Connect with us

BELTHANGADY

ಬೆಳ್ತಂಗಡಿ: ಗಾಂಜಾ ಸೇವಿಸಿ ಚಪಾತಿ ಲಟ್ಟಣಿಗೆಯಿಂದ ಹಲ್ಲೆ ನಡೆಸಿ ಪತ್ನಿಯ ಕಾಲು ಮುರಿದ ಭೂಪ

Published

on

ಬೆಳ್ತಂಗಡಿ: ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿ ಕಳೆದ 10 ವರ್ಷಗಳಿಂದ ಗಂಡನ ಜತೆ ಸಂಸಾರ ನಡೆಸುತ್ತಿದ್ದ ಹೆಂಡತಿಗೆ ಅಮಲು ಪದಾರ್ಥ ಸೇವಿಸಿ ಬಂದ ಗಂಡ ಹಲ್ಲೆ ಮಾಡಿ ಕಾಲು ಮುರಿದ ಘಟನೆ ಬೆಳ್ತಂಗಡಿಯ ನಾವೂರಿನಲ್ಲಿ ನಡೆದಿದೆ.

ನಾವೂರು ಗ್ರಾಮದ ಜನತಾ ಕಾಲನಿಯ ಸೈನಾಝ್ (27) ಮತ್ತು ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆ ನಿವಾಸಿ ಅಬ್ದುಲ್ ಆರಿಫ್ (29)ಪರಸ್ಪರ ಪ್ರೀತಿಸಿ 2012 ರಲ್ಲಿ ನಾವೂರಿನ ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಮದುವೆಯಾಗಿದ್ದರು.


ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರಾರಂಭದ ವರ್ಷಗಳಲ್ಲಿ ಪತಿ- ಪತ್ನಿ ಅನ್ಯೋನ್ಯವಾಗಿದ್ದರು. ಕ್ರಮೇಣ ಪತಿ ಆರಿಫ್‌ ಅಮಲು ಪದಾರ್ಥ ಸೇವಿಸಿ ಪತ್ನಿ ಜತೆ ಗಲಾಟೆ ಮಾಡುತ್ತಾ ಹಲ್ಲೆ ಮಾಡಲು ಆರಂಭಿಸಿದ್ದ.

ಈ ವಿಚಾರ ತಿಳಿದು ಎರಡು ಮನೆಯವರು ಸಂಧಾನ ಮಾಡಿದ ಬಳಿಕ ನಡ ಗ್ರಾಮದ ಕುತ್ತೊಟ್ಟು ಎಂಬಲ್ಲಿ ಬಾಡಿಗೆ ಮನೆ ಮಾಡಿ ವಾಸವಿದ್ದರು. ಆರಿಫ್ ಗುರುವಾಯನಕೆರೆ ಮರದ ಮಿಲ್ನಲ್ಲಿ ಕೆಲಸ ಮಾಡುತ್ತಿದ್ದಾನೆ.

ಇದೇ ಡಿಸೆಂಬರ್ 11 ರಂದು ಸಂಜೆ 5 ಗಂಟೆಗೆ ಆರಿಫ್ ಇಂದಬೆಟ್ಟುವಿನ ಕಲ್ಲಾಜೆ ತಾಯಿ ಮನೆಗೆ ಹೋಗೋಣ ಎಂದು ಬೈಕ್ ನಲ್ಲಿ ಹೆಂಡತಿ ಮಕ್ಕಳನ್ನು ಕೂರಿಸಿಕೊಂಡು ಹೊರಟಿದ್ದಾನೆ.
ನಾವೂರು ತಲುಪಿದಾಗ ಬೈಕ್ ಕೆಟ್ಟು ಹೋಗಿದೆ, ನಿನ್ನ ಅಣ್ಣ ಹಮೀದ್ ಮನೆಗೆ ಹೋಗೋಣ ಎಂದು ಅಲ್ಲಿಗೆ ಕರೆದುಕೊಂಡು ಹೋದಾಗ ಮನೆಗೆ ಬೀಗ ಹಾಕಲಾಗಿತ್ತು. ಬಳಿಕ ಆರಿಫ್ ಬಾಗಿಲಿನ ಬೀಗ ಮುರಿದು ಸೈನಾಝ್‌ ಳನ್ನು ಮನೆಯೊಳಗೆ ಕೂಡಿ ಹಾಕಿ ಕುಡಿದ ಮತ್ತಿನಲ್ಲಿ ಏಕಾಏಕಿ ಹಲ್ಲೆ ಮಾಡಿದ್ದಾನೆ.

ಅವಾಚ್ಯ ಶಬ್ದಗಳಿಂದ ಬೈದು ದೇಹದ ವಿವಿಧ ಭಾಗಗಳಿಗೆ ಹಲ್ಲೆ ಮಾಡಿ ಚಪಾತಿ ಮಾಡುವ ಲಟ್ಟಣಿಗೆಯಿಂದ ಕಾಲಿಗೆ ಗಂಭೀರ ಹಲ್ಲೆ ಮಾಡಿದ್ದಾನೆ.

ಇದರಿಂದ ಆಕೆಯ ಕಾಲು ಮುರಿದಿದೆ. ಈ ವಿಚಾರ ತಿಳಿದ ಸೈನಾಝ್‌ ಮನೆಯವರು ಆಕೆಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಸಿದ್ದಾರೆ.

‘ ನನ್ನ ಗಂಡನಿಗೆ ಗಾಂಜಾ, ಎಮ್.ಡಿ.ಎಮ್ ಸೇವಿಸುವ ಅಭ್ಯಾಸ ಇದ್ದು ಇದರಿಂದ ಈ ರೀತಿ ಹಿಂಸೆ ನೀಡುತ್ತಿದ್ದಾನೆ. ನನಗೆ ನ್ಯಾಯ ಬೇಕು. ಅದಕ್ಕಾಗಿ ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ’ ಎಂದು ಹಲ್ಲೆಗೊಳಗಾದ ಸೈನಾಝ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

 

Click to comment

Leave a Reply

Your email address will not be published. Required fields are marked *

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending