Connect with us

LATEST NEWS

ವೆಬ್ ಸೈಟ್  ಷೇರು ಮಾರುಕಟ್ಟೆಯಲ್ಲಿ ಭಾರೀ ವಂಚನೆ;ಆರೋಪಿಗಳು ಪೊಲೀಸರ ವಶಕ್ಕೆ..!

Published

on

ವೆಬ್ ಸೈಟ್  ಷೇರು ಮಾರುಕಟ್ಟೆಯಲ್ಲಿ ಭಾರೀ ವಂಚನೆ ಆರೋಪಿಗಳು ಪೊಲೀಸರ ವಶಕ್ಕೆ..!

ಚೆನ್ನೈ:ದೇಶದಾದ್ಯಂತ ವಿದೇಶಿ ವಿನಿಮಯದ ವೆಬ್ ಸೈಟ್ ಎಂದು ನಂಬಿಸಿ 700ಕ್ಕೂ ಅಧಿಕ ಜನರಿಗೆ ಬರೋಬ್ಬರಿ 12ಕೋಟಿ ರೂಪಾಯಿ ಮೋಸ ಮಾಡಿದ ಘಟನೆ ನಡೆದಿದ್ದು, ಸಿಸಿಬಿ ಸೈಬರ್ ಅಪರಾಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಕಾಲೇಜು ಸ್ನೇಹಿತರಾದ ತೈನಾಂಪೇಟ್ ಮೂಲದ ಸೈಯದ್ ಅಬು ತಾಹಿರ್ ಮತ್ತು ಚಿದಂಬರಂನ ಸೈಯದ್ ಅಲಿ ಹುಸೇನ್ ಬಂಧಿತ ಆರೋಪಿಗಳು ಎಂದು  ಗುರುತಿಸಲಾಗಿದೆ.

2019ರಲ್ಲಿ deltinfx.com ಮತ್ತು deltininternationalsolutions.com ವೆಬ್ ಸೈಟ್  ಪ್ರಾರಂಭಿಸಿದ್ದರು ಎಂದು ತಿಳಿದುಬಂದಿದೆ.

ಜನರು ಠೇವಣಿ ಇಡುವಂಥ ವೆಬ್ ಸೈಟನ್ನು ಅವರು ರಚಿಸಿದ್ದು, ನಾವು ಷೇರುಗಳಲ್ಲಿ ಹೂಡಿಕೆ ಮಾಡಿದ್ದೇವೆ. ಮತ್ತು  ಅವರ ಷೇರುಗಳು ಹೇಗೆ ಕಾರ್ಯ ನಿರ್ವಹಿಸುತ್ತಿವೆ ಎಂಬ ಬಗ್ಗೆ ಸುಳ್ಳು ಅಂಕಿ ಅಂಶಗಳನ್ನು ತೋರಿಸಿದ್ದಾರೆ.

ತಮ್ಮನ್ನು ವಿದೇಶೀ ವಿನಿಮಯ ಸಂಸ್ಥೆಯ ನಿರ್ದೇಶಕರು ಎಂದು ಹೇಳಿಕೊಂಡು ಅದಾಗಲೇ ಷೇರು ವಹಿವಾಟಿನಲ್ಲಿ ತೊಡಗಿದ್ದವರನ್ನು ಗುರಿಯಾಗಿಸಿಕೊಂಡು ತಮ್ಮ ವೆಬ್ ಸೈಟ್ ಮೂಲಕ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಕೇಳಿಕೊಂಡಿದ್ದಾರೆ ಎಂದು ಸಿಸಿಬಿ ಮೂಲಗಳಿಂದ ತಿಳಿದುಬಂದಿದೆ.

ಇವರಿಬ್ಬರ ಬಳಿ ಸುಮಾರು 10.5ಲಕ್ಷ ರೂಪಾಯಿಗಳನ್ನು ಕಳೆದುಕೊಂಡ ತಿರುವರ್ಕಾಡ್ ಮೂಲದ ಎಂ ಅಶೋಕ್ ಕುಮಾರ್ ಸಿಸಿಬಿಗೆ ದೂರು ನೀಡಿದ್ದರು.  ದೂರಿನ ಆಧಾರದಲ್ಲಿ ತನಿಖೆ ಕೈಗೊಂಡಾಗ ವಿಷಯ ಬೆಳಕಿಗೆ ಬಂದಿದೆ.

ಇತರ ಗ್ರಾಹಕರ ನಕಲಿ ಸಂದೇಶಗಳಿಂದ ತಮ್ಮ ಗ್ರಾಹಕರನ್ನು ಸಂತೋಷ ಪಡಿಸಿದ್ದು ಹೆಚ್ಚು ಹೆಚ್ಚು ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಎಂದು ತನಿಖಾಧಿಕಾರಿ ತಿಳಿಸಿದ್ದಾರೆ.

ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದ್ದು, ಮೋಸ ಹೋಗಿರುವ ಸಂತ್ರಸ್ತರು ತಕ್ಷಣ ದೂರು ಕೊಡುವಂತೆ ಪೊಲೀಸ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

Published

on

ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.

death

ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.

Continue Reading

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

Trending