Connect with us

DAKSHINA KANNADA

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗಂಜಿಮಠ ಶಾಖೆಯಲ್ಲಿ ಗ್ರಾಹಕರ ಸಭೆ

Published

on

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗಂಜಿಮಠ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷ ‘ಸಹಕಾರ ರತ್ನ’ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಗಂಜಿಮಠ ಶಾಖೆಯಲ್ಲಿ ಜರಗಿತು.

ಈ ಕಾರ್ಯಕ್ರಮವನ್ನು ಸಂಘದ ಸದಸ್ಯರು ಕೃಷ್ಣ ಕೆ. ಅಮೀನ್, ಕೆ.ನಾರಾಯಣ ಕಾರಂತ್, ಸೋಹನ್ ಅತಿಕಾರಿ, ದಯಾನಂದ್, ಸುನೀಲ್ ಮನೋಜ್ ಫೆರ್ನಾಂಡಿಸ್ ರವರು ದೀಪ ಪ್ರಜ್ವಲನೆ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, ಸಂಘದ ಅಭಿವೃದ್ಧಿಯಲ್ಲಿ ಆಡಳಿತ ಮಂಡಳಿಯೊಂದಿಗೆ ಸಿಬ್ಬಂದಿ ವರ್ಗ ಹಾಗೂ ಎಲ್ಲಾ ಗ್ರಾಹಕರ ಸಹಕಾರದಿಂದ ಪ್ರತಿ ವರ್ಷದಂತೆ ಈ ವರ್ಷವು ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಸಂಘವು ಇ-ಸ್ಟಾಂಪಿಂಗ್ ಸೇವೆಗೆ ಕಳೆದ 9 ವರ್ಷಗಳಿಂದ ನಿರಂತರವಾಗಿ ಪ್ರಶಸ್ತಿಯನ್ನು ಪಡೆಯುದರೊಂದಿಗೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿಯನ್ನು ಪಡೆದುಕೊಂಡ ಹೆಮ್ಮೆ ನಮ್ಮದಾಗಿದೆ. ಇ–ಸ್ಟಾಂಪಿಂಗ್ ಸೇವೆಯು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಎಲ್ಲಾ ಶಾಖೆಗಳಲ್ಲಿ ಹಾಗೂ ಡಿ.ಸಿ ಆಫೀಸಿನ ಬಳಿ ಇರುವ ಶಾಖೆಯಲ್ಲಿ ಸಂಜೆ 7 ಗಂಟೆಯವರೆಗೆ ಲಭ್ಯವಿರುತ್ತದೆ. ಸಂಘದ ಪ್ರತಿ ಶಾಖೆಗಳಲ್ಲೂ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಗಂಜಿಮಠ ಪರಿಸರದಲ್ಲೂ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ಸಂಘದ ಸದಸ್ಯರು ಸುನೀಲ್ ಮನೋಜ್ ಫೆರ್ನಾಂಡಿಸ್ ರವರು ಸಂಘದ ವಾರ್ಷಿಕೋತ್ಸವಕ್ಕೆ ಶುಭವನ್ನು ಹಾರೈಸಿ, ಸಂಘವು ಅತೀ ಹೆಚ್ಚಿನ ಮಹಿಳಾ ಸಿಬ್ಬಂದಿಗಳನ್ನು ನೇಮಿಸಿದ್ದು, ಮಹಿಳಾ ಸಬಲೀಕರಣಕ್ಕೆ ಸಂಘದ ಪಾತ್ರ ಅನನ್ಯ. ಸಂಘವು ಇನ್ನಷ್ಟು ಉತ್ತುಂಗಕ್ಕೆ ಏರಿ ಹಲವಾರು ಶಾಖೆಗಳನ್ನು ತೆರೆದು ಜನರಿಗೆ ಉತ್ತಮ ಸೇವೆಯನ್ನು ನೀಡುವಂತಾಗಲಿ ಎಂದು ಆಶಿಸಿದರು. ಸಂಘದ ಸದಸ್ಯರು ಹಾಗೂ ಗಂಜಿಮಠ ಗ್ರಾಮ ಪಂಚಾಯತ್‌ನ ಅಧ್ಯಕ್ಷೆ ಮಾಲತಿ ಅವರು ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿ ಗಂಜಿಮಠ ಪಂಚಾಯತ್ ಕಟ್ಟಡದಲ್ಲಿ ಈ ಶಾಖೆ ಇರುವಂತಹದ್ದು ಖುಷಿಯ ವಿಚಾರ. ಶಾಖೆಯು ಕಷ್ಟ ಕಾಲದಲ್ಲಿ ಜನರ ಸಮಸ್ಯೆಗೆ ಉತ್ತಮ ಸ್ಪಂದನೆಯನ್ನು ನೀಡಿದೆ. ಸಿಬ್ಬಂದಿಗಳ ನಗುಮೊಗದ ಸೇವೆಗೆ ಹಾಗೂ ಈ ಕಿರು ಅವಧಿಯಲ್ಲಿ ಸಂಘದ ಬೆಳವಣಿಗೆಗೆ ಕಾರಣೀಕರ್ತರಾದ ಸಂಘದ ಅಧ್ಯಕ್ಷರಿಗೆ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರುಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ನೇಮಿರಾಜ್ ಪಿ, ನಿರ್ದೇಶಕ ಗೋಪಾಲ್ ಎಮ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಹಾಯಕ ಪ್ರಬಂಧಕಾರ ವಿಶ್ವನಾಥ್ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ ಶಾಖಾಧಿಕಾರಿ ಸುಜಾತ ಅವರು ಸ್ವಾಗತಿಸಿ, ಗಂಜಿಮಠ ಶಾಖೆಯ ಗುಮಾಸ್ತೆ ಶಮಿತಾ ವಂದಿಸಿದರು. ಗಂಜಿಮಠ ಶಾಖೆಯ ಪ್ರಭಾರ ಶಾಖಾಧಿಕಾರಿ ರಮ್ಯ ಕಾರ್ಯಕ್ರಮ ನಿರೂಪಿಸಿದರು.

DAKSHINA KANNADA

ಅತ್ತಾವರ ಅಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ – ವೃದ್ಧೆ ಸಾವು..!

Published

on

ಮಂಗಳೂರು: ಮಂಗಳೂರಿನ ಅತ್ತಾವರದ ಅಪಾರ್ಟ್‌ ಮೆಂಟ್‌ವೊಂದರಲ್ಲಿ ಇಂದು ಬೆಳಗ್ಗೆ ನಡೆದ ಆಕಸ್ಮಿಕ ಬೆಂಕಿ ಅನಾಹುತದಲ್ಲಿ ಗಂಭೀರ ಗಾಯಗೊಂಡಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ‌ಮಾಹಿತಿ ನೀಡಿದ್ದಾರೆ.

ಶಾಹಿನಾ ನುಸ್ಬಾ(58) ಸಾವನ್ನಪ್ಪಿದ ವೃದ್ಧೆ ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮುಂಜಾನೆ 4 ಗಂಟೆಯ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು, ಐವರು ಮಕ್ಕಳ ಸಹಿತ ಎಂಟು ಮಂದಿ ಅಪಾಯದಿಂದ ಪಾರಾಗಿದ್ದಾರೆ.

ಅನಾರೋಗ್ಯದಿಂದಾಗಿ ಬೆಡ್ ರೂಮ್ ನಲ್ಲೇ ಇದ್ದ ವೃದ್ಧ ಮಹಿಳೆ ದಟ್ಟ ಹೊಗೆಯಿಂದಾಗಿ ತಕ್ಷಣ ಹೊರಬರಲಾಗದೇ ಉಸಿರುಗಟ್ಟಿ ಚಿಂತಾಜನಕ ಸ್ಥಿತಿಯಲ್ಲಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Continue Reading

DAKSHINA KANNADA

ನ.30ರಂದು ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ

Published

on

ಮಂಗಳೂರು: ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

“ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನೆರವೇರಲಿದೆ. ಖ್ಯಾತ ವಾಸ್ತು ತಜ್ಞಮಹೇಶ್ ಮುನಿಯಂಗಳ ಇವರ ವಾಸ್ತು ವಿನ್ಯಾಸದೊಂದಿಗೆ ಸುಮಾರು 12 ರಿಂದ 15 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಕ್ಷೇತ್ರ ಜೀರ್ಣೋದ್ಧಾರ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಈಗಾಗಲೇ ನವೆಂಬರ್ 11ರಂದು ಜಾರಚಾವಡಿಯಲ್ಲಿ ಪ್ರಧಾನ ದೈವ ಜಾರಂದಾಯ  ಬಂಟ ಮಾಯಾಂದಾಲ್ ದೈವಗಳ ನೇಮೋತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿದೆ. ನವೆಂಬರ್ 30ರಂದು
ಬೆಳಿಗ್ಗೆ 9.00 ಗಂಟೆಗೆ ಸರಳ ಜುಮಾದಿ ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ 11.00 ಗಂಟೆಗೆ ಶ್ರೀ ಜಾರ ಆದಿ ಕ್ಷೇತ್ರದ ಗಿರಿಯಲ್ಲಿ ಗ್ರಾಮ ದೈವ ಶ್ರೀ ಬಂಟ ಸರಳ ಜುಮಾದಿ ಬಂಟ ಮತ್ತು ಪರಿವಾರ ದೈವಗಳಿಗೆ ನಿಧಿ ಕುಂಬ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನೆರವೇರಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ  ಭಕ್ತಾಧಿಗಳು ತನು ಮನ ಧನಗಳಿಂದ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಬಳಿಕ ಮಾತಾಡಿದ ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯ ಅವರು, “ಶ್ರೀ ಆದಿ ಕ್ಷೇತ್ರ ಜಾರ ಇದು ತುಳುನಾಡಿನ ಕಾರ್ಣಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಸಾನಿಧ್ಯ ಪ್ರಧಾನ ದೈವಗಳಾಗಿ ಶ್ರೀ ಉಳ್ಳಾಯ, ಶ್ರೀ ಜಾರಂದಾಯ ಬಂಟ, ಸರಳ ಧೂಮಾವತಿ ಬಂಟ, ಕಾಂತೇರಿ ಧೂಮಾವತಿ ಬಂಟ, ಮಾಯಾಂದಾಲ್ ದೈವ, ಪಿಲಿ ಚಾಮುಂಡಿ, ಬಬ್ಬರ್ಯ ದೈವಗಳು ಕ್ಷೇತ್ರ ಹಾಗೂ ಗ್ರಾಮದ ಮಾಗಣೆಯ ದೈವಗಳಾಗಿವೆ. ಕ್ಷೇತ್ರದ ಆದಿ ದೈವಗಳಾಗಿ ಕಲ್ಲುರ್ಟಿ, ಪಟ್ಟದ ಅಣ್ಣಪ್ಪ ಸ್ವಾಮಿ, ಸ್ಥಳದ ಪಂಜುರ್ಲಿ, ನಾಗಬ್ರಹ್ಮ ಪ್ರಧಾನ ಸಾನಿಧ್ಯಗಳಾಗಿವೆ” ಎಂದರು. ಸುದ್ದಿಗೋಷ್ಠಿಯಲ್ಲಿ ದೈವಜ್ಞ ಶ್ರೀ ಪ್ರಕಾಶ ವಿ. ಹೊಳ್ಳ ಶಕ್ತಿನಗರ, ಕ್ಷೇತ್ರದ ತಂತ್ರಿಗಳಾದ ಕೊಂರ್ಗಿಬೈಲು ನಾರಾಯಣ ಮಯ್ಯರ , ಕ್ಷೇತ್ರದ ಗಡಿ ಪ್ರಧಾನರಾದ ಜತ್ತಿ ಪೂಜಾರಿ ಜಾರ, ಅಧ್ಯಕ್ಷರಾದ ಉದಯಶಂಕರ ಜಾರಮನೆ, ಕಾರ್ಯದರ್ಶಿ ಎಂ. ವಿಠಲ್ ಪೂಜಾರಿ ಕುಕ್ಕುದಡಿ, ಕೋಶಾಧಿಕಾರಿ ಜೀವನ್ ದಾಸ್ ಜಾರ ಮತ್ತಿತರರು ಉಪಸ್ಥಿತರಿದ್ದರು.

Continue Reading

DAKSHINA KANNADA

Mangaluru: ಬೆಳ್ಮ ಬೋಲ್ದನ್‌ ಕುಟುಂಬಿಕರು ತರವಾಡು ಮನೆಯಲ್ಲಿ ಕೋಲೋತ್ಸವ

Published

on

ಮಂಗಳೂರು: ಕೊಣಾಜೆ ಬೆಳ್ಮದಲ್ಲಿರುವ ಬೋಲ್ದನ್‌ ಕುಟುಂಬಿಕರ ತರವಾಡು ಮನೆಯಲ್ಲಿ ಕಲ್ಲುರ್ಟಿ, ಪಂಜುರ್ಲಿ, ಗುಳಿಗ ಮೂರನೇ ವರ್ಷದ ಕೋಲೋತ್ಸವ ಭಾನುವಾರ ರಾತ್ರಿ ಸಂಭ್ರಮದಿಂದ ಜರುಗಿತು.

ಭಾನುವಾರ ಬೆಳಿಗ್ಗೆ ಪ್ರಶಾಂತ್ ಉಡುಪ ಪೌರೋಹಿತ್ಯದಲ್ಲಿ ನಾಗತಂಬಿಲ, ಗಣಹೋಮ ನಡೆದ ಬಳಿಕ ಶ್ರೀ ವೆಂಕಟ್ರಮಣ ದೇವರ ಮುಡಿಪು ಕಟ್ಟುವಿಕೆಯಲ್ಲಿ ಸರ್ವ ಕುಟುಂಬಿಕರು ಪಾಲ್ಗೊಂಡು ದೇವತಾ ಕಾರ್ಯದಲ್ಲಿ ಭಾಗವಹಿಸಿದರು. ಮಧ್ಯಾಹ್ನ ಅನ್ನಸಂಪರ್ತಣೆ ನಡೆಯಿತು.

ಅದೇ ದಿನ ರಾತ್ರಿ 7.30ಕ್ಕೆ ದೈವದ ಭಂಡಾರ ಏರಿ ಬಳಿಕ ಕಲ್ಲುರ್ಟಿ , ಪಂಜುರ್ಲಿ, ಗುಳಿಗ ಕೋಲ ಉತ್ಸವ ಜರುಗಿತು. ಮರುದಿನ ಅಗೇಲು ಸೇವೆ ನಡೆಯಿತು.

ತರವಾಡು ಮನೆಯ ಮೋಹಿಣಿ ಬೆಳ್ಮ, ಐತಪ್ಪ ಬೆಳ್ತಂಗಡಿ, ಧರ್ಣಪ್ಪ ಧರ್ಮಸ್ಥಳ, ವಿಶ್ವನಾಥ ಕಡಬ, ದಯಾನಂದ್‌ ಹುಬ್ಬಳ್ಳಿ, ದೇವದಾಸ ಬೆಳ್ಮ, ಆನಂದ ಕಡಬ, ಚಂದ್ರಶೇಖರ ಎಕ್ಕೂರು, ಹರೀಶ ವರ್ಕಾಡಿ ಮೊದಲಾದವರು ಭಾಗವಹಿಸಿದ್ದರು.

ರಾತ್ರಿ ತರವಾಡಿನ ಆಡಳಿತ ಸಮಿತಿ ಪದಾಧಿಕಾರಿಗಳ ಸಭೆ ನಡೆದು ಲೆಕ್ಕ ಪತ್ರವನ್ನು ಕಾರ್ಯದರ್ಶಿ ಆನಂದ ಕಡಬ ಮಂಡಿಸಿದರು.

ಕ್ಷೇತ್ರದ ಅಂಗಣಕ್ಕೆ ಇಂಟರ್‌ಲಾಕ್ ಅಳವಡಿಸಿದ ದಯಾನಂದ ಹುಬ್ಬಳ್ಳಿ, ತರವಾಡು ಮನೆಗೆ ಗ್ರೈಂಡರ್‌ ನೀಡಿದ ಶೋಭಾ ವಾಮಂಜೂರು, ತರವಾಡು ಮನೆಗೆ ಕೊಡುಗೆಯಾಗಿ ನೀಡಿದ ಕುರ್ಚಿಗಳಿಗೆ ಆರ್ಥಿಕ ಸಹಕಾರ ನೀಡಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಲಾಯಿತು.

 

ದಿನಕರ ಕಯ್ಯಾರ, ವಿಕ್ರಾಂತ್‌ ಜಪ್ಪಿನಮೊಗರು , ಧನ್‌ರಾಜ್ ತಲಪಾಡಿ ಸೇರಿದಂತೆ ಸಮಿತಿ ಪದಾಧಿಕಾರಿಗಳು, ಸರ್ವ ಸದಸ್ಯರೂ ಉಪಸ್ಥಿತರಿದ್ದರು.

Continue Reading

LATEST NEWS

Trending