Connect with us

    DAKSHINA KANNADA

    ಸಮಾಜ ಕಲ್ಯಾಣ ಇಲಾಖೆಯಿಂದ ಮಾದರಿ ಸಾರ್ವಜನಿಕ ಸ್ಮಶಾನ ನಿರ್ಮಾಣಕ್ಕೆಸಂಕಲ್ಪ: ಸಚಿವ ಕೋಟ

    Published

    on

    ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯಿಂದ ಮಾದರಿ ಸಾರ್ವಜನಿಕ ಸ್ಮಶಾನ ನಿರ್ಮಾಣ ಮಾಡುವ ಸಂಕಲ್ಪ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

    ಅವರು ಗುರುವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ 2021-22ನೇ ಸಾಲಿನ ಬಜೆಟ್ ಅನುಷ್ಠಾನ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಸಿದರು.

    ಸಮಾಜದಲ್ಲಿ ಸಾಮರಸ್ಯ ಮೂಡಿಸುವ ನಿಟ್ಟಿನಲ್ಲಿ ಇಂಥದ್ದೊಂದು ಕಾರ್ಯಕ್ರಮ ಅನುಷ್ಠಾನಿಸಬೇಕು. ಧಾರ್ಮಿಕ ದತ್ತಿ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ಸುಮಾರು 25-30ಲಕ್ಷ ರೂ. ವೆಚ್ಚದಲ್ಲಿ ಒಂದು ಸ್ಮಶಾನ ನಿರ್ಮಿಸುವ ಯೋಜನೆ ರೂಪಿಸಬೇಕು.

    ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಆವರಣಗೋಡೆ ಇತ್ಯಾದಿ ಸೌಲಭ್ಯಗಳಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
    ಕಳೆದ ವರ್ಷದ ಬಜೆಟ್‌ನಲ್ಲಿ ಸ್ಮಶಾನ ಅಭಿವೃದ್ಧಿಗೆ 18.37 ಕೋಟಿ ರೂ. ಹಂಚಿಕೆಯಾಗಿ, ಬಿಡುಗಡೆಯಾಗಿದೆ.

    ಹೆಚ್ಚುವರಿಯಾಗಿ 41.32 ಕೋಟಿ ರೂ.ಗಳ ಆವಶ್ಯಕತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮಾದರಿ ಸ್ಮಶಾನ ನಿರ್ಮಾಣದ ಹೊಸ ಯೋಜನೆಗೆ ಶೀಘ್ರವೇ ಅಂದಾಜುಪಟ್ಟಿ ತಯಾರಿಸಿ, ಸಲ್ಲಿಸುವುದಾಗಿ ಅಧಿಕಾರಿಗಳು ತಿಳಿಸಿದರು.

    ಹಾಸ್ಟೆಲ್‌ಗಳಿಗೆ ಮೂಲಭೂತ ಸೌಕರ್ಯಗಳು

    ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಅಳವಡಿಸಬೇಕು. ನಿರ್ವಹಣಾ ಶುಲ್ಕವನ್ನು ಹಾಸಿಗೆ, ಮಂಚ, ಡೈನಿಂಗ್ ಟೇಬಲ್, ಕುಡಿಯುವ ನೀರು, ಸೋಲಾರ್ ಅಳವಡಿಕೆಗೆ ಬಳಸಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

    ಕಳೆದ ಆಯವ್ಯಯದಲ್ಲಿ ಹಂಚಿಕೆಯಾದ 175 ಕೋಟಿ ರೂ.ಗಳಲ್ಲಿ 107 ಕೋಟಿ ವೆಚ್ಚವಾಗಿದ್ದು, ಹೆಚ್ಚುವರಿಯಾಗಿ 419.67 ಕೋಟಿ ರೂ.ಗಳ ಆವಶ್ಯಕತೆಯಿದೆ ಎಂದರು.

    ಹೆಚ್ಚುವರಿ ಕೊಳವೆ ಬಾವಿಗಳಿಗೆ ಅನುಮೋದನೆ
    ಸಮಾಜ ಕಲ್ಯಾಣ ಇಲಾಖೆಯಲ್ಲಿ ಗಂಗಾ ಕಲ್ಯಾಣ ಯೋಜನೆಯಲ್ಲಿ ಕೊಳವೆ ಬಾವಿ ಕೊರೆಯಲು ಸಹಾಯಧನ ನೀಡಲಾಗುತ್ತಿದೆ. ಸಚಿವ ಸಂಪುಟದಲ್ಲಿ ಹೆಚ್ಚುವರಿಯಾಗಿ 9210 ಕೊಳವೆ ಬಾವಿಗಳಿಗೆ ಅನುಮೋದನೆ ಸಿಕ್ಕಿದೆ. ಇದಕ್ಕೆ ಶಾಸಕರಿಂದ ಫಲಾನುಭವಿಗಳ ಪಟ್ಟಿಯನ್ನು ಪಡೆಯಬೇಕು.

    ಫಲಾನುಭವಿಗಳ ಆಯ್ಕೆ, ಹಂಚಿಕೆಗೆ ಮಾರ್ಗಸೂಚಿಗಳನ್ನು ತಯಾರಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

    ಸಾಮಾಜಿಕ ಸಬಲೀಕರಣ ಕಾರ್ಯಕ್ರಮಗಳಲ್ಲಿ ಅಂತರ್ಜಾತಿ ವಿವಾಹ, ಒಳಪಂಗಡಗಳ ಅಂತರ್ಜಾತಿ ವಿವಾಹ, ವಿಧವಾ ವಿವಾಹ, ದೇವದಾಸಿಯರ ಮಕ್ಕಳ ವಿವಾಹ ಮತ್ತು ಸರಳ ವಿವಾಹಗಳಿಗೆ ಪ್ರೋತ್ಸಾಹಧನ ನೀಡಲು ಇನ್ನೂ 123 ಕೋಟಿ ರೂ.ಗಳ ಆವಶ್ಯಕತೆ ಇದೆ.

    ಈಗಾಗಲೇ 126 ಕೋಟಿ ರೂ.ಗಳನ್ನು ಪಾವತಿಸಲಾಗಿದೆ ಎಂದು ಸಚಿವರು ತಿಳಿಸಿದರು. ಇದೇ ವೇಳೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ. ಸಹಿತ ಸಮಾಜ ಕಲ್ಯಾಣ ಇಲಾಖೆಯಲ್ಲಿನ ಕಾರ್ಯಕ್ರಮಗಳ ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ಕ್ರಮವಹಿಸಲು ಸೂಚನೆ ನೀಡಿದರು.

    ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಪಿ., ಸಲಹೆಗಾರ ನಿವೃತ್ತ ಅಧಿಕಾರಿ ವೆಂಕಟಯ್ಯ ಮೊದಲಾದವರು ಸಭೆಯಲ್ಲಿ ಹಾಜರಿದ್ದರು.

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending