ನವದೆಹಲಿ: ಬೆಲೆ ಏರಿಕೆ, ನಿರುದ್ಯೋಗ ಮತ್ತು ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ಹೆಚ್ಚಳ ಸೇರಿದಂತೆ ವಿವಿಧ ಸಮಸ್ಯೆಗಳ ವಿರುದ್ಧ ಇಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರಾದ ಸಂಸದ ರಾಹುಲ್, ಪ್ರಿಯಾಂಕ ಗಾಂಧಿ ಸೇರಿ ಹಲವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರತಿಭಟನೆಯಲ್ಲಿ ರಾಹುಲ್, ಪ್ರಿಯಾಂಕ, ಮಲ್ಲಿ ಕಾರ್ಜುನ ಖರ್ಗೆ ಸೇರಿ ಎಲ್ಲರೂ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸಿದ್ದರು.
ಸಂಸತ್ ಒಳಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ, ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್ ಸೇರಿ ಹಲವರ ನೇತೃತ್ವದಲ್ಲಿ ಪಕ್ಷದ ಸಂಸದರು ಕಪ್ಪು ಬಟ್ಟೆ ಧರಿಸಿ ಸಂಸತ್‌ನಲ್ಲಿ ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಸಂಸತ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಸರ್ಕಾರದಿಂದ ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಗದ್ದಲ ನಡೆಸಿದ್ದರಿಂದ ರಾಜ್ಯಸಭಾ ಕಲಾಪವನ್ನು ಮುಂದೂಡಲಾಗಿದೆ.