Connect with us

    BANTWAL

    ಬಂಟ್ವಾಳದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಮಾಲೋಚನಾ ಸಭೆ

    Published

    on

    ಬಂಟ್ವಾಳ: ತಾಲೂಕಿನ ಸಜೀಪಮುನ್ನೂರು ಜಿಲ್ಲಾ ಪಂಚಾಯತ್ ಮತ್ತು ಪುರಸಭಾ ವ್ಯಾಪ್ತಿಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ ಸಮಾಲೋಚನಾ ಸಭೆಯು ಬಿ. ಸಿ ರೋಡ್ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು.


    ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲಾದ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಲ್ನಾಡು, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸುದೀಪ್ ಕುಮಾರ್, ದ.ಕ.ಜಲ್ಲಾ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ,

    ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಶ್ರೀಮತಿ ಜಯಂತಿ ವಿ ಪೂಜಾರಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್,ಪುರಸಭಾ ಉಪಾಧ್ಯಕ್ಷ ಶ್ರೀಮತಿ ಜೇಸಿಂತ ಡಿ’ಸೋಜ,ಪಿ.ರಹೀಂ, ಜೊಸ್ಪಿನ್ ಡಿ ‘ಸೋಜ ಹಾಗೂ ವಲಯ ಅಧ್ಯಕ್ಷರುಗಳು, ಪಂಚಾಯತ್ ಅಧ್ಯಕ್ಷರು ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.


    ಅದೇ ರೀತಿ ತಾಲೂಕಿನ ಕೊಳ್ನಾಡು ಜಿಲ್ಲಾ ಪಂಚಾಯತ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲೆ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ ಸಮಾಲೋಚನಾ ಸಭೆಯು ಕೂಡಾ ಕುಡ್ತಮುಗೇರು ವಿಜಯಶ್ರೀ ಕಲ್ಯಾಣ ಮಂಟಪದಲ್ಲಿ ನಡೆಯಿತು.

    ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲಾದ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕೊಲ್ನಾಡು, ಬಂಟ್ವಾಳ ಉಸ್ತುವಾರಿ ರಕ್ಷಿತ್ ಶಿವರಾಮ್,ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ,ಎಂ ಎಸ್ ಮೊಹಮ್ಮದ್,

    ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸುದೀಪ್ ಕುಮಾರ್, ದ.ಕ.ಜಲ್ಲಾ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ,ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀಮತಿ ಮಲ್ಲಿಕಾ ಪಕಳ,ಉಸ್ಮಾನ್ ಕರೋಪಾಡಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್, ವಲಯ ಅಧ್ಯಕ್ಷರು ಖಾದರ್ ಮೋಸ ಹಾಗೂ ವಲಯ ಅಧ್ಯಕ್ಷರುಗಳು, ಪಂಚಾಯತ್ ಅಧ್ಯಕ್ಷರು ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

    BANTWAL

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು

    Published

    on

    ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.

    ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.

    ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ

    Continue Reading

    BANTWAL

    ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ

    Published

    on

    ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.

    ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.

    ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.

    Continue Reading

    BANTWAL

    ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!

    Published

    on

    ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್‌ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

    ಸುರತ್ಕಲ್: ಖಾಸಗಿ ಬಸ್ ಢಿ*ಕ್ಕಿ; ದ್ವಿಚಕ್ರ ಸವಾರನಿಗೆ ಗಾ*ಯ

    Continue Reading

    LATEST NEWS

    Trending