Connect with us

    BANTWAL

    ಬಂಟ್ವಾಳ: ಕಂಟೈನರ್ ಲಾರಿ ಪಲ್ಟಿ

    Published

    on

    ಬಂಟ್ವಾಳ: ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆಗೆ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಮಾಣಿ ಸಮೀಪದ ಪಳಿಕೆ ಎಂಬಲ್ಲಿ ನಡೆದಿದೆ.


    ನಿನ್ನೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ.

    ಘಟನೆಯಿಂದಾಗಿ ಸ್ವಲ್ಪ ಹೊತ್ತುಗಳ ಕಾಲ ವಾಹನಗಳ ಸಂಚಾರದಲ್ಲಿ ಅಸ್ತವ್ಯಸ್ತ ಉಂಟಾಯಿತು.

    ಬಳಿಕ ಸಂಚಾರಿ ಪೊಲೀಸರು ಕ್ರೇನ್ ಬಳಸಿ ಲಾರಿ ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

    BANTWAL

    ಬಂಟ್ವಾಳ: ಮಂಗಳೂರಿನಿಂದ ಪೊಳಲಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಚಾಲನೆ

    Published

    on

    ಬಂಟ್ವಾಳ: ಮಂಗಳೂರಿನಿಂದ ಪೊಳಲಿಯ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ.

    ಪೊಳಲಿ ಕ್ಷೇತ್ರದ ವಠಾರದಲ್ಲಿ ಕೆಎಸ್ ಆರ್ ಟಿಸಿಗೆ ಪೂಜೆ ನೆರವೇರಿಸಿದ ಬಳಿಕ ಚಾಲನೆಗೊಂಡಿದೆ.ಶ್ರೀ ಪೊಳಲಿ ಕ್ಷೇತ್ರದಿಂದ ಬೆಂಜನಪದವು, ಕಲ್ಪನೆ ,ಕಡೇಗೋಳಿ, ಫರಂಗಿಪೇಟೆ, ಪಡೀಲಿನ ಮೂಲಕ ಮಂಗಳೂರಿಗೆ ಈ ಸರಕಾರಿ ಬಸ್ ನ ವ್ಯವಸ್ಥೆಯು ಇರಲಿದೆ.

    ಇದರಿಂದಾಗಿ ಈ ಭಾಗದ ಜನರ ಬಹುಕಾಲದ ಕನಸು ನನಸಾಗಿದೆ.ಹಲವು ವರ್ಷದಿಂದ ಈ ರೂಟಿನಲ್ಲಿ ಮಂಗಳೂರಿನಿಂದ ಪೊಳಲಿಗೆ ಸರಕಾರಿ ಬಸ್ ನ ವ್ಯವಸ್ಥೆ ಕಲ್ಪಿಸುವಂತೆ ಇಲ್ಲಿನ ನಾಗರಿಕರು‌ ಕೆಎಸ್ ಆರ್ ಟಿಸಿ ಹಾಗೂ ಜಿಲ್ಲಾಡಳಿತಕ್ಕೆ ಮನವಿ‌ ಸಲ್ಲಿಸಿತ್ತು.ಬ್ರಹ್ಮರಕೊಟ್ಲು ಯಕ್ಷಮಿತ್ರ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಮುತುವರ್ಜಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿಯೇ ಕೆಎಸ್ ಆರ್ ಟಿಸಿ‌ಬಸ್ ಬಸ್ ಆರಂಭಗೊಂಡಿದೆ. ನವರಾತ್ರಿಯ ಬಳಿಕವು ಈ ಬಸ್ ನ ವ್ಯವಸ್ಥೆ ಮುಂದುವರಿಯಲಿದೆ ಎಂದು ಸ್ಥಳೀಯರು‌ ತಿಳಿಸಿದ್ದಾರೆ.

    Continue Reading

    BANTWAL

    ಅಕ್ರಮ ಮರಳು ಅಡ್ಡೆಗೆ ದಾಳಿ; 20 ಬೋಟ್ ವಶಕ್ಕೆ

    Published

    on

    ಬಂಟ್ವಾಳ: ತುಂಬೆ, ಮಾರಿಪಳ್ಳ ಭಾಗದ ನೇತ್ರಾವತಿ ನದಿಯಲ್ಲಿ ದೋಣಿ ಮೂಲಕ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ಶುಕ್ರವಾರ ದ.ಕ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ದ.ಕ ಜಿಲ್ಲಾಧಿಕಾಗಳ ಆದೇಶದಂತೆ 20 ಬೋಟ್‌ಗಳನ್ನು ವಶಪಡಿಸಿಕೊಂಡಿದ್ದರು. ಅಧಿಕಾರಿಗಳ ದಾಳಿಯ ವೇಳೆ ಮರಳುಗಾರಿಕೆ ನಡೆಸುತ್ತಿದ್ದ ಕಾರ್ಮಿಕರು ಪಲಾಯನಗೈದಿದ್ದಾರೆಂದು ವರದಿಯಾಗಿದೆ.


    ದೋಣಿಗಳನ್ನು 4ರಂತೆ ಜೋಡಸಿಕೊಂಡು 5 ತಂಡಗಳ ಮೂಲಕ ನದಿಯಲ್ಲೇ ಮಂಗಳೂರಿನ ಅಡ್ಯಾರ್‌ವರೆಗೆ ಸಾಗಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ. ಬೋಟ್‌ನಲ್ಲಿ ಯಾವುದೇ ರೀತಿಯ ಮರಳು ಪತ್ತೆಯಾಗಿಲ್ಲ. ಮರಳುಗಾರಿಕೆಲ್ಲಿ ತೊಡಗಿದ್ದವರು ಯಾರು, ಬೋಟ್‌ಗಳು ಯಾರಿಗೆ ಸಂಬಂಧಟ್ಟದ್ದು ಎಂಬುವುದರ ಕುರಿತು ಅಧಿಕಾರಿಗಳ ತನಿಖೆಯ ಬಳಿಕ ತಿಳಿದುಬರಬೇಕಷ್ಟೇ.
    ಸಾಕಷ್ಟು ಸಮಯದಿಮದ ಕೇಳಿ ಬರುತ್ತಿದ್ದ ಆರೋಪ:
    ದೋಣಿಗಳ ಸಹಾಯದಿಂದ ನದಿಯಲ್ಲಿ ಉತ್ತರ ಭಾರತದ ಕಾರ್ಮಿಕರನ್ನು ಬಳಸಿಕೊಂಡು ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂಬ ಅರೋಪ ಸಾಕಷ್ಟು ಸಮಯದಿಂದ ಕೇಳಿ ಬರುತ್ತಿದ್ದವು. ಈ ಹಿನನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ದಾಳಿ ನಡೆಸಿ ಆಕ್ರಮವನ್ನು ಮಟ್ಟ ಹಾಕುವಂತೆ ಗಣಿ ಇಲಾಖೆಗೆ ಆದೇಶವನ್ನು ನೀಡಿದ್ದರು.
    ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ. ಭಟ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಹಿರಿಯ ಭೂ ವಿಜ್ಞಾನಿ ಗಿರಿಶ್ ಮೋಹನ್, ಭೂ ವಿಜ್ಞಾನಿ ಮಹಾದೇಶ್ವರ, ಬಂಟ್ವಾಳ ಕಂದಾಯ ನಿರೀಕ್ಷಕ ಜನಾರ್ಧನ್ ಜೆ., ಗ್ರಾಮಕರಣಿಕರು, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

    Continue Reading

    BANTWAL

    ಸಜಿಪದಲ್ಲಿ ರಸ್ತೆ ಅಪಘಾತ: ಯುವಕ ಮೃ*ತ್ಯು

    Published

    on

    ಬಂಟ್ವಾಳ: ಮೆಲ್ಕಾರ್ – ಮುಡಿಪು ರಾಜ್ಯ ಹೆದ್ದಾರಿಯ ಸಜಿಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃ*ತಪಟ್ಟಿದ್ದಾರೆ.

    ಬರಿಮಾರು ನಿವಾಸಿ ಸರ್ಫ್ರಾಝ್ ( 33) ಮೃ*ತಪಟ್ಟ ಯುವಕ. ಬೈಕ್ ಸವರಳಾಗಿದ್ದ ಸಹೋದರಿ ಜಾಸ್ಮೀನ್ (18) ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸರ್ಫ್ರಾಝ್ ವಿದ್ಯಾರ್ಥಿನಿಯಾಗಿರುವ ತಂಗಿ ಜಾಸ್ಮೀನ್ ರನ್ನು ಬುಧವಾರ ಬೆಳಗ್ಗೆ ದೇರಳಕಟ್ಟೆಯ ಕಾಲೇಜಿಗೆ ಸ್ಕೂಟರ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

    ಮೆಲ್ಕಾರ್ ನಿಂದ ಮುಡಿಪು ಮಾರ್ಗವಾಗಿ ಮಾರ್ನಬೈಲು ತಲುಪಿದಾಗ ಇವರ ಸ್ಕೂಟರ್ ಗೆ ಎದುರಿನಿಂದ ಇಮ್ತಿಯಾಝ್ ಎಂಬಾತ ಚಲಾಯಿಸಿಕೊಂಡು ಬಂದ ಬೈಕ್ ಢಿಕ್ಕಿ ಹೊಡೆದಿತ್ತು. ಇದರಿಂದ ಸ್ಕೂಟರ್ ನಲ್ಲಿದ್ದ ರಸ್ತೆಗೆ ಎಸೆಯಲ್ಪಟ್ಟಿದ್ದರು.

    ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಸರ್ಫ್ರಾಝ್ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending