Connect with us

DAKSHINA KANNADA

ಮರಕ್ಕೆ ಡಿಕ್ಕಿ ಹೊಡೆದ ಕಂಟೈನರ್: ಸ್ಥಳದಲ್ಲೇ  ದಾರುಣ ಸಾವನ್ನಪ್ಪಿದ ಚಾಲಕ..

Published

on

ಉಪ್ಪಿನಂಗಡಿ:ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊಂದು  ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಚಾಲಕ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಶಿರಾಡಿ ಕೊಡ್ಡೆಕಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ .75 ರಲ್ಲಿ ಬಳಿ ಬುಧವಾರ ತಡರಾತ್ರಿ ನಡೆದಿದೆ. 

ಜಾರ್ಖಂಡ್ ಮೂಲದ ಚಾಲಕ ನುಸ್ರುಲ್ಲಾಖಾನ್ (31)  ಎಂಬಾತನೇ  ಅವಘಡದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದು, ರಾತ್ರಿ ಸುಮಾರು 2 ಗಂಟೆಗೆ  ಅಪಘಾತ ನಡೆದಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.  ಬೇರಾವುದೇ  ಮಾಹಿತಿ ಲಭ್ಯವಾಗಿಲ್ಲ

ಪೊಲೀಸರು ಸ್ಥಳಕ್ಕೆ ದಾವಿಸಿದ್ದು, ಉಪ್ಪಿನಂಗಡಿ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

DAKSHINA KANNADA

ಮತದಾರರ ಚೀಟಿಯಲ್ಲಿ ಕ್ಯೂಆರ್‌ ಕೋಡ್! ಮಂಗಳೂರು ದಕ್ಷಿಣ ಉತ್ತರದಲ್ಲಿ ಅನುಷ್ಠಾನ

Published

on

ಮಂಗಳೂರು: ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣ ಆಯೋಗ ಕೊನೇ ಹಂತದ ಕಸರತ್ತು ಮುಂದುವರಿಸಿದೆ. ನಗರದ ಜನತೆಗೆ ಮತಗಟ್ಟೆಗಳ ಮಾಹಿತಿ ನೀಡಲು ಚುನಾವಣೆ ಸ್ಲಿಪ್‌ಗಳಲ್ಲಿ ಕ್ಯೂಆರ್ ಓಡ್ ನೀಡಲಾಗಿದ್ದು, ಆ ಮೂಲಕ ಮತದಾನ ಕೇಂದ್ರದ ಮಾಹಿತಿ ನೀಡಲು ಮುಂದಾಗಿದೆ.

ಕರ್ನಾಟಕದಲ್ಲಿ ಇದು ಮೊದಲ ಪ್ರಯೋಗವಾಗಿದ್ದು, ದ.ಕ. ಜಿಲ್ಲೆಯ ನಗರಕ್ಕೆ ಹೊಂದಿಕೊಂಡಿರುವ ಎರಡು ಕ್ಷೇತ್ರಗಳಲ್ಲಿ ಮಾತ್ರ ಜಾರಿಗೊಳಿಸಲಾಗಿದೆ. ಇದರಂತೆ ಮಂಗಳೂರು ದಕ್ಷಿಣ ಹಾಗೂ ಉತ್ತರ ಕ್ಷೇತ್ರದಲ್ಲಿ ಸ್ಲಿಪ್ ಮೂಲಕ ಮತದಾರರಿಗೆ ಮತಗಟ್ಟೆಯ ವಿವರ ಒದಗಿಸಲಾಗುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾವಣೆಯಾಗುವ ನಿರೀಕ್ಷೆ ಹೊಂದಲಾಗಿದೆ.

ಮತದಾರರ ಸ್ಲಿಪ್‌ನಲ್ಲಿ ಮತಗಟ್ಟೆಯ ವಿವರ ನಗರದಲ್ಲಿನ ಅನೇಕರಿಗೆ ಮತಗಟ್ಟೆಯ ಬಗ್ಗೆ ಮಾಹಿತಿ ಇರುವುದಿಲ್ಲ. ಮತದಾನಕ್ಕಾಗಿ ಮತಗಟ್ಟೆಗಳನ್ನು ಅರಸಿಕೊಂಡು ಹೋಗಬೇಕಾಗುತ್ತದೆ. ಇದನ್ನು ನೀಗಿಸಲು ಕ್ಯೂಆರ್ ಕೋಡ್ ನೀಡಲಾಗಿದ್ದು, ಸ್ಕ್ಯಾನ್ ಮಾಡಿದ ವೇಳೆ ಮಯಗಟ್ಟೆಯ ಲೊಕೇಷನ್ ಪಡೆಯಬಹುದು. ಈ ಮೂಲಕ ಮತಗಟ್ಟೆ ಹುಡುಕಿ ತೆರಳುವುದನ್ನು ತಪ್ಪಿಸಲು ಸಾಧ್ಯವಾಗಲಿದೆ.

Continue Reading

DAKSHINA KANNADA

ಬಡಗುತಿಟ್ಟು ಯಕ್ಷಗಾನದ ಗಾನ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ..

Published

on

ಉಡುಪಿ: ಬಡಗುತಿಟ್ಟು ಯಕ್ಷಗಾನ ಲೋಕದ ಶ್ರೇಷ್ಠ ಭಾಗವತ, ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ (67ವ) ಇಹಲೋಕ ತ್ಯಜಿಸಿದ್ದಾರೆ. ಅಲ್ಪಕಾಲದಿಂದ ಅಸೌಖ್ಯದಿಂದಿದ್ದ ಇವರು ಬೆಂಗಳೂರಿನಲ್ಲಿರುವ ಪುತ್ರನ  ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಮನೆಯಲ್ಲಿ ಇಂದು(ಎ.25) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಕಾಳಿಂಗ ನಾವುಡರ ಬಳಿಕ ಮಧುರ ಕಂಠದಿಂದ ಹೆಚ್ಚು ಜನಪ್ರಿಯತೆಗಳಿಸಿದ್ದ ಕೀರ್ತಿ ಅವರದ್ದಾಗಿತ್ತು.

bharadeshwara

ಭಾಗವತಿಕೆಯಲ್ಲಿ ಗಾನ ಕೋಗಿಲೆ ಎನಿಸಿಕೊಂಡ ಧಾರೇಶ್ವರ:

ಇವರು ಯಕ್ಷಗಾನ ಕ್ಷೇತ್ರದಲ್ಲಿ 46 ವರ್ಷಗಳ ಸೇವೆ ಸಲ್ಲಿಸಿ ಪೇರ್ಡೂರು ಮೇಳದಲ್ಲಿ ನಿವೃತ್ತಿ ಹೊಂದಿದ್ದರು. ಆರಂಭದಲ್ಲಿ ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಭಾಗವತರಾಗಿ ಪ್ರಖ್ಯಾತಿಗೊಂಡಿದ್ದರು. ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದ ಇವರು ಪ್ರಯೋಗಶೀಲ ಭಾಗವತರೆಂದೇ ಹೆಸರುವಾಸಿಯಾಗಿದ್ದರು. ಹಿರೇಮಹಾಲಿಂಗೇಶ್ವರ ಮೇಳ ಹಾಗೂ ಶಿರಸಿ ಮೇಳದಲ್ಲೂ ಭಾಗವತರಾಗಿ ಬಳಿಕ 28 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ  ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಸಂಗೀತಾಭ್ಯಾಸ ‌ಮಾಡಿ ಕಾರ್ಯಕ್ರಮ ನೀಡುತ್ತಿದ್ದರು. ನಂತರ ಎಲೆಕ್ಟ್ರಿಕ್ ಅಂಗಡಿ ಹಾಕಿ ಯಕ್ಷಗಾನ ಮೇಳಕ್ಕೆ ಲೈಟಿಂಗ್ ವ್ಯವಸ್ಥೆಗೆ ಸೇರಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕವೂ ಅನಿವಾರ್ಯ ಸಂದರ್ಭದಲ್ಲಿ ಭಾಗವತರಾಗಿ ಕಲಾ ಸೇವೆ ಮಾಡಿ ಕಲಾವಿದರ ಮನ ಗೆದ್ದಿದ್ದರು.

ಮುಂದೆ ಓದಿ..; ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು. ಸಜ್ಜನ, ಸದ್ಗುಣಿ, ಮಿತಭಾಷಿಯಾಗಿದ್ದ ಧಾರೇಶ್ವರರು ಯಕ್ಷಗಾನಕ್ಕೆ ಕಾಳಿಂಗ ನಾವಡರ ಅನಂತರ ಭಾಗವತಿಕೆ ತಾರಾ ಮೌಲ್ಯ ತಂದಿದ್ದರು. ಹೊಸ ಹೊಸ ಪ್ರಸಂಗಗಳನ್ನು ಹೊಸತನದಲ್ಲಿ ನಿರ್ದೇಶಿಸುವ ಮೂಲಕ ರಂಗಮಾಂತ್ರಿಕ ಎನಿಸಿದ್ದರು. ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳದ ತಿರುಗಾಟ ನಿಲ್ಲಿಸಿದ್ದರು. ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಹಾಗೂ ಅಪಾರ ಬಂಧುಬಳಗ, ಯಕ್ಷ ಅಭಿಮಾನಿಗಳನ್ನು ಅಗಲಿದ್ದಾರೆ. ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ.

Continue Reading

DAKSHINA KANNADA

ಹಿಂಜಾವೇ ಮುಖಂಡ ಅಕ್ಷಯ್ ರಜಪೂತ್‌ಗೆ ಗಡಿಪಾರು..!

Published

on

ಪುತ್ತೂರು:  ಹಿಂದೂ ಜಾಗರಣ ವೇದಿಕೆಯ ಮುಖಂಡ ಅಕ್ಷಯ್ ರಜಪೂತ್‌ ರವರನ್ನು (ನಿನ್ನೆ) ಎ.25ರಂದು ರಾತ್ರಿ ಗಡಿಪಾರು ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿಯ ಸದಸ್ಯ ಅಕ್ಷಯ್ ರಜಪೂತ್‌ ರವರನ್ನು ತಡರಾತ್ರಿ ವೇಳೆ ಅವರ ಮನೆಯಲ್ಲಿ ಬಂಧಿಸಿ ಇದೀಗ ಅವರನ್ನು ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.

akshaya rajaputh

ಮುಂದೆ ಓದಿ..; ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

ಅಕ್ಷಯ್‌ ಗಡಿಪಾರನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಕಾಂಗ್ರೆಸ್ಸಿನ ಹಿಂದೂ ವಿರೋಧೀ ನೀತಿ ಎಂದು ಹೇಳಿದ್ದಾರೆ.

Continue Reading

LATEST NEWS

Trending