Sunday, November 27, 2022

ಮಂಗಳೂರಿನ ಆಟೋದಲ್ಲಿ ಸ್ಪೋಟಗೊಂಡಿರುವುದು ‘ಕುಕ್ಕರ್ ಬಾಂಬ್’..!

ಮಂಗಳೂರಿನ ಗರೋಡಿಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಆಟೋ ಬಾಂಬ್ ಬ್ಲಾಸ್ಟ್ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ, ಸ್ಪೋಟಗೊಂಡಿರುವುದು ‘ಕುಕ್ಕರ್ ಬಾಂಬ್ ‘ ಎಂದು ಪ್ರಾರ್ಥಮಿಕ ತನಿಖೆಯಿಂದ ಸ್ಪಷ್ಟವಾಗಿದೆ. 

ಮಂಗಳೂರು: ಮಂಗಳೂರಿನ ಗರೋಡಿಯಲ್ಲಿ ನಿನ್ನೆ ಸಂಜೆ ಸಂಭವಿಸಿದ ಆಟೋ ಬಾಂಬ್ ಬ್ಲಾಸ್ಟ್ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದೆ, ಸ್ಪೋಟಗೊಂಡಿರುವುದು ‘ಕುಕ್ಕರ್ ಬಾಂಬ್ ‘ ಎಂದು ಪ್ರಾರ್ಥಮಿಕ ತನಿಖೆಯಿಂದ ಸ್ಪಷ್ಟವಾಗಿದೆ.

ಬಾಂಬ್ ಸ್ಕ್ವಾಡ್, ಶ್ವಾನದಳ ಆಗಮಿಸಿ ತನಿಖೆ ನಡೆಸಿದ್ದು, ಎನ್‌ಐಎ, ಕೇಂದ್ರ ಗುಪ್ತಚರ ಇಲಾಖೆಯ ಹಿರಿಯ ಅಧಿಕಾರಿಗಳು ಆಗಮಿಸಿ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದೊಂದು ವಿದ್ವಾಂಸಕ ಕೃತ್ಯ ಎಂದು ಈಗಾಗಲೇ ಸಾಬೀತಾಗಿದ್ದು ನಗರದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

ಈ ಪ್ರಕರಣ ಭೇದಿಸಲು ಉನ್ನತ ಅಧಿಕಾರಿಗಳನ್ನೊಳಗೊಂಡ ಮೂರು ತಂಡಗಳ ರಚನೆ ಮಾಡಲಾಗಿದೆ.

ಆಟೋದಲ್ಲಿ ಸ್ಪೋಟಗೊಂಡಿದ್ದು ಕುಕ್ಕರ್ ಬಾಂಬ್ ಎಂಬುವುದು ಸ್ಪಷ್ಟವಾಗಿದ್ದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಎನ್ನಲಾದ ವ್ಯಕ್ತಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿತ್ತು.

ಆಟೋದಲ್ಲಿದ್ದ ಪ್ರಯಾಣಿಕ ಹಿಂದಿ ಭಾಷೆ ಮಾತನಾಡುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಪ್ರೇಮ್ ರಾಜ್ ಕನೋಗಿ ಎಂಬ ಹೆಸರಿ‌ನ ಐಡಿ ದಾಖಲೆ ಪತ್ತೆಯಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಲ್ಪಸ್ವಲ್ಪ ಗಾಯಗಳಾಗಿದ್ದ ಆಟೋ ಚಾಲಕನೂ ಪೊಲೀಸರಲ್ಲಿ ಗೊಂದಲದ ಹೇಳಿಕೆ ನೀಡಿದ್ದು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ.

ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಆ ವ್ಯಕ್ತಿಯನ್ನು ಹತ್ತಿಸಿಕೊಂಡು ಬಂದಿದ್ದಾಗಿ ಆಟೋ ಚಾಲಕ  ಹೇಳಿಕೆ ನೀಡಿದ್ದಾನೆ, ಆದ್ದರಿಂದ ಈ ಸ್ಪೋಟಕ ರೈಲಿನಲ್ಲಿ ತಂದಿರಬಹುದಾದ ಶಂಕೆ ವ್ಯಕ್ತವಾಗಿದೆ.

ಸ್ಫೋಟದ ತೀವ್ರತೆಗೆ ಪ್ರಯಾಣಿಕನ ದೇಹದ ಅರ್ಧ ಭಾಗ ಸುಟ್ಟು ಹೋಗಿದೆ. ಆತ ಸದ್ಯ ಗಂಭೀರ ಸ್ಥಿತಿಯಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಸ್ಫೋಟದ ತೀವ್ರತೆಗೆ ಗರೋಡಿ ಪ್ರದೇಶದಲ್ಲಿ ದಟ್ಟ ಹೊಗೆ ಹಬ್ಬಿದ್ದು ಈ ಸಂದರ್ಭ ಆತಂಕ ಸೃಷ್ಟಿಯಾಗಿತ್ತು.

ಆಟೋದಲ್ಲಿ ಬ್ಲಾಸ್ಟ್ ಆದ ಕುಕ್ಕರ್, ಅದರಲ್ಲಿ ಕೆಲವು ಜೋಡಿಸಿದ ತಂತಿಗಳು, ಒಂದು 9 ವೋಲ್ಟ್ ಬ್ಯಾಟರಿ ಮತ್ತಿತರ ಪದಾರ್ಥಗಳನ್ನು ಪ್ರತ್ಯಕ್ಷದರ್ಶಿಗಳು ಗಮನಿಸಿದ್ದಾರೆ.  ಎಂದು ಘಟನೆಯ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಬೆಳ್ಮ ಬೋಲ್ದನ್‌ ಕುಟುಂಬಿಕರ ನಿವಾಸದಲ್ಲಿ ಕೋಲೋತ್ಸವ

ಮಂಗಳೂರು: ಮಂಗಳೂರು ನಗರ ಹೊರವಲಯದ ದೇರಳಕಟ್ಟೆ ಅಡ್ಕರಮಜಲು ಬೆಳ್ಮದ ಬೋಲ್ದನ್‌ ಕುಟುಂಬಿಕರ ತರವಾಡಿನ ಮನೆಯಲ್ಲಿ ಪಂಜುರ್ಲಿ, ಕಲ್ಲುರ್ಟಿ , ಗುಳಿಗ ದೈವಗಳ ನರ್ತನ ಸೇವೆ ವೈಭವದಿಂದ ಜರುಗಿತು.ನವೆಂಬರ್‌ 24ರಂದು ಬೆಳಿಗ್ಗೆ ತರವಾಡು ಮನೆಯಲ್ಲಿ...

ಉಡುಪಿ: ಹೊಟೇಲ್‌ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ….

ಉಡುಪಿ: ಹೊಟೇಲ್‌ವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕದಳದ ಸಿಬ್ಬಂದಿ ಸಕಾಲಿಕ ಕಾರ್ಯಾಚರಣೆಯಿಂದ ಸಂಭಾವ್ಯ ಅವಘಡವೊಂದು ತಪ್ಪಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.ಇಲ್ಲಿನ ಸಿಟಿ ಬಸ್ ನಿಲ್ದಾಣ ಸಮಿಪದಲ್ಲಿರುವ ಟಾಪ್ ಟೌನ್...

ಮಂಗಳೂರಿನಲ್ಲಿ ಹಣದ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ-ಖ್ಯಾತ ವೈದ್ಯೆ ಸಹಿತ ಮೂವರ ವಿರುದ್ಧ ಸಂತ್ರಸ್ತ ಯುವತಿಯಿಂದಲೇ ದೂರು ದಾಖಲು

ಮಂಗಳೂರು: ಮುಸ್ಲಿಂ ಯುವಕನೊಬ್ಬ ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.ಆಕೆ ನೀಡಿರುವ ದೂರಿನಲ್ಲಿ 'ಮಂಗಳೂರಿನ ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ...