Connect with us

    DAKSHINA KANNADA

    ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್‌ ಜಯಭೇರಿ : ಬಿಜೆಪಿ ವಾಶ್‌ ಔಟ್‌

    Published

    on

    ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿದ್ದು ಎಲ್ಲಾ 5 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಮಂಗಳೂರಿನ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ವಿವೇಕ್‌ ರಾಜ್‌ ಪೂಜಾರಿ ಈ ಜಯದ ರೂವಾರಿ.

    ಮಂಗಳೂರು: ಮಲೆನಾಡು, ಅರೆಮಲೆನಾಡು ಜತೆಗೆ ಸ್ವಲ್ಪ ಬಯಲುಸೀಮೆಯನ್ನೂ ಹೊಂದಿರುವ ಕಾಫಿನಾಡು ಎಂದೇ ಕರೆಯಲ್ಪಡುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 5 ವಿಧಾನಸಭಾ ಕ್ಷೇತ್ರಗಳಿದ್ದು ಎಲ್ಲಾ 5 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಮಂಗಳೂರಿನ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ವಿವೇಕ್‌ ರಾಜ್‌ ಪೂಜಾರಿ ಈ ಜಯದ ರೂವಾರಿ.

    ಈ ಬಾರಿ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿವನ್ನು ಕಾಂಗ್ರೆಸ್‌ ಪಕ್ಷವು ವಿವೇಕ್‌ರಾಜ್‌ ಪೂಜಾರಿ ಅವರಿಗೆ ವಹಿಸಿತ್ತು.

    ಅವರು ಪಕ್ಷದ ವರಿಷ್ಠರ ಮಾರ್ಗದರ್ಶನದಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅವರ ಜತೆಗೂಡಿ ಚಾಣಾಕ್ಷ್ಯತನದಿಂದ ಕಾರ್ಯತಂತ್ರಗಳನ್ನು ಹೆಣೆದು ಬಿಜೆಪಿಯನ್ನು ಮಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಚಿಕ್ಕಮಗಳೂರು ಕ್ಷೇತ್ರದಲ್ಲಿ ಸಚಿವ ಸಿಟಿ ರವಿ ಅವರನ್ನು ಅವರ ಒಂದು ಕಾಲದ ಆಪ್ತ ಬಿಜೆಪಿಯಿಂದ ಕಾಂಗ್ರೆಸ್ ಪಾಳಯ ಸೇರಿದ್ದ ಎಚ್. ಡಿ. ತಮ್ಮಯ್ಯ ಅವರು 8874 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.

    ಸಿಟಿ ರವಿ ಅವರು 55678 ಮತಗಳನ್ನು ಪಡೆದರೆ ಎಚ್ ಡಿ ತಮ್ಮಯ್ಯ ಅವರು 64552 ಮತಗಳನ್ನು ಪಡೆದಿದ್ದಾರೆ.

    ಮೂಡಿಗೆರೆಯಲ್ಲಿ ನಯನಾ ಮೋಟಮ್ಮ, ತರೀಕೆರೆಯಲ್ಲಿ ಎಚ್.ಜಿ. ಶ್ರೀನಿವಾಸ, ಶೃಂಗೇರಿಯಲ್ಲಿ ರಾಜೇಗೌಡ ಮತ್ತು ಕಡೂರಿನಲ್ಲಿ ಕೆ.ಎಸ್ ಆನಂದ್ ಅವರು ಜಯಗಳಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು.

    ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್ ಸುರೇಶ್, ದೀಪಕ್ ದೊಡ್ಡಯ್ಯ ಅವರು ಸೋಲನುಭವಿಸಿದ್ದಾರೆ.

    ತಮ್ಮ ಶ್ರಮದ ಬಗ್ಗೆ ಮಾಹಿತಿ ನೀಡಿರುವ ವಿವೇಕ್‌ರಾಜ್‌ ಪೂಜಾರಿ ಅವರು’ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್‌, ಸಂಸದ ಡಿ.ಕೆ. ಸುರೇಶ್‌, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹಂಶು ಉಮಾನಾಥ್‌, ನಾಯಕ ಐವನ್‌ ಡಿ’ಸೋಜಾ ಅವರ ಮಾರ್ಗದರ್ಶನದಲ್ಲಿ ಕಾರ್ಯತಂತ್ರ ರೂಪಿಸಿದ್ದು, ಈ ದಿಶೆಯಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದ್ದಾರೆ.

    ‘ಸಿ.ಟಿ. ರವಿ ಅವರನ್ನು ಸೋಲಿಸುವುದು ನಮ್ಮ ಮುಖ್ಯ ಉದ್ದೇಶವಾಗಿತ್ತು. ಅದಕ್ಕಾಗಿ ಯೋಜಿತ ಕಾರ್ಯತಂತ್ರವನ್ನು ರೂಪಿಸಿದೆವು.

    ಮತದಾರರ ಒಲವುಗಳಿಸಲು ಸಿ.ಟಿ. ರವಿ ಮತ್ತು ಅವರ ನಿಕಟವರ್ತಿಗಳು ಮಧ್ಯ ಮತ್ತು ಹಣ ಪೂರೈಕೆ ಮಾಡುತ್ತಿರುವುದನ್ನು ತಡೆಗಟ್ಟಲು ಒಂದು ತಿಂಗಳ ಕಾಲ ನಿರಂತರವಾಗಿ ಶ್ರಮಿಸಿದೆವು.

    ಇದು ನಮಗೆ ಯಶಸ್ಸನ್ನು ತಂದು ಕೊಟ್ಟಿದೆ’ ಎಂದು ವಿವರಿಸಿದ್ದಾರೆ. ‘ನಾವು ಸಿ.ಟಿ. ರವಿ ಅವರ ಆಪ್ತ ರೌಡಿಯೊಬ್ಬನ ವಿರುದ್ದ ನಿಂತಿದ್ದೆವು.

    ಅವರು ನನಗೆ ವೈಯಕ್ತಿಕವಾಗಿ ಬೆದರಿಕೆ ಹಾಕಿದರೂ ನಾವು ಜಗ್ಗಲಿಲ್ಲ. ನನ್ನ ಮನೆಗೆ ಐ.ಟಿ. ದಾಳಿ ಮಾಡಿ ಕಿರುಕುಳ ನೀಡಲು ಯತ್ನಿಸಲಾಯಿತು.

    ಆದರೂ ನಾವು ಹಿಂಜರಿಯದೆ ಚಿಕ್ಕಮಗಳೂರಿನಲ್ಲಿ ನಮ್ಮ ಕೆಲಸ ಮುಂದುವರಿಸಿದೆವು’ ಎಂದು ವಿವೇಕ್‌ ರಾಜ್‌ ತಿಳಿಸಿದ್ದಾರೆ.

    2018 ರ ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗಿದ್ದರೆ, 1 ಕ್ಷೇತ್ರ ಕಾಂಗ್ರೆಸ್ ಪಾಲಾಗಿತ್ತು. ಈ ಬಾರಿ ಎಲ್ಲಾ ಕ್ಷೇತ್ರಗಳೂ ಕಾಂಗ್ರೆಸ್‌ ಪಾಲಾಗಿವೆ ಎಂದರು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending