Wednesday, October 5, 2022

ಇನ್ನು ಮುಂದೆ ಗಾಂಧಿ ಕುಟುಂಬದವರಿಗೆ ಅಧ್ಯಕ್ಷ ಸ್ಥಾನ ಬೇಡ-ರಾಹುಲ್‌ಗಾಂಧಿ ಸ್ಪಷ್ಟನೆ..!

ಹೊಸದಿಲ್ಲಿ: ಇನ್ನು ಮುಂದೆ ಗಾಂಧಿ ಕುಟುಂಬದಿಂದ ಯಾರೂ ಮುಂದಿನ ಕಾಂಗ್ರೆಸ್ ಅಧ್ಯಕ್ಷರಾಗುವುದಿಲ್ಲ ಎಂದು ರಾಹುಲ್ ಗಾಂಧಿ ಅವರು ತಮಗೆ ಸ್ಪಷ್ಟಪಡಿಸಿರುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.


ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷದ ಸಾರಥ್ಯ ವಹಿಸಿಕೊಳ್ಳುವ ಪೈಪೋಟಿ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದೆ. ಆದರೆ ಚುನಾವಣೆಯ ಪ್ರಕ್ರಿಯೆ ಅಗತ್ಯವಿಲ್ಲದೆ ರಾಹುಲ್ ಗಾಂಧಿ ಅವರೇ ಮತ್ತೆ ಅಧ್ಯಕ್ಷಗಿರಿ ಒಪ್ಪಿಕೊಳ್ಳಬೇಕು ಎಂದು ಅನೇಕ ನಾಯಕರು ಒತ್ತಾಯಿಸಿದ್ದಾರೆ.

ಪಕ್ಷದ ಉನ್ನತ ಹುದ್ದೆಯ ಆಕಾಂಕ್ಷಿಗಳಲ್ಲಿ ಒಬ್ಬರಾಗಿರುವ ಅಶೋಕ್ ಗೆಹ್ಲೋಟ್ ಕೂಡ ರಾಹುಲ್ ಗಾಂಧಿ ಅವರ ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ, ರಾಹುಲ್ ಅವರು ತಾವು ಯಾವ ಒತ್ತಡಕ್ಕೂ ಮಣಿಯುವುದಿಲ್ಲ ಎಂಬ ಸ್ಪಷ್ಟ ಸಂದೇಶ ನೀಡಿದ್ದಾರೆ ಎನ್ನಲಾಗಿದೆ.

ಕೇರಳದಲ್ಲಿ ಶುಕ್ರವಾರ ಮಾಧ್ಯಮಗಳ ಜತೆ ಮಾತನಾಡಿದ ಅಶೋಕ್ ಗೆಹ್ಲೋಟ್, “ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂಬ ಎಲ್ಲರ ಬೇಡಿಕೆಯನ್ನು ಅಂಗೀಕರಿಸುವಂತೆ ನಾನು ರಾಹುಲ್ ಗಾಂಧಿ ಅವರಿಗೆ ಅನೇಕ ಬಾರಿ ಮನವಿ ಮಾಡಿದ್ದೆ.

ಆದರೆ ಗಾಂಧಿ ಕುಟುಂಬದಿಂದ ಯಾರೂ ಕೂಡ ಮುಂದಿನ ಮುಖ್ಯಸ್ಥರಾಗಬಾರದು ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ” ಎಂದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...