Thursday, October 21, 2021

ಕೋಟ: ಮತಾಂತರ ಆರೋಪ- ಕೋಟಾ ಪೊಲೀಸ್ ಠಾಣೆ ಎದುರು ಹಿಂಜಾವೇ ಪ್ರತಿಭಟನೆ

ಕೋಟ: ಇಲ್ಲಿನ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಾರಿ – ಸರ್ಕಾರಿ ಯಲ್ಲಿ ಹಿಂದೂಗಳನ್ನು ಅನ್ಯಕೋಮಿಗೆ ಮತಾಂತರಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಹಾಗೂ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು – ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕೋಟಾ ಪೊಲೀಸ್ ಠಾಣೆ ಎದುರು ದಿಢೀರ್ ಪ್ರತಿಭಟನೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.


ಇಲ್ಲಿನ ಹಳ್ಳಾಡಿ ಸಮೀಪ ಹಿಂದೂ ಧರ್ಮದಿಂದ ಅನ್ಯಕೋಮಿಗೆ ಮತಾಂತರವಾದ ಕುಟುಂಬವೊಂದು ಸ್ಥಳೀಯ ಭೋವಿ ಸಮಾಜದವರನ್ನು ಗುರಿಯಾಗಿಸಿಕೊಂಡು ಆಮಿಷ ತೋರಿಸಿ ಹಲವಾರು ಮಂದಿಯನ್ನು ಮತಾಂತರಗೊಳಿಸಿದೆ ಎನ್ನಲಾಗಿದ್ದು,

ನಿನ್ನೆ ಕೂಡ ಇದೇ ರೀತಿ ಹಳ್ಳಾಡಿ-ಹರ್ಕಾಡಿಯ ಮನೆಯೊಂದಕ್ಕೆ ಹಲವರನ್ನು ಪ್ರಾರ್ಥನೆಗೆ ಆಹ್ವಾನಿಸಿದ್ದು, ವಿಷಯ ತಿಳಿದ ಜಾಗರಣ ವೇದಿಕೆ ಸದಸ್ಯರು ತತ್‌ಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು.

ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿ ಆರೇಳು ಮಂದಿಯನ್ನು ವಶಕ್ಕೆ ಪಡೆದರು.
ವಿಷಯ ತಿಳಿಯುತ್ತಿದ್ದಂತೆ ನೂರಾರು ಸಂಖ್ಯೆಯ ಕಾರ್ಯಕರ್ತರು ಠಾಣೆಯ ಆವರಣಕ್ಕೆ ಆಗಮಿಸಿ ಕೃತ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.

ಕೋಟ ಠಾಣಾಧಿಕಾರಿ ಸಂತೋಷ್ ಬಿ.ಪಿ.ಯವರು ಜಾಗರಣ ವೇದಿಕೆ ಮುಖಂಡರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಿದರು.

ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಜ್ಯೋತಿ, ಪ್ರಕಾಶ್, ಮನೋಹರ್, ರವಿ ಎನ್ನುವವರ ವಿರುದ್ಧ ಸ್ಥಳೀಯರು ದೂರು ದಾಖಲಿಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...