Connect with us

  DAKSHINA KANNADA

  ಜಿಲ್ಲೆಯಲ್ಲಿ ಬೇಲಿಯೇ ಎದ್ದು ಹೊಲ ಮೇಯುತ್ತಿದೆ: ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಮೌನ

  Published

  on

  ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಕೋರೋನಾ ಆರ್ಭಟ ಹೆಚ್ಚಾಗುತ್ತಿದೆ. ರಾಜ್ಯದಲ್ಲಿಯೇ ಅತೀ ಹೆಚ್ಚಿ ಪಾಸಿಟಿವಿಟಿ ರೇಟ್‌ ಇರುವ ಜಿಲ್ಲೆ ದಕ್ಷಿಣ ಕನ್ನಡ. ಈಗ ಶೇಕಡಾ 2.63 ರಷ್ಟು ಪಾಸಿಟಿವಿಟಿ ಪ್ರಮಾಣವಿದ್ದು, ಈ ಮಧ್ಯೆ ಜಿಲ್ಲೆಯಲ್ಲಿ ರಾಜಕೀಯ ಸಮಾವೇಶ, ಪ್ರತಿಭಟನೆ, ಜಾಥಾ ನಡೆಯುತ್ತಿದ್ದು, ಪೊಲೀಸ್‌ ಇಲಾಖೆ ಹಾಗೂ ಜಿಲ್ಲಾಡಳಿ ಕೈಕಟ್ಟಿ, ಬಾಯಿಮುಚ್ಚಿ ಕುಳಿತಿದೆ.


  ನಿನ್ನೆ ದ.ಕ ಜಿಲ್ಲೆಯಲ್ಲಿ 268 ಪಾಸಿಟಿವ್‌, 3 ಸಾವು ಸಂಭವಿಸಿದೆ. ಇದರ ಜೊತೆಗೆ ಕೊರೋನಾ ನಿಯಂತ್ರಿಸಲು ಜಿಲ್ಲೆಯಲ್ಲಿ ವೀಕೆಂಡ್‌ ಕರ್ಫ್ಯೂ ವಿಧಿಸಲಾಗಿದೆ.

  ಇದರ ಜೊತೆಗೆ ಮದುವೆ, ಸಭೆ, ಸಮಾರಂಭಗಳಿಗೆ ನಿಯಮಿತ ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ.


  ನಗರದಲ್ಲಿ ಮಾಸ್ಕ್‌ ಧರಿಸದಿದ್ದರೆ ದಂಡ, ಮುದುವೆಗೆ 100 ಜನರಿಗಿಂತ ಮೀರಿದರೆ ಕೇಸ್‌ ಜೊತೆ ದಂಡ, ವೈಯುಕ್ತಿಕ ಸಭೆ- ಸಮಾರಂಭದಲ್ಲಿ ಕೊರೋನಾ ಮಾರ್ಗಸೂಚಿ ಪಾಲಿಸದವರ ಮೇಲೆ ಕೇಸ್‌, ದಂಡ ವಿಧಿಸಲಾಗುತ್ತದೆ.

  ಆದರೆ ರಾಜಕೀಯ ಸಭೆ ಸಮಾರಂಭಕ್ಕೆ ಯಾವುದೇ ಮಾರ್ಗಸೂಚಿ ಇಲ್ಲ. ರಾಜಕೀಯ ಸಭೆ, ಸಮಾರಂಭ, ಪ್ರತಿಭಟನೆಗಳಿಗೆ ಮಾತ್ರ ಜಿಲ್ಲಾಡಳಿತ, ಅನುಮತಿ ನೀಡುತ್ತಿದೆ. ದೇವಸ್ಥಾನಗಳಲ್ಲಿ ಸಾಮೂಹಿಕ ಪೂಜೆಗೆ ಅವಕಾಶವಿಲ್ಲ.

  ಶಾಲೆ ತೆರೆಯಲು ನೂರಾರು ಸಬೂಬು, ಅಲ್ಲೆಲ್ಲ ಕೊರೊನಾ ಬರಬಹುದು ಎಂದಾದರೆ ರಾಜಕೀಯ ಸಮಾವೇಶಗಳಲ್ಲಿ ಕೊರೋನಾ ಹರಡುವುದಿಲ್ಲವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದಾರೆ.

  ಅನುಮತಿ ನೀಡುತ್ತಿರುವ ಪೊಲೀಸ್‌ ಇಲಾಖೆ ಹಾಗೂ ಜಿಲ್ಲಾಡಳಿತ
  ರಾಜ್ಯಕ್ಕೆ ಹೋಲಿಸಿದರೆ ದ.ಕ ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವಿಟ ಪ್ರಮಾಣ ಜಾಸ್ತಿ ಇದೆ. ಇದರ ಮಧ್ಯೆ ಆಳುವ ಪಕ್ಷದ ಜನಾಶೀರ್ವಾದ ಯಾತ್ರೆ, ಸೋಮವಾರ ಹಾಗೂ ಮಂಗಳವಾರ ಪುತ್ತೂರಿನಲ್ಲಿ ನಡೆದ ಪ್ರತಿಭಟನೆ ನಡೆದಿದೆ.

  ಈ ಸಮಾರಂಭಕ್ಕೆ ಬರುವವರು ಎಲ್ಲಿಂದ ಬರುತ್ತಾರೋ ಗೊತ್ತಿಲ್ಲ, ಸಾಮಾಜಿಕ ಅಂತರ ಇಲ್ಲವೇ ಇಲ್ಲ, ಮಾಸ್ಕ್‌ ಮುಖಕ್ಕೆ ಬಿಟ್ಟು ಎಲ್ಲೆಲ್ಲೋ ಸಿಕ್ಕಿಸಿಕೊಳ್ಳುತ್ತಿದ್ದಾರೆ.

  ಇದಕ್ಕೆಲ್ಲಾ ಯಾರು ಅನುಮತಿ ನೀಡಿದ್ದಾರೆ. ಮುಖ್ಯವಾಗಿ ಪೊಲೀಸ್‌ ಇಲಾಖೆ ಅಥವಾ ಜಿಲ್ಲಾಡಳಿತ ಅನುಮತಿ ನೀಡಬೇಕು. ಅವರು ಅನುಮತಿ ಯಾವ ಆಧಾರದ ಮೇಲೆ ನೀಡಿದ್ದಾರೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ.

  ಜಿಲ್ಲೆಯ ಪೊಲೀಸ್‌ ಇಲಾಖೆ, ಜಿಲ್ಲಾಡಳಿತ ಉತ್ತಮ ಅಧಿಕಾರಿ ವರ್ಗ ಹೊಂದಿದೆ. ಆದರೂ ರಾಜಕಾರಣಿಗಳು ಆಡಿಸುವ ಬೊಂಬೆಯಂತೆ ಕಾರ್ಯ ನಿರ್ವಹಿಸುತ್ತಿರುವುದು ನಾಚೀಕೆಗೇಡು.

  ಆಳುವ ಪಕ್ಷಕ್ಕೆ ಬುದ್ಧಿವಾದ ಹೇಳಬೇಕಿರುವ ಪ್ರಧಾನ ಪ್ರತಿಪಕ್ಷ ಕಾಂಗ್ರೆಸ್‌ ಕೂಡ ಮೈಮರೆತು ರಾಜಕೀಯ ಸಭೆ ಸಮಾರಂಭ ನಡೆಸುತ್ತಿದೆ.

  ಮುಖ್ಯಮಂತ್ರಿಯಿಂದ ಉಗಿಸಿಕೊಂಡರೂ ಬುದ್ದಿ ಬಾರದ ಜಿಲ್ಲಾಡಳಿತ
  ಇತ್ತೀಚೆಗೆ ಮುಖ್ಯಮಂತ್ರಿ ಮಂಗಳೂರು ಭೇಟಿಯ ವೇಳೆ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

  ಜೊತೆಗೆ ಅಧಿಕಾರಿ ವರ್ಗವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೂ ಸಿಎಂ ಬೆನ್ನುಹಾಕಿದ ಕೂಡಲೇ ರಾಜಕೀಯ ಪಕ್ಷ, ಪ್ರತಿಭಟನೆಗೆ ಅನುಮತಿ ನೀಡುತ್ತಿದ್ದಾರೆ ಎಂದರೆ ಹಾಸ್ಯಾಸ್ಪದ ಅಲ್ಲವೇ? ಎಂಬುವುದು ಸಾರ್ವಜನಿಕರ ಪ್ರಶ್ನೆ

  DAKSHINA KANNADA

  ಕಪ್ಪೆಗಳ ಅಕ್ರಮ ಸಾಗಾಟ..! ಇಬ್ಬರನ್ನು ಬಂಧಿಸಿದ ಅರಣ್ಯ ಇಲಾಖೆ..!

  Published

  on

  ಮಂಗಳೂರು (ಕಾರವಾರ): ಬಸ್‌ನಲ್ಲಿ ಗೋವಾಕ್ಕೆ ಸಾಗಾಟ ಮಾಡುತ್ತಿದ್ದ 41 ಬುಲ್‌ ಫ್ರಾಗ್‌ಗಳನ್ನು ಕಾರವಾರದ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ. ಬುಲ್ ಫ್ರಾಗ್ ಸಾಗಾಟ ಮಾಡುತ್ತಿದ್ದ ಇಬ್ಬರು ಗೋವಾ ಮೂಲದ ವ್ಯಕ್ತಿಗಳನ್ನು ಬಂಧಿಸಿ ಬಸ್‌ ವಶಕ್ಕೆ ಪಡೆದುಕೊಂಡಿದ್ದಾರೆ. ಖಚಿತ ಮಾಹಿತಿ ಆಧಾರದಲ್ಲಿ ಈ ಕಾರ್ಯಾಚರಣೆ ನಡೆಸಿದ್ದು, ರಾಷ್ಟ್ರೀಯ ಹೆದ್ದಾರಿ 66ರ ಕಾಳಿ ಬ್ರಿಡ್ಜ್‌ ಬಳಿ ಕಪ್ಪೆಗಳ ರಕ್ಷಣೆ ಮಾಡಲಾಗಿದೆ. ಗೋವಾ ಮೂಲದ ಕಾಣಕೋಣ ನಿವಾಸಿ ಸಿದ್ದೇಶ್ ದೇಸಾಯಿ ಬಸ್ ಚಾಲಕನಾಗಿದ್ದು, ನಿರ್ವಾಹಕ ಜಾನ್‌ ಲೂಲಿಮ್‌ ಬಂಧಿತರು.

  ಕಪ್ಪೆ ಅಕ್ರಮ ಸಾಗಾಣಿಕೆ ಹಿಂದಿರುವ ರಹಸ್ಯ..!

  ಬುಲ್‌ ಫ್ರಾಗ್‌ಗಳು ಗೋವಾದಲ್ಲಿ ಜಂಪಿಂಗ್ ಚಿಕನ್ ಎಂದೇ ಪ್ರಸಿದ್ದಿಯನ್ನು ಪಡೆದುಕೊಂಡಿದೆ. ಇದರಿಂದ ತಯಾರಾಗುವ ಖಾದ್ಯಕ್ಕೆ ಗೋವಾದಲ್ಲಿ ಹೆಚ್ಚಿನ ಬೇಡಿಕೆ ಇದೆ. ಕಪ್ಪೆಗಳ ಕಾಲುಗಳನ್ನು ಕಡಿದು ಮಾಡುವ ಫ್ರೈ ಹಾಗೂ ಕಪ್ಪೆಗಳ ಚರ್ಮ ತೆಗೆದು ಮಾಡುವ ಫ್ರೈಗೆ ಇಲ್ಲಿ ಜಂಪಿಂಗ್ ಚಿಕನ್ ಎಂದು ಹೆಸರಿದೆ. ಗೋವಾದ ಜನರು ಹಾಗೂ ವಿದೇಶಿಗರು ಈ ಜಂಪಿಂಗ್ ಚಿಕನ್ ಗಿರಾಕಿಗಳಾಗಿದ್ದು, ಒಂದು ಪ್ಲೇಟ್‌ಗೆ 1500 ರೂಪಾಯಿಗೆ ಮಾರಾಟವಾಗುತ್ತದೆ. ಗೋವಾದಲ್ಲಿ ಈ ಕಪ್ಪೆಗಳು ಸಿಗದ ಕಾರಣ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಿಂದ ಅಕ್ರಮ ರವಾನೆಯಾಗುತ್ತಿದೆ. ಕಾರಾವಾರ, ಅಂಕೋಲ ಸೇರಿದಂತೆ ಹಲವು ಜಾಗದಿಂದ ಈ ಕಪ್ಪೆಗಳ ಕಳ್ಳಸಾಗಾಣಿಕೆ ನಡೆಯುತ್ತಿದೆ. ಒಂದು ಕಪ್ಪೆಗೆ 500 ರೂಪಾಯಿಗಳ ಬೆಲೆ ಇದ್ದು, ಜೀವಂತವಾಗಿ ಈ ಕಪ್ಪೆಗಳ ಸಾಗಾಟ ಮಾಡಲಾಗುತ್ತದೆ.

  Continue Reading

  DAKSHINA KANNADA

  ಕೋಲ್ನಾಡು ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ : ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

  Published

  on

  ಮಂಗಳೂರು : ಕೋಲ್ನಾಡು ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಮಂಗಳವಾರ(ಜೂ.18) ಕೆಎಸ್ ರಾವ್ ನಗರದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಲಾಯಿತು.


  ಈ ಸಂದರ್ಭ ಸರ್ವೋತ್ತಮ ಅಂಚನ್, ಜಯಕೃಷ್ಣ ಕೋಟ್ಯಾನ್ ಹಳೆಯಂಗಡಿ, ಹಿಂದುಸ್ತಾನ್ ಪೆಟ್ರೋಲಿಯಂನ ರವಿ ಎಸ್ ಶೆಟ್ಟಿ, ಶಾಲೆಯ ಮುಖ್ಯೋಪಾಧ್ಯಾಯ ದಿನೇಶ್ ಕೆ, ಹಾಗೂ ಆಟೋರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

  ಇದನ್ನೂ ಓದಿ : ಯುವಕನ ಜೊತೆ ಓಡಿಹೋದ ತಾಯಿ..! ಅಮ್ಮಾ ಬಾರಮ್ಮ..ಎಂದು ಮಕ್ಕಳು ಅಂಗಲಾಚಿದ್ರೂ ಕ್ಯಾರೇ ಅನ್ನದ ತಾಯಿ..!!

  Continue Reading

  DAKSHINA KANNADA

  ಚಿಕ್ಕಮೇಳದ ಹೆಸರಿನಲ್ಲಿ ಯಕ್ಷಗಾನ ಕಲೆಗೆ ಅಪಚಾರ ಮಾಡದಿರಿ; ಒಕ್ಕೂಟ ಮನವಿ

  Published

  on

  ಮಂಗಳೂರು: ಇಂದು ದೇಶ, ವಿದೇಶಗಳಲ್ಲಿ ಯಕ್ಷಗಾನದ ಹಿರಿಮೆ ಸಾರಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಲೆಯ ಹೆಸರಿನಲ್ಲಿ ಕಲೆಯ ಗಂಧಗಾಳಿ ಇಲ್ಲದವರು ಕೂಡಾ ಯಕ್ಷ ಕಲೆಯನ್ನು ವಿರೂಪಗೊಳಿಸುತ್ತಿವುದು ವಿಷಾದನೀಯ ಸಂಗತಿ. ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ತಿರುಗಾಟದ ಇಲ್ಲದ ಸಂದರ್ಭದಲ್ಲಿ ಮನೆ ಮನೆಗೆ ಚಿಕ್ಕ ಮೇಳಗಳು ಹೊರಡುತ್ತವೆ. ಆದರೆ ಯಕ್ಷಗಾನದ ಬಾಲಪಾಠವೂ ಆಗದವರಿಂದ ಚಿಕ್ಕ ಮೇಳ ಎಂದು ಹೆಸರಿಟ್ಟುಕೊಂಡು ಅದೊಂದು ದಂಧೆಯಾಗಿ ವ್ಯಾಪಕವಾಗಿರುವುದು ನೋವಿನ ಸಂಗತಿ ಎಂದು ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಮಿತಿ ದೂರಿದೆ.

  ಸಂಪ್ರದಾಯಕ್ಕೆ ಬದ್ಧವಾಗಿ, ಶಿಸ್ತುಬದ್ಧವಾಗಿ ಯಕ್ಷಗಾನ ಮಾಡಲು ಕಲಾವಿದರಲ್ಲಿ ಒಟ್ಟು ಮಾಡಿಕೊಂಡು ತೆಂಕುತಿಟ್ಟು ಚಿಕ್ಕಮೇಳ ಹೆಸರಿನಲ್ಲಿ ತಿರುಗಾಟವನ್ನು ಆರಂಭಿಸಲಾಗಿದೆ. ಒಕ್ಕೂಟದ ಪರವಾನಿಗೆ ಇದ್ದವರಿಗೆ ಮಾತ್ರ ಮನೆಯಲ್ಲಿ ಆಟವಾಡಿಸಲು ಜನತೆ ಅನುವು ಮಾಡಿಕೊಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ ಹೇಳಿದ್ದಾರೆ.

  ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು ನಿಜವಾದ ಕಲಾವಿದರಿಗೆ ಅನ್ಯಾಯವಾಗಬಾರದು ಎನ್ನುವ ನಿಟ್ಟಿನಲ್ಲಿ ಒಕ್ಕೂಟವನ್ನು ರಚನೆ ಮಾಡಲಾಗಿದೆ. ಒಕ್ಕೂಟದ ಅಧಿಕೃತ ಪರವಾಣಿಗೆ ಪಡೆದು ತಿರುಗಾಟ ಮಾಡುವವರು ಸಂಜೆ 6ರಿಂದ ರಾತ್ರಿ 10.30ರವರೆಗೆ ಕನ್ನಡ ಇಲ್ಲವೇ ತುಳುಭಾಷೆಗಳ ಗರಿಷ್ಠ 20 ನಿಮಿಷಗಳ ಸಂದೇಶ ಇರುವ ಸನ್ನಿವೇಶದ ಪ್ರದರ್ಶನ ಮಾಡಲಿರುವರು ಎಂದರು.

  ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ರಮೇಶ ಕುಲಶೇಖರ, ಕುಮಾರ್ ಮಾಲೆಮಾರ್‌, ದಿವಾಕರ ದಾಸ್, ಕಡಬ ದಿನೇಶ ರೈ ಮೊದಲಾದವರಿದ್ದರು.

  Continue Reading

  LATEST NEWS

  Trending