DAKSHINA KANNADA
ಕಾಂಗ್ರೆಸ್ ರಾಜ್ಯದಲ್ಲಿ ಭಯೋತ್ಪಾದನೆಯನ್ನು ಪೋಷಿಸುತ್ತಿದೆ: ನಳಿನ್ ಕುಮಾರ್ ಕಟೀಲ್..!
ಮಂಗಳೂರು: ರಾಜ್ಯದಲ್ಲಿ ಭಯೋತ್ಪಾದನೆಯನ್ನು ಮಟ್ಟ ಹಾಕಲು ಶ್ರಮಿಸುತ್ತಿರುವ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಹೇಯಾ ಕಾರ್ಯವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.
ಇಂದು ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ‘ಬಿಂದ್ರನೆವಾಲೆಯ ಭಯೋತ್ಪಾದನೆಗೆ ಇಂದಿರಾ ಗಾಂಧಿ ಪ್ರೇರಣೆ ನೀಡಿದ್ದರು. ಕಾಂಗ್ರೆಸ್ ಅಧಿಕಾರದಲ್ಲಿರುವಾಗ ಕಾಶ್ಮೀರದಲ್ಲಿ ಪ್ರಾರಂಭವಾದ ಭಯೋತ್ಪಾದನೆ ದೇಶದ ಎಲ್ಲಾ ಭಾಗಗಳಿಗೆ ಹಬ್ಬಿತ್ತು.
ಆ ಕಾಲಘಟ್ಟದಲ್ಲಿ ಉಗ್ರನ ಎನ್‌ಕೌಂಟರ್ ಆದ ಸಂದರ್ಭದಲ್ಲಿ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಕಣ್ಣೀರು ಹಾಕಿರುವಂಥದ್ದು, ಮುಂಬೈ ದಾಳಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಭಯೋತ್ಪಾದಕ ಕಸಬ್‌ಗೆ ಬಿರಿಯಾನಿ ತಿನ್ನಿಸಿರುವುದು, ಅವನನ್ನು ಅತಿಥಿ ರೀತಿಯಾಗಿ ಸತ್ಕಾರ ಮಾಡಿರುವಂಥದ್ದು ಇವೆಲ್ಲಾ ಕಾಂಗ್ರೆಸ್‌ನ ಹಿನ್ನೆಲೆಗಳು ಅಂತ ಎಲ್ಲರಿಗೂ ಗೊತ್ತೇ ಇದೆ.
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪೊಲೀಸರೇ ತನಿಖೆ ಮಾಡಿ ಭಯೋತ್ಪಾದನೆ ಎಂದು ಹೇಳಿದ್ರೂ ಅವರ ಕೆಲಸವನ್ನು ಪ್ರಶ್ನಿಸುವ ಹಂತಕ್ಕೆ ಕಾಂಗ್ರೆಸ್ ಇಳಿದಿದೆ. ಒಟ್ಟಾರೆ ಸ್ವಾತಂತ್ರ್ಯಕ್ಕಾಗಿ ಕೆಲಸ ಮಾಡಿದ ಕಾಂಗ್ರೆಸ್ ರಾಷ್ಟ್ರ ವಿರೋಧಿ ಕೃತ್ಯದಲ್ಲಿ ತೊಡಗಿಕೊಂಡಿದೆ.
ಇನ್ನು ಇದೇ ಮಾನಸಿಕತೆಯನ್ನು ಹೊಂದಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷನ ಹೇಳಿಕೆ ಒಂದು ರೀತಿಯಾಗಿ ಭಯೋತ್ಪಾದಕರಿಗೆ ಪ್ರೇರಣೆಯನ್ನು ನೀಡುವಂತ ಹೇಳಿಕೆಯಾಗಿದೆ.
ಇದೇ ಶಾರೀಕ್ ಆವತ್ತು ಗೋಡೆ ಬರಹ ಬರೆದಿದ್ದಾಗ ಕೂಡಾ ಕಾಂಗ್ರೆಸ್ ಬೆಂಬಲಿಸಿದೆ. ಅಂದ್ರೆ ಕೇವಲ ಅಧಿಕಾರಕ್ಕಾಗಿ, ಮತಬ್ಯಾಂಕಿಗಾಗಿ ಕಾಂಗ್ರೆಸ್ ಭಯೋತ್ಪಾದನೆಯನ್ನೇ ಪ್ರೇರೇಪಿಸುತ್ತಿದೆ. ಮುಂದಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭಯೋತ್ಪಾದನೆಗೆ ಪ್ರೇರಣೆ ನೀಡಲಿದೆ.
ಮಂಗಳೂರು ಬಾಂಬ್ ಪ್ರಕರಣವನ್ನು ಭಯೋತ್ಪಾದನೆಯಲ್ಲ ಅಂತ ಡಿಕೆಶಿ ಬಿಂಬಿಸುತ್ತಿದ್ದಾರೆ. ಕಾಶ್ಮೀರದ ಕಾಂಗ್ರೆಸ್ ನಾಯಕ ಭಯೋತ್ಪಾದಕರಿಗೆ ಒಂದು ಕೋಟಿ ಆಫರ್ ನೀಡಿದ್ದಾನೆ. ಒಂದು ರಾಷ್ಟ್ರೀಯ ಪಾರ್ಟಿಯ ಅಧ್ಯಕ್ಷರಾಗಿ. ಈ ದೇಶದ ಸುದೀರ್ಘ ಅವಧಿಯ ಆಡಳಿತ ಮಾಡಿರುವಂತಹ ಒಬ್ಬ ಅಧ್ಯಕ್ಷನಾಗಿ ಪೊಲೀಸ್ ಇಲಾಖೆಯ ಮೇಲೆ ಗೌರವ ಇಲ್ಲದಿರುವುದು, ಅವರ ಕೆಲಸದ ಮೇಲೆ ನಂಬಿಕೆ ಇಲ್ಲದಿರುವುದು, ಮತ್ತು ಭಯೋತ್ಪಾದಕರ ಮೇಲೆ ಪ್ರೀತಿ ಇರುವಂಥದನ್ನು ನಾನು ಖಂಡಿಸುತ್ತೇನೆ.
ಪಿಎಫ್ಐ ಕ್ರಿಮಿನಲ್ ಗಳ ಕೇಸ್ ಹಿಂದೆಗೆದು ಕಾಂಗ್ರೆಸ್ ಬಿ ರಿಪೋರ್ಟ್ ಹಾಕಿದೆ. ಅಷ್ಟೇ ಅಲ್ಲದೆ ವೋಟರ್ ಡಿ ಹಗರಣ ಮುಚ್ಚುವ ಕೆಲಸ ಈ ಹಿಂದೆ ಕಾಂಗ್ರೆಸ್ ಮಾಡಿದೆ. ಬಿಜೆಪಿಗೆ ಈ ಪ್ರಕರಣ ಮುಚ್ಚುವ ಅಗತ್ಯತೆ ಇಲ್ಲ. ಕಾಂಗ್ರೆಸ್ ಕಾಲಘಟ್ಟದ ಹಗರಣದ ಪಿಎಸ್ಐ ಅಕ್ರಮ ನೇಮಕಾತಿಯ ದೊಡ್ಡ ದೊಡ್ಡ ಕುಳಗಳ ಬಂಧನವಾಗಿದೆ. ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಯುತ್ತಿದೆ. ಇಂತಹ ಯಾವ ಕೆಲಸವನ್ನೂ ಬಿಜೆಪಿ ಮಾಡೋದಿಲ್ಲ. ಭ್ರಷ್ಟಾಚಾರ ಆಗುವ ಎಲ್ಲಾ ಪ್ರಕರಣವನ್ನು ನಾವು ತನಿಖೆಗೆ ಕೊಟ್ಟಿದ್ದೇವೆ.
ಎನ್‌ಐಎಯಂತಹ ತನಿಖಾ ಸಂಸ್ಥೆಗಳು ಹೇಳಿದಾಗಲೂ ಇವರು ಭಯೋತ್ಪಾದನೆಯನ್ನು ಬೆಂಬಿಸುತ್ತಾರೆಂದರೆ ಇವರ ಮಾನಸಿಕತೆ ಹೊಂದಿರುವ ಇವರು ಮಾಡುವ ಚಿಲ್ಲರೆ ರಾಜಕೀಯವನ್ನು ಜನತೆ ಸಹಿಸೋದಿಲ್ಲ. ಡಿಜೆಹಳ್ಳಿ ಕೆಜೆ ಹಳ್ಳಿ ಗಲಭೆಯ ಹಿಂದೆ ಕಾಂಗ್ರೆಸ್ ಮೇಯರ್ ಇದ್ದಿದ್ದು ತನಿಖೆಯಲ್ಲಿ ಗೊತ್ತಾಗಿದೆ. ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆ ಜೊತೆ ಕಾಂಗ್ರೆಸ್ ಒಪ್ಪಂದ ಮಾಡಿಕೊಂಡಿದೆ’ ಎಂದು ವಾಗ್ದಾಳಿ ನಡೆಸಿದರು.
DAKSHINA KANNADA
ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನ-ಇಬ್ಬರು ಅರೆಸ್ಟ್..!
ಉಳ್ಳಾಲ: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಯನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಹೊರವಲಯದ ಉಳ್ಳಾಲ ಸಮೀಪದ ಸಿಗ್ರೌಂಡ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ತಿಕಟ್ಟೆ ಆಝಾದನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪುರ ದ ಸಮೀರ್ ಎಂಬವರನ್ನು ಬಂಧಿಸಲಾಗಿದೆ.
ಈ ಇಬ್ಬರು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14ಗ್ರಾಂ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿಗಳನ್ನು ಬಂಧಿಸಿ, 14 ಗ್ರಾಂ ಎಂಡಿಎಂಎ ಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ಐ ಶೀತಲ್ ಹಾಗೂ ಸಿಬ್ಬಂದಿಗಳಾದ ರಂಜಿತ್, ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಭಾಗವಹಿಸಿದ್ದರು.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.
DAKSHINA KANNADA
ಮನೆಯ ಯಜಮಾನನ್ನು ಕಟ್ಟಿ ಹಾಕಿ ನಗ, ನಗದು ದರೋಡೆ- 6 ಜನ ಬಂಧನ..!
ಪುತ್ತೂರು: ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ. 7ರಂದು ನಡೆದಿದ್ದು, ಇದೀಗ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.
ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದಾನೆ.
ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.
ನಸುಕಿನ ಜಾವ ಸುಮಾರು 2 ಗಂಟೆಗೆ ಮನೆಯ ಮುಂದಿನ ಬಾಗಿಲ ಮೂಲಕ ಮನೆಯೊಳಗೆ ನುಗ್ಗಿದ ಸುಮಾರು 8 ಜನರಿದ್ದ ಮುಸುಕುಧಾರಿಗಳ ತಂಡ ಗುರುಪ್ರಸಾದ್ ಅವರನ್ನು ಕಟ್ಟಿ ಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ನಷ್ಟು ಚಿನ್ನವನ್ನು ದರೋಡೆ ಮಾಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ವಿಶೇಷ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದರು.
DAKSHINA KANNADA
ಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲ್ ಮಾಡಿದ ಭಟ್- ಪ್ರಕರಣ ದಾಖಲು..!
ಪುತ್ತೂರು: ಬಣ್ಣದ ಮಾತುಗಳಿಂದ ವಿಶ್ವಾಸಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಪ್ರಕರಣದ ಆರೋಪಿ.
ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು, ಕ್ಲಬ್ ಹೌಸ್ ಆ್ಯಪ್ ನಲ್ಲಿ ಹಾಡುತ್ತಿದ್ದಳು.
2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ.
2023 ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ.
ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ.
ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ.
ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ.
ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.
ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ.
ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾನೆ.
ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಾರವಾರದ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
- FILM7 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ