Friday, July 1, 2022

ಕಾಂಗ್ರೆಸ್ ನಾರಾಯಣ ಗುರು ಹೆಸರಲ್ಲಿ ರಾಜಕೀಯ ಲಾಭ ಪಡೆಯಲು ಯತ್ನಿಸುತ್ತಿದೆ: ಬಿಜೆಪಿ

ಮಂಗಳೂರು: ಕಾಂಗ್ರೆಸ್ ಮತ್ತು ಮಾಜಿ ಶಾಸಕ ಜೆ ಆರ್ ಲೋಬೋ ಅವರು ಗೊಂದಲ ಸೃಷ್ಟಿಸಿ ನಾರಾಯಣ ಗುರುಗಳ ಹೆಸರಿನಲ್ಲಿ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸುದ್ದಿಗಾರರ ಜೊತೆ ಮಾತನಾಡಿದ ಅವರು ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರುಗಳ ಹೆಸರನ್ನು ಇಡಲು ಮುಂದಾದಅಗ ಮಾಜಿ ಶಾಸಕ, ಕಾಂಗ್ರೆಸ್ನ ಜೆ ಆರ್ ಲೋಬೋ ಅವರೇ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಅವರು ನಾರಾಯಣ ಗುರುಗಳ ಬಗ್ಗೆ ಯಾವ ನೈತಿಕತೆಯಿಂದ ಮಾತನಾಡುತ್ತಿದ್ದಾರೆ. ಅವರಿಗೆ ಮಾತನಾಡುವ ನೈತಿಕತೆ ಇಲ್ಲ.

ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಪಠ್ಯಪುಸ್ತಕ ರಚನಾ ಸಮಿತಿ ಅಧ್ಯಕ್ಷರಾಗಿದ್ದಾಗ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈಗಳ ಹೆಸರನ್ನೇ ಪಠ್ಯ ಪುಸ್ತಕದಲ್ಲಿ ಬಿಟ್ಟಿದ್ದರು. ಆಗ ಯಾಕೆ ಕಾಂಗ್ರೆಸ್ಸಿಗರು ಮಾತನಾಡಿಲ್ಲ ಎಂದು ಪ್ರಶ್ನಿಸಿದರು. ಮಾಜಿ ಶಾಸಕ ರಮಾನಾಥ ರೈಗಳು ಕೂಡಾ 10ನೇ ತರಗತಿ ಪಠ್ಯದಿಂದ ಹೆಸರು ಕೈಬಿಟ್ಟ ಬಗ್ಗೆ ಮಾತನಾಡಿದ್ದಾರೆ.

ಪಠ್ಯವೇ ಮುದ್ರಣ ಆಗದಿರುವಾಗ ಇವರು ವಿನಾ ಕಾರಣ ಗೊಂದಲ ಸೃಷ್ಟಿಸುತ್ತಿರುವುದೇಕೆ ? ಪುಸ್ತಕ ಬಿಡುಗಡೆ ಆದಾಗ ರಮಾನಾಥ ರೈಗಳು ಪುಸ್ತಕವನ್ನು ಕೊಂಡು ಓದಲಿ ಎಂದರು. ಸುದ್ದಿಗೋಷ್ಠಿಯಲ್ಲಿ ರವಿಶಂಕರ ಮಿಜಾರು, ಕಸ್ತೂರಿ ಪಂಜ, ಜಗದೀಶ ಶೇಣವ, ರಣದೀಪ್ ಕಾಂಚನ್ ಇದ್ದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ...

ಬಂಟ್ವಾಳ: ರಸ್ತೆ ಬದಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ,...

ರಾಜಸ್ಥಾನ್ ಟೈಲರ್ ಹತ್ಯೆ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ

ಬಂಟ್ವಾಳ: ರಾಜಸ್ತಾನದ ಉದಯಪುರದಲ್ಲಿ ಭಯೋತ್ಪಾದಕರಿಂದ ಹಿಂಸಾತ್ಮಕ ರೀತಿಯಲ್ಲಿ ಹತ್ಯೆಯಾದ ಟೈಲರ್ ಕನ್ಹಯ್ಯಲಾಲ್ ಅವರ ಸಾವಿಗೆ ನ್ಯಾಯ ಸಿಗಬೇಕು ಹಾಗೂ ಹತ್ಯೆ ಮಾಡಿದ ಭಯೋತ್ಪಾದಕ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್...