Saturday, November 26, 2022

ಕುಕ್ಕರ್ ಬಾಂಬ್ ಸ್ಪೋಟ : ಸಂತ್ರಸ್ತ ಆಟೋ ಚಾಲಕನಿಗೆ 50ಸಾವಿರ ರೂ.ನೆರವು ನೀಡಿದ ಗೃಹ ಸಚಿವರು..!

ಮಂಗಳೂರು ಕಪಿತಾನಿಯೋ ಬಳಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್‌ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲಕನಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ 50 ಸಾವಿರ ರೂಪಾಯಿಗಳ ಸಹಾಯಧನವನ್ನು ನೀಡಿದ್ದಾರೆ.

ಮಂಗಳೂರು : ಮಂಗಳೂರು ಕಪಿತಾನಿಯೋ ಬಳಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್‌ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲಕನಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ 50 ಸಾವಿರ ರೂಪಾಯಿಗಳ ಸಹಾಯಧನವನ್ನು ನೀಡಿದ್ದಾರೆ.

ಸ್ಪೋಟ ಸಂಭವಿಸಿದ್ದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹ ಸಚಿವರು ಬಳಿಕ ಆಸ್ಪತ್ರೆಗೆ ತೆರಳಿ ಗಾಯಗೊಂಡಿರುವ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರ ಯೋಗಕ್ಷೇಮ ವಿಚಾರಿಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸುವ ಭರವಸೆ ನೀಡಿದರು.

ಇದೇ ಸಂದರ್ಭ ಅವರು ಪುರುಷೋತ್ತಮ ಅವರ ಕುಟುಂಬಕ್ಕೆ ವೈಯಕ್ತಿಕ ನೆಲೆಯಲ್ಲಿ ರೂ. 50 ಸಾವಿರ ನೆರವು ಸಚಿವರು ಹಸ್ತಾಂತರಿಸಿದರು.

ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ, ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು ಬಲ್ಮಠ ರಸ್ತೆಯಲ್ಲಿ ಕಾರ್ ಬೆಂಕಿಗಾಹುತಿ..!

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.ಕಾರಿನ ಇಂಜಿನ್...

ಬೆಳ್ತಂಗಡಿಯಲ್ಲಿ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ..! 2 ದಿನದಲ್ಲಿ ಇಬ್ಬರು ಬಲಿ..!

ಬೆಳ್ತಂಗಡಿ:  ಬೆಳ್ತಂಗಡಿಯಲ್ಲಿ 2 ದಿನದಲ್ಲಿ ಒಂದೇ ಕಾಲೇಜಿನ  ಇಬ್ಬರು ವಿದ್ಯಾರ್ಥಿಗಳು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಜೀವಕಳಕೊಂಡಿದ್ದಾರೆ. ಎಳೆ ವಯಸ್ಸಿನ ಮಕ್ಕಳಿಗೆ ದ್ವಿಚಕ್ರವಾಹನಗಳನ್ನು ಕೊಡುವ ಪೋಷಕರಿಗೆ ಎಚ್ಚರಿಕೆಯ ಕರೆ ಗಂಟೆಯಾಗಿದೆ.  ಮಡಂತ್ಯಾರು ಸೆಕ್ರೆಡ್ ಹಾರ್ಟ್...