ತಿ ಆಚಾರ್ಯ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಚಿತ್ರದ ಕಲಾವಿದರಾದ ವೀಣಾ ಎಸ್ ಶೆಟ್ಟಿ, ಸಂದೀಪ್ ಭಕ್ತ, ಆದ್ಯ, ಚಂದ್ರಹಾಸ್ ಕಪ್ಪೆಟ್ಟು, ಕಿಶೂ ಎಂಟರ್‌ಪ್ರೈಸಸ್ ವ್ಯವಸ್ಥಾಪಕ ನಿರ್ದೇಶಕರಾದ ಕಿಶೋರ್ ಗೊನ್ಸಾಲ್ವಿಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.

ಇದನ್ನೂ ಓದಿ : ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

‘ಗಬ್ಬರ್ ಸಿಂಗ್’ ಚಿತ್ರವು ಕೌಟುಂಬಿಕ ಅಂಶಗಳನ್ನು ಒಳಗೊಂಡಿರುವ ಆಕ್ಷನ್ ಥ್ರಿಲ್ಲರ್ ಆಗಿದೆ. ಕಥೆ ಮತ್ತು ಚಿತ್ರಕಥೆಯನ್ನು ಸತೀಶ್ ಪೂಜಾರಿ ಬಾರ್ಕೂರು ರಚಿಸಿದ್ದು, ಪ್ರದೀಪ್ ನಿರ್ದೇಶನವಿದೆ. ತುಳು ಚಿತ್ರರಂಗದ ಹೆಸರಾಂತ ನಟರುಗಳು ಈ ಚಿತ್ರದಲ್ಲಿ ಪಾತ್ರವಾಗಿದ್ದಾರೆ.

Continue Reading

LATEST NEWS

ಆಭರಣ ಮಳಿಗೆಯಲ್ಲಿ ಎಸಿ ಸ್ಫೋಟ; ಮೂವರಿಗೆ ಗಂ*ಭೀರ ಗಾಯ

Published

on

ಬಳ್ಳಾರಿ :ಎಸಿ ಸ್ಫೋ*ಟಗೊಂಡ ಪರಿಣಾಮ ಮೂವರು ಗಂ*ಭೀರವಾಗಿ ಗಾ*ಯಗೊಂಡಿರುವ ಘಟನೆ ಬಳ್ಳಾರಿಯ ಕಲ್ಯಾಣ್ ಜ್ಯುವೆಲರ್ಸ್‍ನಲ್ಲಿ ನಡೆದಿದೆ. ಗಾಯಾಳುಗಳನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಬಳ್ಳಾರಿ ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘ*ಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾ*ಸ್ಟ್ ಆದ ಪರಿಣಾಮ ಮಳಿಗೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ.

ಇದನ್ನೂ ಓದಿ : ಏನಾಶ್ಚರ್ಯ! ರೋಬೋಟ್ ಜೊತೆ ಮದುವೆಯಾಗುತ್ತಿದ್ದಾನೆ ಈ ಯುವಕ!

ಸ್ಫೋ*ಟದ ತೀವ್ರತೆಗೆ ಕಿಟಕಿ ಗಾಜುಗಳು ಒಡೆದು ಹೋಗಿವೆ. ಘಟನೆಯಿಂದಾಗಿ ಮಳಿಗೆಯಲ್ಲಿ ದಟ್ಟ ಹೊಗೆ ಆವರಿಸಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಸ್ಫೋ*ಟ ಸಂಭವಿಸಿದೆ ಎಂದು ತಿಳಿದು ಬಂದಿದೆ.

Continue Reading

LATEST NEWS

Trending