Connect with us

    LATEST NEWS

    ಸಿಎಂ ಮನೆ ಮುತ್ತಿಗೆಗೆ ಕಾಂಗ್ರೆಸ್‌ ಯತ್ನ: ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ಪೊಲೀಸ್‌ ವಶಕ್ಕೆ

    Published

    on

    ಬೆಂಗಳೂರು: ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್​ ಇಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿತು.


    ಕಾಂಗ್ರೆಸ್ ಭವನದಿಂದ ಸಿಎಂ ಗೃಹ ಕಚೇರಿ ಕೃಷ್ಣಗೆ ಹೊರಟ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಡಿಕೆಶಿ, ರಣದೀಪ್‌ ಸುರ್ಜೇವಾಲ ಸೇರಿದಂತೆ ಹಲವು ಕಾರ್ಯಕರ್ತರನ್ನು ರೇಸ್ ಕೋರ್ಸ್ ಬಳಿಯೇ ಪೊಲೀಸರು ತಡೆದರು.

    ಇದೇ ವೇಳೆ ಬ್ಯಾರಿಕೇಡ್ ಮೇಲೆ ಜಿಗಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸುರ್ಜೇವಾಲಾ, ಸಲೀಂ ಅಹಮದ್ ಮುಂದೆ ಸಾಗಿದರು.

    ಈ ವೇಳೆ ಪೊಲೀಸರು ಮತ್ತು ಕಾಂಗ್ರೆಸ್​ ನಾಯಕರ ನಡುವೆ ವಾಗ್ವಾದ ನಡೆಯಿತು. ಸಿಎಂ ನಿವಾಸ ತಲುಪುವ ಮೊದಲೇ ಪ್ರತಿಭಟನಾಕಾರರನ್ನು ಬ್ಯಾರಿಕೇಡ್ ಹಾಕಿ ಮುಂದೆ ಹೋಗದಂತೆ ತಡೆದ ಪೊಲೀಸರು, ಕೈ ನಾಯಕರನ್ನ ವಶಕ್ಕೆ ಪಡೆದರು.


    ಮೃತನ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ಕೊಡಬೇಕು. ನಮ್ಮ ಕಾಂಗ್ರೆಸ್ ಪಕ್ಷದಿಂದ 11 ಲಕ್ಷ ರೂ. ಪರಿಹಾರ ಕೊಡ್ತೀವಿ. ಸರ್ಕಾರ ಕೆಲಸ ಕೊಡುವವರೆಗೂ ನಮ್ಮ ಆ ಭಾಗದ ನಾಯಕರು ಸಂತೋಷ್ ಪತ್ನಿಗೆ ಕೆಲಸ ಕೊಡ್ತಾರೆ.

    ಭ್ರಷ್ಟಾಚಾರದ ನಿಗ್ರಹ ಕಾಯ್ದೆಯಡಿ ದೂರು ದಾಖಲು ಆಗಬೇಕು. ಸಿಎಂ ಅವರು ಈಶ್ವರಪ್ಪ ಅವರನ್ನ ರಕ್ಷಣೆ ಮಾಡ್ತಿದ್ದಾರೆ. ಅವರ ಮೇಲೂ ಕೆಂಪಣ್ಣ ಕಮಿಷನ್ ಆರೋಪ ಮಾಡಿದ್ದಾರೆ.

    ಮಾನ ಮರ್ಯಾದೆ ಇದ್ದಿದ್ದರೆ ಈಶ್ವರಪ್ಪ ರಾಜೀನಾಮೆ ಕೊಡ್ತಿದ್ರು. ಬಿಜೆಪಿ ಅವರು ಭಂಡರು, ರಾಜೀನಾಮೆ ಕೊಡಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು.

    LATEST NEWS

    ಕೇಂದ್ರ ಬಜೆಟ್ 2024 : ಗಮನ ಸೆಳೆದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೀರೆ

    Published

    on

    ಮಂಗಳೂರು / ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಕೇಂದ್ರ ಬಜೆಟ್ 2024 ಅನ್ನು ಮಂಡಿಸಲಿದ್ದಾರೆ.  ಪ್ರತೀ ವರ್ಷದಂತೆ ಈ ವರ್ಷವೂ ಅವರ ಸೀರೆ ಗಮನ ಸೆಳೆದಿದೆ. ಅವರು ಮೆಜೆಂಟಾ ಮತ್ತು ಗೋಲ್ಡ್ ಬಾರ್ಡರ್ ಹೊಂದಿರುವ ಬಿಳಿ ಚೆಕ್ ಸೀರೆಯನ್ನು ಉಟ್ಟಿದ್ದಾರೆ.


    ಸತತ ಏಳನೇ ಬಜೆಟ್ ಮಂಡಿಸುತ್ತಿರುವ ಮೊದಲ ಹಣಕಾಸು ಸಚಿವೆಯಾಗಿ ನಿರ್ಮಲಾ ಸೀತಾರಾಮನ್ ಹೊರಹೊಮ್ಮಿದ್ದಾರೆ. ಇದು ಭಾರತದ ಇತಿಹಾಸದ ಪುಟ ಸೇರಿದೆ.

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಲ್ಲಿ ಕೈಮಗ್ಗ ಸೀರೆ ಸಂಗ್ರಹ ಅಧಿಕ. ಹೀಗಾಗಿ ಇದು ಎಲ್ಲರ ಗಮನ ಸೆಳೆಯುತ್ತದೆ. ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2024 ಅನ್ನು ಮಂಡಿಸಲು ಸಂಸತ್ತಿಗೆ ತೆರಳುತ್ತಿದ್ದಾಗ,  ತಮ್ಮ ತಂಡದೊಂದಿಗೆ ಫೋಟೋಗೆ ಫೋಸ್ ನೀಡಿದರು. ಅವರು ಚೌಕಾಕಾರದ ಚೆಕ್ ಮತ್ತು ಚಿನ್ನದ ಕಸೂತಿಯೊಂದಿಗೆ ಅಗಲವಾದ ಮೆಜೆಂಟಾ ಬಾರ್ಡರ್ ಹೊಂದಿರುವ ಆಫ್-ವೈಟ್ ಬೇಸ್ ಕೈಮಗ್ಗ ಸೀರೆಯಲ್ಲಿ ಕಂಗೊಳಿಸುತ್ತಿದ್ದರು.

    Continue Reading

    DAKSHINA KANNADA

    ಹಾಲು ಉತ್ಪಾದಕರಿಗೆ 5 ರೂ. ಪ್ರೋತ್ಸಾಹಧನ ಕೊಡಿ; ರಾಜ್ಯ ಸರಕಾರಕ್ಕೆ ದ.ಕ. ಹಾಲು ಒಕ್ಕೂಟ ಪ್ರಸ್ತಾವನೆ

    Published

    on

    ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕುಂಠಿತವಾಗುತ್ತಿರುವ ಹೈನುಗಾರಿಕೆಯನ್ನು ಉತ್ತೇಜಿಸಲು ಹಾಲು ಉತ್ಪಾದಕರಿಗೆ 5 ರೂಪಾಯಿ ಪ್ರೋತ್ಸಾಹಧನ ನೀಡಲು ಒಪ್ಪಿಗೆ ಸೂಚಿಸುವಂತೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದೆ.

    ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಅವರು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪ್ರಸಕ್ತ ಹೈನುಗಾರರಿಗೆ ಲೀಟರ್‌ಗೆ ಕನಿಷ್ಠ 35 ರೂ. ಹಾಗೂ ರಾಜ್ಯ ಸರಕಾರದ ಸಬ್ಸಿಡಿ ಮೊತ್ತ 5 ರೂ. ಸೇರಿ ಒಟ್ಟು 40 ರೂ. ನೀಡಲಾಗುತ್ತಿದೆ. ಒಕ್ಕೂಟದ ವ್ಯಾಪ್ತಿಯಲ್ಲಿ ದಿನಕ್ಕೆ ಸರಾಸರಿ 3,91,367 ಲೀ. ಹಾಲು ಉತ್ಪಾದನೆಯಾಗುತ್ತಿದ್ದು ಕೊರತೆ ಸರಿದೂಗಿಸಲು ಹೊರ ಜಿಲ್ಲೆಗಳಿಂದ 1 ಲಕ್ಷ ಲೀಟರ್‌ ಹಾಲು ಖರೀದಿಸಲಾಗುತ್ತಿದೆ. ಇತರ ಜಿಲ್ಲೆಗೆ ಹೋಲಿಸಿ ದರೆ ನಮ್ಮಲ್ಲಿ ಉತ್ಪಾದನ ವೆಚ್ಚವೂ ಅಧಿಕ. ಅದಕ್ಕಾಗಿ ಮತ್ತೆ 5 ರೂ. ಮೊತ್ತವನ್ನು ಹೆಚ್ಚುವರಿಯಾಗಿ ಹೈನುಗಾರರಿಗೆ ನೀಡಿದರೆ ಮಾತ್ರ ಹಾಲು ಉತ್ಪಾದನೆ ಹೆಚ್ಚಳ ನಿರೀಕ್ಷಿಸಬಹುದು ಎಂದರು.

    ನಂದಿನಿ ಪಶು ಆಹಾರ ಚೀಲಕ್ಕೆ 1,350 ರೂ. ದರವಿದ್ದು, ಆಗಸ್ಟ್‌ 1ರಿಂದ ಹೈನುಗಾರರಿಗೆ ಪ್ರತಿ ಚೀಲಕ್ಕೆ 25 ರೂ. ಸಬ್ಸಿಡಿ ನೀಡಲಾಗುವುದು. ಇದರಿಂದ ಒಕ್ಕೂಟಕ್ಕೆ 30 ಲಕ್ಷ ರೂ. ಹೊರೆಯಾಗಲಿದೆ. ಇದಲ್ಲದೆ ಪಶು ಸಾಕಣೆ, ಮೇವು ಮುಂತಾದವುಗಳಿಗೆ ಸಬ್ಸಿಡಿ ಯೋಜನೆ, ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಶೂನ್ಯಬಡ್ಡಿ ಸಾಲ ಒದಗಿಸಲಾಗುತ್ತಿದೆ ಎಂದು ವಿವರಿಸಿದರು.

    ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಎಸ್‌.ಬಿ.ಜಯರಾಮ ರೈ ಬಳಜ, ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ, ನಾರಾಯಣ ಪ್ರಕಾಶ್‌, ಪದ್ಮನಾಭ ಶೆಟ್ಟಿ, ಸುಧಾಕರ ರೈ, ಬೋಳ ಸದಾಶಿವ ಶೆಟ್ಟಿ, ನರಸಿಂಹ ಕಾಮತ್‌, ಕಮಲಾಕ್ಷ ಹೆಬ್ಟಾರ್‌, ಸವಿತಾ ಎನ್‌.ಶೆಟ್ಟಿ, ಸ್ಮಿತಾ ಆರ್‌.ಶೆಟ್ಟಿ, ಸುಭದ್ರಾ ರಾವ್‌, ವ್ಯವಸ್ಥಾಪಕ ನಿರ್ದೇಶಕ ವಿವೇಕ್‌, ಮಾರುಕಟ್ಟೆ ಮುಖ್ಯಸ್ಥ ರವಿರಾಜ್‌ ಉಡುಪ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ಲಾರಿಯ ಟಯರ್‌ ಬದಲಿಸುವಾಗ ಹೊರಚಿಮ್ಮಿದ ಡಿಸ್ಕ್; ವ್ಯಕ್ತಿಗೆ ಗಂಭೀ*ರ ಗಾ*ಯ

    Published

    on

    ಪುತ್ತೂರು : ಲಾರಿಯೊಂದರ ಟಯರ್‌ ಬದಲಿಸುವಾಗ ಡಿಸ್ಕ್ ಚಿಮ್ಮಿ ಟಯರ್‌ ಸಮೇತ ಕಾಂಪೌಂಡ್‌ ಗೆ ಎಸೆಯಲ್ಪಟ್ಟು, ವ್ಯಕ್ತಿಯೊಬ್ಬರು ಗಂಭೀ*ರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ(ಜು.22) ರಾತ್ರಿ ನಡೆದಿದೆ.

    ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಗಂಭೀರವಾಗಿ ಗಾಯಗೊಂಡವರು. ತನ್ನ ಬಾವನಿಗೆ ಸೇರಿದ ಕಲ್ಲು ಸಾಗಾಟದ ಲಾರಿಯ ಟಯರ್‌ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು ಎನ್ನಲಾಗಿದೆ.

    ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್‌ ತಂದಿದ್ದರು. ಟಯರ್‌ ಬದಲಿಸುವ ವೇಳೆ ಒಮ್ಮೆಲೇ ಟಯರ್‌ನ ರಿಂಗ್ ಹೊರಚಿಮ್ಮಿದೆ. ರಭಸಕ್ಕೆ ಟಯರ್‌ ಸಹಿತ ರಶೀದ್ ಅವರು ತುಸು ದೂರ ಕಾಂಪೌಂಡ್ ಗೆ ಎಸೆಯಲ್ಪಟ್ಟಿದ್ದಾರೆ.

    ಇದನ್ನೂ ಓದಿ :‘ಕೊಹ್ಲಿ’ ಜೊತೆಗಿನ ನಿಮ್ಮ ಸಂಬಂಧ ಹೇಗಿದೆ? ಎಂದು ಪ್ರಶ್ನಿಸಿದಕ್ಕೆ ‘ಗಂಭೀರ್’ ಖಡಕ್ ಉತ್ತರವೇನು ಗೊತ್ತಾ?
    ತೀವ್ರ ಗಾಯಗೊಂಡ ರಶೀದ್‌ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.

    Continue Reading

    LATEST NEWS

    Trending