ನಿರಂತರ ಓದಿನಿಂದ ಉತ್ತಮ ಪತ್ರಕರ್ತನಾಗಲು ಸಾಧ್ಯ: ಸಂಜಯ್ ಸಿಂಗ್
Published
5 years agoon
By
Adminನಿರಂತರ ಓದಿನಿಂದ ಉತ್ತಮ ಪತ್ರಕರ್ತನಾಗಲು ಸಾಧ್ಯ: ಸಂಜಯ್ ಸಿಂಗ್
ಮಂಗಳೂರು : ಪತ್ರಕರ್ತರು ನಿರಂತರ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಉತ್ತಮ ಪುಸ್ತಕಗಳ ಓದುವಿಕೆಯಿಂದ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ನ್ಯೂಸ್ ಇಂಡಿಯಾ ಇದರ ಸಂಪಾದಕ ಸಂಜಯ್ ಸಿಂಗ್ ಹೇಳಿದರು.
ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುತ್ತಿರುವ 35ನೆಯ ಪತ್ರಕರ್ತರ ಸಮ್ಮೇಳನದ ಎರಡನೆಯ ದಿನವಾದ ಭಾನುವಾರ ‘ಭಾರತೀಯ ಪತ್ರಿಕೋದ್ಯಮ’ ಗೋಷ್ಠಿಯಲ್ಲಿ ಮಾತನಾಡಿದರು.
ಇಂದಿನ ಮೊಬೈಲ್ ಯುಗದಲ್ಲಿ ಹೆಚ್ಚಿನ ಪತ್ರಕರ್ತರು ಮೊಬೈಲ್ ನೋಡುವುದರಲ್ಲೇ ಕಾಲ ಕಳೆಯುತ್ತಿದ್ದು, ಓದಿನಿಂದ ವಿಮುಖರಾಗುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.
ಪತ್ರಿಕಾ ಧರ್ಮ ಕಾಪಾಡುವತ್ತ ಪ್ರಧಾನ ಆದ್ಯತೆ ನೀಡಬೇಕಾದ್ದು ಬಹುಮುಖ್ಯ. ಆದರೆ ಇಂದು ಅದಕ್ಕೆ ದಕ್ಕೆ ಉಂಟಾಗಿರುವುದು ಆತಂಕಕಾರಿ ಬೆಳವಣಿಗೆ ಎಂದು ಸಂಜಯ್ ಸಿಂಗ್ ಹೇಳಿದರು.
ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಎಂ.ಎ. ಪೊನ್ನಪ್ಪ ಮಾತನಾಡಿ, ಪತ್ರಕರ್ತರಿಗೆ ಹಿಂದೆ ಇದ್ದಷ್ಟು ಸ್ವಾತಂತ್ರ್ಯ ಈಗ ಇಲ್ಲ. ಮಾಲಕರ ಸುಪರ್ದಿಯಲ್ಲಿಯೇ ಸುದ್ದಿಗಳ ಆಯ್ಕೆಯಾಗುವ ಸನ್ನಿವೇಶವಿದೆ ಎಂದರು.
ಹಿಂದೆ ಸಂಪಾದಕೀಯದಲ್ಲಾದರೂ ನೇರವಾಗಿ ಬರೆಯುವ ಸ್ವಾತಂತ್ರ್ಯ ಇತ್ತು. ಈಗ ಅದಕ್ಕೂ ತಡೆಗಳು ಬರುತ್ತಿವೆ.
ವ್ಯಾಪಾರಿ ಮನೊಧರ್ಮದಿಂದ ಮಾಧ್ಯಮ ಕ್ಷೇತ್ರ ಸೊರಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ನೈತಿಕ ಹೊಣೆಗಾರಿಕೆ ಹೇಗೆ ಸಾಧ್ಯ ಎಂಬ ಪ್ರಶ್ನೆ ಕಾಡುತ್ತಿದೆ ಎಂದರು.
ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪರಮಾನಂದ ಪಾಂಡೆ ಕಾರ್ಯಕ್ರಮ ಉದ್ಘಾಟಿಸಿದರು.
ಹಿರಿಯ ಪತ್ರಕರ್ತ ಆರ್.ಜಿ.ಹಳ್ಳಿ ನಾಗರಾಜ್ , ಬಿರ್ಸವಾಣಿ ಪತ್ರಿಕೆಯ ಪ್ರದಾನ ಸಂಪಾದಕ ಎಸ್.ಎಸ್.ಹಸ್ಸನ್ ಗೋಷ್ಠಿಯಲ್ಲಿ ಮಾತನಾಡಿದರು.
You may like
LATEST NEWS
ಕೆಲಸದ ಒತ್ತಡಕ್ಕೆ ಬೇಸತ್ತು ಬಿಲ್ ಕಲೆಕ್ಟರ್ ಆತ್ಮಹತ್ಯೆ
Published
6 minutes agoon
09/01/2025By
NEWS DESK2ವಿಜಯನಗರ: ಕೆಲಸದ ಒತ್ತಡದಿಂದ ಬೇಸತ್ತ ನಗರ ಸಭೆಯ ಬಿಲ್ ಕಲೆಕ್ಟರ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.
ಮೃತರನ್ನು ಮಂಜುನಾಥ್ ಎಂದು ತಿಳಿದುಬಂದಿದೆ. ಮಂಜುನಾಥ್ ಅವರು ಹೊಸ ವರ್ಷದ ಆರಂಭದ ದಿನವೇ ತಮಗೆ ಕೆಲಸದ ಒತ್ತಡದ ಇದೆ ಎಂದು ಹೇಳಿ ಪ್ಲಂಬಿಂಗ್‌ಗೆ ಬಳಸುವ ಗಮ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಮಾರ್ಜ್ ಆದ ಬಳಿಕ ಅವರು ಇಂದು ಮತ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕೂ ಮೊದಲು ಆತ್ಮಹತ್ಯೆಗೆ ಯತ್ನಿಸಿದ್ದ ಮಂಜುನಾಥ್ ಮೊಬೈಲ್ ನಲ್ಲಿ ಡೆತ್ ನೋಟ್ ಕುರಿತು ಉಲ್ಲೇಖಿಸಿದ್ದರು.
“ನನ್ನ ಸಾವಿಗೆ ನಗರಸಭೆಯ ಆಯುಕ್ತ ಚಂದ್ರಪ್ಪ ಮತ್ತು ಕಂದಾಯ ಅಧಿಕಾರಿ ನಾಗರಾಜ್ ಕಾರಣ. ಕೆಲಸದಿಂದ ಬೇರೆಡೆ ನಿಯೋಜಿಸಲು ಒಂದು ತಿಂಗಳಿಂದ ಹೇಳುತ್ತಿದ್ದರೂ ತೆಗೆಯುತ್ತಿಲ್ಲ. ರಾತ್ರಿ ನಿದ್ದೆ ಬರುತ್ತಿಲ್ಲ, ಅಧಿಕ ಒತ್ತಡ ಇರುವುದರಿಂದ ನಾನು ಸಾವಿಗೆ ಶರಣಾಗಿದ್ದೀನಿ” ಎಂಬ ಸಂದೇಶವನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ಕಳುಹಿಸಿ ಮಂಜುನಾಥ ಬುಧವಾರ ಬೆಳಿಗ್ಗೆ ನಾಪತ್ತೆಯಾಗಿದ್ದರು. ಹಂಪಿ ರಸ್ತೆಯಲ್ಲಿ ಅವರನ್ನು ಪತ್ತೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮಂಜುನಾಥ್ ಇಂದು ಮತ್ತೆ ಹೊಸಪೇಟೆ ತಾಲೂಕಿನ ಕಡ್ಡಿರಾಂಪುರದಲ್ಲಿ ಖಾಸಗಿ ಹೋಂ ಸ್ಟೇ ನಲ್ಲಿ ಮಂಜುನಾಥ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೇಲಾಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಘಟನಾ ಸ್ಥಳಕ್ಕೆ ಹಂಪಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
health
ಸೈಬರ್ ವಂಚನೆಯ ನಷ್ಟಕ್ಕೆ ಬ್ಯಾಂಕುಗಳೇ ಹೊಣೆ ಎಂದ ಸುಪ್ರೀಂ ಕೋರ್ಟ್
Published
19 minutes agoon
09/01/2025By
NEWS DESK3ಮಂಗಳೂರು/ನವದೆಹಲಿ : ಸೈಬರ್ ವಂಚನೆ ಪ್ರಕರಣದಲ್ಲಿ ಗ್ರಾಹಕನಿಗೆ ನಷ್ಟ ಸಂಭವಿಸಿದ್ರೆ ಅದಕ್ಕೆ ಬ್ಯಾಂಕುಗಳೇ ಹೊಣೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಬ್ಯಾಂಕುಗಳಲ್ಲಿ ಗ್ರಾಹಕನ ಖಾತೆಯಲ್ಲಿ ಯಾವುದೇ ಅನಧಿಕೃತ ವಹಿವಾಟು ನಡೆದು ನಷ್ಟ ಸಂಭವಿಸಿದರೆ ಅದಕ್ಕೆ ಬ್ಯಾಂಕುಗಳೇ ನೇರವಾಗಿ ಹೊಣೆ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಅಸ್ಸಾಂನ ಸೈಬರ್ ವಂಚನೆಗೆ ಒಳಗಾದ ಪಲ್ಲಭ್ ಭೌಮಿಕ್ ಅವರಿಗೆ 94,000 ರೂ. ಗಳನ್ನು ಮರುಪಾವತಿಸುವಂತೆ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಹೊರಡಿಸಿದೆ.
ಈ ಪ್ರಕರಣವು ಬ್ಯಾಂಕುಗಳು ತಮ್ಮ ಗ್ರಾಹಕರ ಹಣವನ್ನು ವಂಚನೆಯ ಚಟುವಟಿಕೆಗಳಿಂದ ರಕ್ಷಿಸುವಲ್ಲಿ ಹಣಕಾಸು ಸಂಸ್ಥೆಗಳ ಜವಾಬ್ದಾರಿಗಳನ್ನು ತೀವ್ರವಾಗಿ ಎತ್ತಿ ತೋರಿಸಿದೆ.
ಪ್ರಕರಣದ ಹಿನ್ನೆಲೆ
ಪಲ್ಲಭ್ ಭೌಮಿಕ್ ಎನ್ನುವವರು ಆನ್ ಲೈನ್ ನಲ್ಲಿ ವಸ್ತುವೊಂದನ್ನು ಖರೀದಿಸಿದ್ದರು. 4,000 ರೂ. ಮೌಲ್ಯದ ಲೂಯಿಸ್ ಫಿಲಿಪ್ ಬ್ಲೇಜರ್ ಅನ್ನು ಹಿಂದಿರುಗಿಸಲು ಪ್ರಯತ್ನಿಸಿದಾಗ ಸೈಬರ್ ವಂಚನೆ ಸಂಭವಿಸಿದೆ. ಗ್ರಾಹಕ ಸೇವಾ ಪ್ರತಿನಿಧಿಯಾಗಿ ನಟಿಸಿ, ವಂಚಕರು ಪಲ್ಲಭ್ ಅವರನ್ನು ದುರುದ್ದೇಶಪೂರಿತ ಅಪ್ಲಿಕೇಶನ್ ಅನ್ನು ಸ್ಥಾಪಿಸುವಂತೆ ಹೇಳಿ ವಂಚನೆ ಮಾಡಿದ್ದರು.
ಇದನ್ನೂ ಓದಿ: ಓಂ ಶಕ್ತಿ ದರ್ಶನ ಪಡೆದು ವಾಪಾಸಾಗುತ್ತಿದ್ದಾಗ ದುರಂ*ತ; ಐವರು ಸಾ*ವು
ಇದು ಅವರ ಎಸ್ ಬಿಐ ಉಳಿತಾಯ ಖಾತೆಯಿಂದ 94,204 ರೂ. ಗಳನ್ನು ಕಳವು ಮಾಡಲು ಕಾರಣವಾಯಿತು. ಕದ್ದ ಹಣವನ್ನು ಯುಪಿಐ ವಹಿವಾಟುಗಳ ಮೂಲಕ ಬಹು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಯಿತು.
ಈ ಸಮಸ್ಯೆಯ ಮೂಲ ಯಾವುದೆಂದರೆ ಲೂಯಿಸ್ ಫಿಲಿಪ್ ಅವರ ವೆಬ್ ಸೈಟ್ ನಲ್ಲಿ 2021 ರಲ್ಲಿ ನಡೆದ ಡೇಟಾ ಉಲ್ಲಂಘನೆಯಾಗಿದ್ದು, ಇದರಿಂದ ಗ್ರಾಹಕರ ಸೂಕ್ಷ್ಮ ಮಾಹಿತಿಗಳು ಸೋರಿಕೆಯಾಗಿದೆ. ಈ ಡೇಟಾವನ್ನು ದುರುಪಯೋಗಪಡಿಸಿಕೊಂಡು, ವಂಚಕನು ವಂಚನೆ ನಡೆಸಿದ್ದಾನೆ.
ಕಾನೂನು ಹೋರಾಟ ನಡೆಸಿದ ಪಲ್ಲಭ್
ಈ ವಿಷಯವನ್ನು ನಿಯಮದಂತೆ 24 ಗಂಟೆಯೊಳಗೆ ಪಲ್ಲಭ್ ಬ್ಯಾಂಕ್ ಗಮನಕ್ಕೆ ತಂದಿದ್ದರು. ಆದರೆ ನ್ಯೂ ಒಟಿಪಿ, ಎಂಪಿನ್ ಸೇರಿದಂತೆ ರಹಸ್ಯ ಮಾಹಿತಿಯನ್ನು ವಂಚಕರಿಗೆ ನೀಡಿದ್ದೀರಿ. ಹೀಗಾಗಿ ಇದರಲ್ಲಿ ಬ್ಯಾಂಕ್ ನ ತಪ್ಪಿಲ್ಲ. ಹಣ ಮರಳಿಸಲಾಗಲ್ಲ ಎಂದು ಬ್ಯಾಂಕ್ ಹೇಳಿತ್ತು. ಈ ಬಗ್ಗೆ ಪಲ್ಲಭ್ ಹೈಕೋರ್ಟ್ ಮೊರೆ ಹೋಗಿದ್ದರು. ಗುವಾಹಟಿ ಹೈಕೋರ್ಟ್ ಪಲ್ಲಭ್ ಪರ ತೀರ್ಪು ನೀಡಿತ್ತು. ಇದನ್ನು ಎಸ್ ಬಿಐ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿತ್ತು.
ಈ ಕುರಿತು ಇದೀಗ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ‘ಮೂರನೇ ವ್ಯಕ್ತಿಯಿಂದಾದ ವಂಚನೆ ಪ್ರಕರಣಕ್ಕೆ ಗ್ರಾಹಕ ಹೊಣೆಯಾಗುವುದಿಲ್ಲ ಎಂದು ಆರ್ ಬಿಐ ನಿಯಮಗಳೇ ಹೇಳಿವೆ. ಸೈಬರ್ ವಂಚನೆಯಂಥ ಪ್ರಕರಣದಲ್ಲಿ ಗ್ರಾಹಕರ ಹಿತ ಕಾಪಾಡುವುದು ಬ್ಯಾಂಕ್ ಗಳ ಹೊಣೆಗಾರಿಕೆ. ಈ ಪ್ರಕರಣದಲ್ಲಿ ತಾಂತ್ರಿಕ ಸಂಪನ್ಮೂಲ ಲಭ್ಯವಿದ್ದರೂ ವಂಚನೆ ತಡೆಯುವಲ್ಲಿ ಎಸ್ ಬಿಐ ವಿಫಲವಾಗಿದೆ’. ಈ ಹಿನ್ನೆಲೆ ಗ್ರಾಹಕನಿಗೆ ಹಣ ಮರಳಿಸುವಂತೆ ಎಸ್ ಬಿಐಗೆ ನ್ಯಾಯಪೀಠ ಸೂಚಿಸಿದೆ.
LATEST NEWS
ಓಂ ಶಕ್ತಿ ದರ್ಶನ ಪಡೆದು ವಾಪಾಸಾಗುತ್ತಿದ್ದಾಗ ದುರಂ*ತ; ಐವರು ಸಾ*ವು
Published
29 minutes agoon
09/01/2025By
NEWS DESK4ಮಂಗಳೂರು/ ಕೋಲಾರ : ತಮಿಳುನಾಡಿನ ರಾಣಿಪೇಟೆ ಬಳಿ ಭೀ*ಕರ ಅಪ*ಘಾತ ಸಂಭವಿಸಿದ್ದು, ಕೋಲಾರದ ನಾಲ್ವರು ಸೇರಿ ಐವರು ಮೃ*ತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಅಪಘಾ*ತ ಸಂಭವಿಸಿದ್ದು, ಬಸ್ ಚಾಲಕ ಹಾಗೂ ಕ್ಯಾಂಟರ್‌ನಲ್ಲಿದ್ದ ನಾಲ್ವರು ಸಾ*ವನ್ನಪ್ಪಿದ್ದಾರೆ. ಬಸ್‌ನಲ್ಲಿದ್ದ ಓರ್ವ ಮಹಿಳೆ ಗಂ*ಭೀರವಾಗಿ ಗಾ*ಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್, ಕೃಷ್ಣಪ್ಪ ಮೃ*ತಪಟ್ಟವರು. ನಲ್ಲೂರು ಗ್ರಾಮದ ಸರಸ್ವತಮ್ಮ ಗಂಭೀ*ರವಾಗಿ ಗಾ*ಯಗೊಂಡ ಮಹಿಳೆ.
ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಹೋಗಿ ವಾಪಾಸಾಗುತ್ತಿದ್ದರು. ಕ್ಯಾಂಟರ್ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನ್ನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿತ್ತು.
ಇದನ್ನೂ ಓದಿ : ಮಗುವಿಗೆ ಸು*ಟ್ಟು ಗಾಯ ಮಾಡಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ
ಗಾ*ಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆ, ರತ್ನಗಿರಿಯ ಮೆಡಿಕಲ್ ಕಾಲೇಜಿಗೆ ದಾಖಲಿಸಲಾಗಿದೆ. ರಾಣಿಪೇಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
LATEST NEWS
KSRTC ಗುತ್ತಿಗೆ ಬಸ್ ದರದಲ್ಲೂ ಏರಿಕೆ: ಪ್ರತಿ ಕಿ.ಮೀ.ಗೆ 7 ರೂ. ಹೆಚ್ಚಳ
ಬಂಟ್ವಾಳ: ಇಡಿ ಅಧಿಕಾರಿಗಳ ಸೋಗಿನಲ್ಲಿ ಹಣ ದೋಚಿದ ಮನೆಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ
ತಿರುಪತಿ ಕಾಲ್ತುಳಿತದಲ್ಲಿ ಜೀವ ಬಿಟ್ಟ ಕರ್ನಾಟಕದ ಓರ್ವ ಮಹಿಳೆ
ಅಕ್ರಮ ಮರಳುಗಾರಿಕೆ ಅಡ್ಡೆಗೆ ಅಧಿಕಾರಿಗಳ ದಾಳಿ
ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 7 ಮಂದಿ ಸಾ*ವು, 30ಕ್ಕೂ ಅಧಿಕ ಮಂದಿಗೆ ಗಾಯ
ಮಗುವಿಗೆ ಸು*ಟ್ಟು ಗಾಯ ಮಾಡಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ
Trending
- DAKSHINA KANNADA6 days ago
ಜಮೀನು ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಸುಪ್ರೀಂ ಕೋರ್ಟ್..!
- FILM1 day ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- FILM3 days ago
ಯಶ್ ಫ್ಯಾನ್ಸ್ಗೆ ಸರ್ಪ್ರೈಸ್- ‘ಟಾಕ್ಸಿಕ್’ ಟೀಮ್ನಿಂದ ಸಿಕ್ತು ಸಿಹಿ ಸುದ್ದಿ
- BIG BOSS5 days ago
2ನೇ ಮದುವೆಗೆ ಸಜ್ಜಾದ ಬಿಗ್ ಬಾಸ್ ಮಾಜಿ ಸ್ಪರ್ಧಿ ವರ್ತೂರು ಸಂತೋಷ್; ಹುಡುಗಿ ಯಾರು ಗೊತ್ತಾ..?