ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಸರಿ ಶಾಲು ಧರಿಸಿ ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಬಿಜೆಪಿ ಶಾಸಕ ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ನಡೆದಿದೆ.
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸಿಟಿ ರವಿಯವರ ಸಿದ್ದರಾಮುಲ್ಲಾ ಖಾನ್ ಹೇಳಿಕೆಯಿಂದ ಕೇಸರಿ- ಕೈ ಕಲಹ ತೀವ್ರಗೊಂಡಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಕೇಸರಿ ಶಾಲು ಧರಿಸಿ ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಬಿಜೆಪಿ ಶಾಸಕ ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಇಂದು ನಡೆದಿದೆ.
ಚಿಕ್ಕಮಗಳೂರಿನಲ್ಲಿ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ಸಿ.ಟಿ.ರವಿ ಅವರು, ವಿಪಕ್ಷ ನಾಯಕ ಕಾಂಗ್ರೆಸ್ ನ ಸಿದ್ದರಾಮಯ್ಯಗೆ ಸಿದ್ದರಾಮುಲ್ಲಾ ಖಾನ್ ಎಂದಿದ್ದರು.
ಆ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸಿ.ಟಿ.ರವಿ ವಿರುದ್ಧ ಕೆಂಡವಾಗಿತ್ತು. ಹಾಗಾಗಿ, ಇಂದು ಶನಿವಾರ ಜಿಲ್ಲೆಯ ಎಲ್ಲಾ ತಾಲೂಕಿನಿಂದ ಬಂದ ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಈ ಸಂದರ್ಭ ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ತಿರುಗಿ ಬಿದ್ದಿದ್ದು ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಪ್ಪಿಸಲು ಪೊಲೀಸರು ಹರ ಸಾಹಸ ಪಟ್ಟರು. ಬಳಿಕ ಕಾಂಗ್ರೆಸ್ ಕಾರ್ಯಕರ್ತನ್ನ ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
ಮುಂಜಾಗೃತಾ ಕ್ರಮವಾಗಿ ಸಿಟಿ ರವಿ ಹಾಗೂ ಅವರ ಮನೆ ಸುತ್ತಾ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಾಡಿಸಲಾಗಿದೆ.