HomeDAKSHINA KANNADAಉಡುಪಿ: ಮಾಜಿ ಶಾಸಕ-ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ನಿಧನ

ಉಡುಪಿ: ಮಾಜಿ ಶಾಸಕ-ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ನಿಧನ

ಉಡುಪಿ: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಯು.ಆರ್. ಸಭಾಪತಿ ಇಂದು ಬೆಳಗ್ಗೆ ನಿಧನರಾದರು.


ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು 1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉಡುಪಿ ಕ್ಷೇತ್ರದಿಂದ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಮನೋರಮಾ ಮಧ್ವರಾಜ್ ವಿರುದ್ಧ ಸ್ಪರ್ಧಿಸಿ ಸೋಲು ಕಂಡರು. ಬಳಿಕ 1994ರಲ್ಲಿ ಎಸ್.ಬಂಗಾರಪ್ಪ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ ಉಡುಪಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು.

1999ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಮತ್ತೊಮ್ಮೆ ಶಾಸಕರಾಗಿ ಆಯ್ಕೆ ಯಾದರು. 2004ರ ಚುನಾವಣೆಯಲ್ಲಿ ಇವರು ರಘುಪತಿ ಭಟ್ ವಿರುದ್ಧ ಸೋಲುಂಡರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Latest articles

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...

ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...

ಮಂಗಳೂರು: ಬೀದಿಬದಿ ವ್ಯಾಪಾರಿಗಳ ಮೇಲಿನ ಕಿರುಕುಳ, ಕೇಸುಗಳಿಗೆ ಖಂಡನೆ – ಸುಳ್ಳು ಮೊಕದ್ದಮೆ ವಾಪಾಸ್ ಪಡೆಯಲು ಒತ್ತಾಯಿಸಿ ಪ್ರತಿಭಟನೆ

ಜನಪರ ಹೋರಾಟಗಾರ, ಬೀದಿ ವ್ಯಾಪಾರಿಗಳ ಮುಂದಾಳು ಬಿ ಕೆ ಇಮ್ತಿಯಾಝ್‌ ಮತ್ತು ಮುಖಂಡರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ವಾಪಾಸ್...

ರಾಮನಗರ: ಟೋಲ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ- ಯುವಕರ ತಂಡದಿಂದ ಸಿಬಂದಿ ಹತ್ಯೆ..!

ಟೋಲ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ಯುವಕರ ತಂಡವೊಂದು ಗಲಾಟೆ ಮಾಡಿದ ಹಿನ್ನಲೆಯಲ್ಲಿ ಟೋಲ್ ಸಿಬ್ಬಂದಿಯ ಕೊಲೆಯಾಗಿದೆ. ಈ ಘಟನೆ...