ಮಂಗಳೂರು : ಡ್ರೈನೇಜ್ ನೀರಿನ ಸಮಸ್ಯೆಯಿಂದಾಗಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯುಂಟಾಗಿದ್ದನ್ನು ಗಮನಿಸಿದ ಸ್ಥಳೀಯ ಪಾಲಿಕೆ ಸದಸ್ಯೆಯ ಪತಿ ತಾವೇ ಚರಂಡಿಗಿಳಿದು ಕೊಳಚೆ ಮಣ್ಣು ತೆಗೆದು ಸಮಸ್ಯೆ ಬಗೆ ಹರಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಪಚ್ಚನಾಡಿ ಸಂತೋಷ್ ನಗರ ದ ಚರಂಡಿಯಲ್ಲಿ ಕೊಳಚೆ ನೀರು ಸರಿಯಾಗಿ ಹರಿಯದೇ ಬ್ಲಾಕ್ ಆಗಿ ಸ್ಥಳೀಯ ಜನರಿಗೆ ಸಮಸ್ಯೆ ಉಂಟಾಗಿತ್ತು. ಅಲ್ಲದೆ ಕೊಳಚೆ ನೀರು ನಿಂತಿದ್ದರಿಂದ ಜನರು ಕುಡಿಯಲು ಬಳಸುವ ಬಾವಿ ನೀರು ಹಾಳಾಗಿ ಕುಡಿಯದಂತಾಗಿತ್ತು. ಈ ಹಿನ್ನಲೆ ವಾರ್ಡ್ ನ ಜನರು ಈ ಸಮಸ್ಯೆಯನ್ನು ಸ್ಥಳೀಯ ಕಾರ್ಪೋರೇಟರ್ ಸಂಗೀತಾ ಆರ್ ನಾಯಕ್ ಅವರ ಗಮನಕ್ಕೆ ತಂದಿದ್ದರು.
ಈ ಹಿನ್ನಲೆ ಸಮಸ್ಯೆ ಬಗೆಹರಿಸುವ ಕಾರ್ಪೋರೇಟರ್ ತಾವೇ ಖುದ್ದು ನಿಂತು ಕೆಲಸ ಮಾಡಿಸಿದ್ದಾರೆ. ಈ ಸಂದರ್ಭ ಕಾಪೋ್ರೇಟರ್ ಪತಿ ರವೀಂದ್ರ ನಾಯಕ್, ಸ್ಥಳೀಯರಾದ ಗಣೇಶ್ ಕುಲಾಲ್ ಹಾಗೂ ಮೋನಪ್ಪ ಚೌಟ ಅವರು ಚರಂಡಿಗೆ ಇಳಿದು ಕೊಳಚೆ ಮಣ್ಣು ತೆಗೆದು ಸ್ವಚ್ಛಗೊಳಿಸುವ ಮೂಲಕ ಮಾದರಿ ಕಾರ್ಯ ಮಾಡಿದ್ದಾರೆ.
ಸಂಜಾತ ಅವರ ಮಾಲೀಕತ್ವದ ತವಕಲ್ ಎನ್ನುವ ಹೆಸರಿನ ಮೀನುಗಾರಿಕೆ ಬೋಟನ್ನು ಜ.4 ರಂದು ದುರಸ್ತಿಗೆಂದು ಮೀನುಗಾರರಾದ ರವಿ ಸಾಲ್ಯಾನ್ ಮತ್ತು ಹರೀಶ್ ಅವರು ಮಲ್ಪೆ ಬಂದರಿನಿಂದ ಗಂಗೊಳ್ಳಿಗೆ ಕೊಂಡೊಯ್ಯುತ್ತಿದ್ದರು.
ಗಂಗೊಳ್ಳಿ ಬಂದರಿನ ಅಳಿವೆಯಿಂದ ಸುಮಾರು 2 ನಾಟಿಕಲ್ ಮೈಲು ದೂರದಲ್ಲಿ ಚಲಿಸುತ್ತಿರುವಾಗ ಭಾರೀ ಗಾತ್ರದ ಮರದ ದಿಮ್ಮಿ ತೇಲಿ ಬಂದು ಬೋಟಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೋಟಿನ ಮುಂಭಾಗದ ತಳಬದಿಯಲ್ಲಿ ಹಾನಿಯಾಗಿ ನೀರು ಒಳ ಬರಲು ಪ್ರಾರಂಭಿಸಿತ್ತು.
ನೀರಿನ ಒಳ ಹರಿವು ಜಾಸ್ತಿಯಾಗಿ ಬೋಟು ಮುಳುಗುವ ಸಂದರ್ಭದಲ್ಲಿ ಮಾಹಿತಿ ಪಡೆದ ಮೀನುಗಾರರು ಜಲರಾಣಿ ಎಂಬ ಹೆಸರಿನ ಬೋಟ್ ರವಾನಿಸಿ ಇಬ್ಬರನ್ನೂ ಬಚಾವ್ ಮಾಡಿದ್ದಾರೆ.
ಮಂಗಳೂರು : ವಾಟ್ಸಾಪ್‌ನಲ್ಲಿ ಪರಿಚಯವಾದ ವ್ಯಕ್ತಿಗೆ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬ ಆಮಿಷವೊಡ್ಡಿ 10 ಲಕ್ಷ ರೂಪಾಯಿ ವಂಚಿಸಿದ್ದ ಪ್ರಕರಣವೊಂದರಲ್ಲಿ ಕೇರಳ ಮೂಲದ ಯುವಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಕೇರಳದ ತ್ರಿಶೂರ್‌ನ ಮಟ್ಟೂರು ನೂಲುವ್ಯಾಲಿಯ ಕೈಪುಝ ಹೌಸ್ ನಿವಾಸಿ ನಿಧಿನ್ ಕುಮಾರ್ ಕೆ.ಎಸ್ ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ಇದ್ದು, ಅವರಿಗಾಗಿ ಶೋಧ ನಡೆದಿದೆ.
ಈತ ಕಳೆದ ವರ್ಷ ಶೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗ ಬಹುದೆಂದು ನಂಬಿಸಿ ವ್ಯಕ್ತಿಯೊಬ್ಬರಿಂದ 10,32,000 ರೂಪಾಯಿಗಳನ್ನು ಹಂತಹಂತವಾಗಿ ಪಡೆದುಕೊಂಡಿದ್ದ. ಈ ಬಗ್ಗೆ ಮಂಗಳೂರಿನ ಸೆನ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೆತ್ತಿಕೊಂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿ ದೂರುದಾರರ ವಿವಿಧ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆಯಾದ ಬಗ್ಗೆ ಮತ್ತು ಅದು ಯಾರ ಖಾತೆಗೆ ಪಾವತಿಯಾಗಿದೆ ಎಂಬಿತ್ಯಾದಿ ವಿವರಗಳನ್ನು ಸಂಗ್ರಹಿಸಿ ಪೊಲೀಸರು ತನಿಖೆಯನ್ನು ನಡೆಸಿದ್ದರು. ಆರೋಪಿಯ ಬ್ಯಾಂಕ್ ಖಾತೆಗೆ 1 ಲಕ್ಷ ರೂಪಾಯಿ. ಬಂದಿದ್ದು, ಆತನ ಸ್ನೇಹಿತ ತಿಳಿಸಿದಂತೆ ವಿವಿಧ ಬ್ಯಾಂಕ್ ಖಾತೆಗಳಿಗೆ ಕಮಿಷನ್ ಪಡೆದುಕೊಂಡು ಹಣವನ್ನು ವರ್ಗಾವಣೆ ಮಾಡಿದ್ದಾಗಿ ತಿಳಿದು ಬಂದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಡಿಸಿಪಿಗಳಾದ ಸಿದ್ದಾರ್ಥ ಗೋಯಲ್, ರವಿಶಂಕರ್ ನಿರ್ದೇಶನದಂತೆ ಸೆನ್ ಎಸಿಪಿ ರವೀಶ್ ನಾಯಕ್, ಇನ್‌ಸ್ಪೆಕ್ಟರ್ ಸತೀಶ್ ಎಂ.ಪಿ ಹಾಗೂ ಎಸ್‌ಐ ಗುರಪ್ಪ ಕಾಂತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಉಪ್ಪಿನಂಗಡಿ: ಕಳೆದ ಸೋಮವಾರ ಉಪ್ಪಿನಂಗಡಿಯ ಬಸ್ ನಿಲ್ದಾಣದಲ್ಲಿ ಮಹಿಳೆಯೋರ್ವರ ಬ್ಯಾಗಿನಿಂದ 114 ಗ್ರಾಂ ತೂಕದ ಚಿನ್ನಾಭರಣದ ಬಾಕ್ಸ್ ಅನ್ನು ಎಗರಿಸಿದ್ದ ಪ್ರಕರಣವನ್ನು ಬೇಧಿಸಿರುವ ಉಪ್ಪಿನಂಗಡಿ ಪೊಲೀಸರು, ಬಂಟ್ವಾಳ ತಾಲೂಕು ಕೊಮಿನಡ್ಕ ನಿವಾಸಿ ನಸೀಮಾ (31) ಎಂಬಾಕೆಯನ್ನು ಬಂಧಿಸಿ ಆಕೆಯಿಂದ ಕಳವಿಗೀಡಾದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಕಡಬ ತಾಲೂಕು ಬಂಟ್ರ ಗ್ರಾಮದ ನೆಕ್ಕಿತ್ತಡ್ಕ ಮನೆ ನಿವಾಸಿ ಮುಸ್ತಾಫ ಎಂಬವರ ಪತ್ನಿ ಅಬೀಬಾ ಎಂಬವರು ಜ.6ರಂದು ಪೆರ್ನೆಯಲ್ಲಿರುವ ಹಾಲ್‍ನಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ಹೊರಡುವ ಸಮಯ ಭದ್ರತೆಯ ದೃಷ್ಠಿಯಿಂದ ಮನೆಯಲ್ಲಿದ್ದ ಅವರ ಸುಮಾರು 8 ಗ್ರಾಂ ತೂಕದ ಚಿನ್ನದ ನೆಕ್ಲೇಸ್ -1 ಮತ್ತು ಸುಮಾರು 106 ಗ್ರಾಂ ತೂಕದ ಚಿನ್ನಾಭರಣವನ್ನು ಒಂದು ಬಾಕ್ಸ್ ನೊಳಗಡೆ ಹಾಕಿ ವ್ಯಾನಿಟಿ ಬ್ಯಾಗಿನೊಳಗಡೆ ಇಟ್ಟುಕೊಂಡು, ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಾಸು ಮನೆಗೆ ಹೋಗಲು ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ ಬಂದು ಅಲ್ಲಿಂದ ಕಡಬಕ್ಕೆ ಹೋಗಲು ಮಧ್ಯಾಹ್ನ ಗಂಟೆ 1.45 ರ ಸುಮಾರಿಗೆ ಕಡಬಕ್ಕೆ ಹೋಗುವ ಕೆಎಸ್ಸಾರ್ಟಿಸಿ ಬಸ್ಸಿಗೆ ಹತ್ತಿ, ಬ್ಯಾಗ್‍ನಿಂದ ಐಡಿ ಕಾರ್ಡ್ ತೆಗೆಯಲೆಂದು ನೋಡಿದಾಗ ವ್ಯಾನಿಟಿ ಬ್ಯಾಗಿನ ಜಿಪ್ ತೆರೆದಿರುವುದು ಕಂಡು ಬಂದಿತ್ತು. ಈ ಸಂದರ್ಭ ಪರಿಶೀಲಿಸಿದಾಗ ಅದರೊಳಗಡೆ ಚಿನ್ನ ಇಟ್ಟಿದ್ದ ಬಾಕ್ಸ್ ಕಳವಿಗೀಡಾಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ಸಲ್ಲಿಸಲಾಗಿತ್ತು.
ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಸಂಕೀರ್ಣವಾಗಿದ್ದ ಪ್ರಕರಣದಲ್ಲಿ ಮಹತ್ವದ ಸುಳಿವನ್ನು ಸಂಪಾದಿಸಿಕೊಂಡು ಬೆನ್ನಟ್ಟಿದಾಗ ಬ್ಯಾಗ್ ಕಳ್ಳತನವನ್ನೇ ಕಸುಬಾಗಿಸಿಕೊಂಡ ನಸೀಮಾ ಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿ ಸಿದಾಗ ಕಳ್ಳತನದ ಕೃತ್ಯವನ್ನು ಒಪ್ಪಿಕೊಂಡು ತನ್ನ ಸ್ಕೂಟಿಯಲ್ಲಿ ಅಡಗಿಸಿಟ್ಟಿದ್ದ ಚಿನ್ನಾಭರಣವನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.