Connect with us

KADABA

ದೈವನರ್ತಕರ ವಿರುದ್ಧ ಅವಹೇಳನ-ಮಾಜಿ ಸಚಿವೆ ವಿರುದ್ಧ ಕಡಬದಲ್ಲಿ ದೂರು ದಾಖಲು

Published

on

ಕಡಬ: ಭೂತಾರಾಧನೆ ಹಾಗೂ ದೈವನರ್ತಕರ ವೃತ್ತಿ ಜೀವನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯ್ಕ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಣಿಯೂರು ಗ್ರಾ.ಪಂ.ಸದಸ್ಯ ಲೋಕಯ್ಯ ಪರವ ದೋಳ್ಪಾಡಿ ಕಡಬ ಪೋಲಿಸ್ ಠಾಣಾಧಿಕಾರಿಯವರ ಮುಖಾಂತರ ಜಿಲ್ಲಾ ಪೋಲಿಸ್ ಅಧೀಕ್ಷಕರಿಗೆ ದೂರು ನೀಡಿದ್ದಾರೆ.


ದೂರಿನಲ್ಲಿ ‘ಪರವ ಸಮುದಾಯಕ್ಕೆ ಸೇರಿದ ನಾನು 23 ವರ್ಷಗಳಿಂದ ದೈವನರ್ತಕನಾಗಿ ಶ್ರದ್ಧಾ ಭಕ್ತಿಯಿಂದ ನಮ್ಮ ಸೇವೆಯನ್ನು ಮಾಡುತ್ತಾ ಬರುತ್ತಿದ್ದೇನೆ.

ಇತ್ತೀಚಿಗೆ ತುಳುನಾಡಿನ ಸಂಸ್ಕೃತಿ ಭೂತಾರಾಧನೆ ಬಗ್ಗೆ ಮಾಜಿ ಸಚಿವೆ ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ದೈವ ನರ್ತಕರಿಗೆ ಸರಕಾರ ಎರಡು ಸಾವಿರ ರೂಪಾಯಿ ನೀಡಬಾರದಿತ್ತು.

ಭೂತಾರಾದನೆ ಸಮಯದಲ್ಲಿ ದೇವರು ಬರೋದು ಸತ್ಯ ಅಲ್ಲವೇ ಅಲ್ಲ. ದೈವ ನರ್ತಕರ ಜೀವನಕ್ಕೆ ಬೇರೆ ದಾರಿ ತೋರಿಸಬೇಕು. ಅದರ ಬದಲಾಗಿ ಸರಕಾರ ಮೂಕನಾಯಕರಿಗೆ ಪ್ರಾಮುಖ್ಯತೆ ನೀಡಿದಂತಾಗಿದೆ.

ದೈವ ನರ್ತಕರು ಓಹೋ ಎಂದು ಚೀರಾಡುವುದು ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯಿಂದ ನಮ್ಮ ದೈವನರ್ತಕರ ಸಮುದಾಯವನ್ನು ತುಳಿಯುವ ಸಂಚನ್ನು ರೂಪಿಸಿದ್ದಾರೆ. ಹಾಗೂ ಇನ್ನು ಮುಂದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮ್ಮ ಸಮುದಾಯವನ್ನು ಕೀಳಾಗಿ ಮಾತನಾಡುವ ಇಂಥವರನ್ನು ಹಾಗೂ ಇನ್ನು ಮುಂದಕ್ಕೆ ಸಮಾರಂಭದಲ್ಲಿ ಭಾಗವಹಿಸುವ ಬಗ್ಗೆ ನಮ್ಮ ಸಮುದಾಯದವರಿಂದ ಬಹಿಷ್ಠಾರ ಇರುತ್ತದೆ’ ಎಂದು ಉಲ್ಲೇಖಿಸಿದ್ದಾರೆ.

ವಿವಾದಾತ್ಮಕ ಹೇಳಿಕೆ ನೀಡಿರುವ ಬಿ.ಟಿ ಲಲಿತಾ ನಾಯ್ಕ್ ವಿರುದ್ಧ ಪೋಲಿಸ್ ಠಾಣೆಗೆ ನೀಡಿದ್ದಾರೆ.

DAKSHINA KANNADA

ಬೀದಿ ನಾಯಿಯನ್ನು ರಕ್ಷಿಸಲು ಹೋಗಿ ಉರುಳಿ ಬಿದ್ದ ಆಟೋ..!! ಚಾಲಕ ಗಂಭೀರ

Published

on

ಕಡಬ: ನಾಯಿ ಒಂದು ಸಡನ್ ಆಗಿ ರಸ್ತೆಗೆ ಅಡ್ಡ ಬಂದ ಕಾರಣ ಅದೇ ರಸ್ತೆಯಲ್ಲಿ ಬರುತ್ತಿದ್ದ ಅಟೋ, ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಅಟೋ ಉರುಳಿ ಬಿದ್ದ ಕಾರಣ ಅಟೋ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಅಲಂಕಾರು ಗ್ರಾಮದ ಸುರುಳಿ ಎಂಬಲ್ಲಿ ಈ ಅಪಘಾತ ನಡೆದಿದ್ದು, ಅಟೋ ಚಾಲಕ ಸುಬ್ರಹ್ಮಣ್ಯ ನಾಯ್ಕ ಎಂಬವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುಬ್ರಹ್ಮಣ್ಯ ನಾಯ್ಕ ಅವರು ಅಟೋ ಚಲಾಯಿಸಿಕೊಂಡು ಆಲಂಗಾರು ಕಡೆ ಬರುತ್ತಿದ್ದಾಗ ಇಕ್ಕಟ್ಟಾದ ರಸ್ತೆಯಲ್ಲಿ ನಾಯಿ ಒಂದು ಧಿಡೀರ್ ಆಗಿ ರಸ್ತೆಗೆ ಎಂಟ್ರಿ ಕೊಟ್ಟಿದೆ. ಈ ವೇಳೆ ನಾಯಿಯನ್ನು ರಕ್ಷಿಸಲು ತಕ್ಷಣ ಅಟೋದ ಬ್ರೇಕ್‌ ಹಿಡಿದಾಗ ಅಟೋ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಅಟೋದಲ್ಲಿ ಯಾವುದೇ ಪ್ರಯಾಣಿಕರು ಇಲ್ಲದ ಕಾರಣ ದೊಡ್ಡ ಅನಾಹುತ ನಡೆದಿಲ್ಲ. ಚಾಲಕ ಸುಬ್ರಹ್ಮಣ್ಯ ನಾಯ್ಕ ಅವರು ಕಾಲು ಮುರಿತಕ್ಕೆ ಒಳಗಾಗಿದ್ದಲ್ಲದೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಪುತ್ತೂರು ಆಸ್ಪತ್ರೆಗೆ ರವಾನಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Continue Reading

DAKSHINA KANNADA

ಕಡಬ ತಾಲೂಕು ಪಂಚಾಯತ್ ಕಚೇರಿಗೆ ಲೋಕಾಯುಕ್ತ ದಾಳಿ!

Published

on

ಕಡಬ : ಕೊಡಗು ಜಿಲ್ಲೆಯ ಲೋಕಾಯುಕ್ತ ಪೊಲೀಸರು ಕಡಬದಲ್ಲಿ ದಾಳಿ ನಡೆಸಿ ಆಶ್ಚರ್ಯ ಮೂಡಿಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಬಿ.ವಿ ಜಯಣ್ಣ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ. ಕಡಬ ತಾಲೂಕು ಪಂಚಾಯತ್ ಇಒ ಆಗಿ ಜಯಣ್ಣ ಇತ್ತೀಚೆಗಷ್ಟೇ ಅಧಿಕಾರ ವಹಿಸಿಕೊಂಡಿದ್ದರು.

ಇದಕ್ಕೂ ಮೊದಲು ಸೋಮವಾರ ಪೇಟೆ ತಾಲೂಕ ಪಂಚಾಯತ್ ನಲ್ಲಿ ಅವರು ಇಒ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅಲ್ಲಿರುವಾಗಲೇ ಇವರ ವಿರುದ್ಧ ಅಕ್ರಮ ಆಸ್ತಿಗಳಿಕೆಯ ದೂರು ದಾಖಲಾಗಿದ್ದು, ಆ ವಿಚಾರದ ತನಿಖೆಗೆ ಇಂದು ಕಡಬದಲ್ಲಿ ವಿಚಾರಣೆ ನಡೆಸಿದ್ದಾರೆ.
ಸೋಮವಾರಪೇಟೆಯ ಮನೆ, ಕಡಬದ ಕಚೇರಿ ಹಾಗೂ ಕಡಬದಲ್ಲೇ ಇರುವ ಜಯಣ್ಣ ಅವರ ಬಾಡಿಗೆ ಮನೆ ಮೇಲೆ ಏಕ ಕಾಲಕ್ಕೆ ದಾಳಿ ಮಾಡಲಾಗಿದೆ.

ಕೊಡಗು ಲೋಕಾಯುಕ್ತ ಡಿವೈಎಸ್ಪಿ ಪವನ್ ಕುಮಾರ್, ಇನ್ಸ್ ಪೆಕ್ಟರ್ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇನ್ಸ್ ಪೆಕ್ಟರ್ ಶಶಿಕುಮಾರ್ ಹಾಗೂ ಸಿಬ್ಬಂದಿ ಜಯಣ್ಣ ಅವರ ವಿಚಾರಣೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

KADABA : ಆ್ಯಸಿಡ್ ದಾಳಿ ಪ್ರಕರಣ; ಸಹಕರಿಸಿದ ಇಬ್ಬರು ವಶಕ್ಕೆ

Published

on

ಕಡಬ : ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣದಲ್ಲಿ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳದಲ್ಲಿ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ಕಡಬಕ್ಕೆ ಕರೆತಂದಿದ್ದಾರೆ.

ಮಾರ್ಚ್ 5 ರಂದು ಕಡಬದ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಮೇಲೆ ಕೇರಳ ಮೂಲದ ಅಬೀನ್  ಎಂಬ ಎಂಬಿಎ ವಿದ್ಯಾರ್ಥಿ ಆಸಿಡ್ ಎರಚಿ ಬಂಧಿತನಾಗಿದ್ದ. ಆರೋಪಿಗೆ ಅಸಿಡ್ ಎಲ್ಲಿಂದ ಸಿಕ್ಕಿತು ಅನ್ನೋ ವಿಚಾರವಾಗಿ ತನಿಖೆ ನಡೆಸಿದ ಪೊಲೀಸರು ಕೇರಳದ ಎರ್ನಾಕುಲಂ ಹಾಗೂ ತಮಿಳುನಾಡಿನ ಕೊಯಮತ್ತೂರಿನಲ್ಲಿ ಕಾರ್ಯಾಚರಣೆ ನಡೆಸಿದ್ದರು.

ಪೊಲೀಸರು ವಶಕ್ಕೆ ಪಡೆದಿರುವವರಲ್ಲಿ ಒಬ್ಬಾತ ಆ್ಯಸಿಡ್ ಪೂರೈಕೆ ಮಾಡಿದ್ದರೆ, ಮತ್ತೋರ್ವ ವ್ಯಕ್ತಿ ಆರೋಪಿಗೆ ಸಮವಸ್ತ್ರ ಹೊಲಿದು ಕೊಟ್ಟಿದ್ದಾನೆ ಎನ್ನಲಾಗಿದೆ. ಇಬ್ಬರನ್ನೂ ಕಡಬಕ್ಕೆ ಕರೆ ತರಲಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Continue Reading

LATEST NEWS

Trending