Friday, July 1, 2022

ಮಂಗಳೂರು: ಗಾಂಜಾ ಸೇವನೆ ಪ್ರಕರಣ- ಐವರು ವಿದ್ಯಾರ್ಥಿಗಳು ಸೇರಿ ಒಟ್ಟು ಆರು ಜನರ ಬಂಧನ

ಮಂಗಳೂರು: ಗಾಂಜಾ ಸೇವನೆ ಮಾಡಿದ ಎರಡು ಪ್ರತ್ಯೇಕ ಪ್ರಕರಣದಲ್ಲಿ ಒಟ್ಟು ಆರು ಜನರನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ರುತಿನ್(20), ಹರಿಕೃಷ್ಣನ್ ಕೆ.ಆರ್ (22), ಆಕಾಶ್ .ಕೆ.(19), ಅಕ್ಷಯ್ (20), ಮಾರ್ಟಿನ್ (20), ಮತ್ತೊಂದು ಪ್ರಕರಣದಲ್ಲಿ ವಸಂತ ಕುಮಾರ್ (42) ಎಂದು ಗುರುತಿಸಲಾಗಿದೆ.

ಘಟನೆ ವಿವರ
ನ.17ರಂದು ಉರ್ವಾ ಠಾಣೆಯ ಪೊಲೀಸ್‌ ವಿಶೇಷ ರೌಂಡ್ಸ್ನಲ್ಲಿರುವಾಗ ನಗರದ ಬಿಜೈ ಕಾಪಿಕಾಡ್ ಐವರು ಸೇರಿ ಸಿಗರೇಟನ್ನು ಸೇದುತ್ತಿದುದ್ದನ್ನು ಕಂಡು ಪೊಲೀಸರು ವಿಚಾರಿಸಿದಾಗ ಅವರು ಅಸ್ಪಷ್ಟವಾಗಿ ತೊದಲು ನುಡಿಯಲ್ಲಿ ಉತ್ತರವನ್ನು ನೀಡಿದ್ದು, ಅವರು ಮಾತನಾಡುವಾಗ ಬಾಯಿಯಿಂದ ಗಾಂಜಾ ಸೇವನೆ ಮಾಡಿರುವ ವಾಸನೆ ಬರುತ್ತಿದ್ದು,

ಅವರನ್ನು ಕೂಲಂಕುಷವಾಗಿ ವಿಚಾರಿಸಿದಾಗ ನಗರದ ಖಾಸಗಿ ಇಂಜನಿಯರಿಂಗ್ ಕಾಲೇಜು ವಿದ್ಯಾರ್ಥಿಗಳೆಂದು ತಿಳಿಸಿದ್ದು,

ಅವರು ಗಾಂಜಾ ಸೇವನೆ ಮಾಡಿದ್ದನ್ನು ಒಪ್ಪಿಕೊಂಡ ಮೇರೆಗೆ ಅವರನ್ನು ವಶಕ್ಕೆ ಪಡೆದುಕೊಂಡು ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿದೆ. ಈ ಬಗ್ಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತೊಂದು ಪ್ರಕರಣ
ನ.17ರಂದು ಮುಂಜಾನೆ 5 ಗಂಟೆಗೆ ಉರ್ವಾ ಠಾಣೆಯ ಪೊಲೀಸ್‌ ವಿಶೇಷ ರೌಂಡ್ಸ್ನಲ್ಲಿರುವಾಗ ಉರ್ವ ಠಾಣಾ ವ್ಯಾಪ್ತಿಯ ಕೊಟ್ಟಾರ ಕ್ರಾಸ್ ಬಳಿ ಓರ್ವ ವ್ಯಕ್ತಿಯು ಸಿಗರೇಟನ್ನು ಸೇದುತ್ತಿದುದ್ದನ್ನು ಕಂಡು ವಿಚಾರಿಸಿದ್ದಾರೆ.

ಈ ವೇಳೆ ಆತನು ಮಾತನಾಡುವಾಗ ಬಾಯಿಯಿಂದ ಗಾಂಜಾ ಸೇವನೆ ಮಾಡಿರುವ ವಾಸನೆ ಬರುತ್ತಿದ್ದು, ನಂತರ ವೈದ್ಯಾದಿಕಾರಿಯಿಂದ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ರಸ್ತೆ ಬದಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ : ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಯ ಬದಿಯಲ್ಲಿ ಗುಡ್ಡ ಜರಿದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದಲ್ಲದೆ ಅರ್ಧ ತಾಸಿಗಿಂತಲೂ ಹೆಚ್ಚು ಸಮಯ ರಸ್ತೆ ಸಂಚಾರಕ್ಕೆ ಅಡಚಣೆಯಾದ ಘಟನೆ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ನಾವೂರ,...

ಪುತ್ತೂರಿನಲ್ಲಿ ಸ್ವಿಫ್ಟ್ ಮತ್ತು ಓಮ್ನಿ ಕಾರು ನಡುವೆ ಭೀಕರ ಅಪಘಾತ: ಹಲವರಿಗೆ ಗಾಯ

ಪುತ್ತೂರು: ಪುತ್ತೂರಿನ ಮುಂಡೂರು ಗ್ರಾಮದ ಪಂಜಳದಲ್ಲಿ ಸ್ವಿಫ್ಟ್ ಮತ್ತು ಮಾರುತಿ ಓಮ್ನಿ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಹಲವು ಮಂದಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.ಗಾಯಗೊಂಡ ಓಮ್ನಿ ಮತ್ತು ಕಾರಿನಲ್ಲಿದ್ದವರನ್ನು ಪುತ್ತೂರಿನ...

ಮಂಗಳೂರಿನಲ್ಲಿ ಅಗ್ನಿವೀರ್ ಪ್ರವೇಶ ಪರೀಕ್ಷೆ: ಅವಿವಾಹಿತ ಪುರುಷರಿಂದ ಅರ್ಜಿ ಆಹ್ವಾನ

ಮಂಗಳೂರು: ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಶೇ.50ರಷ್ಟು ಅಂಕ ಮತ್ತು...