Sunday, May 16, 2021

ವೇಶ್ಯಾವಾಟಿಕೆ ಅಡ್ಡೆ ಮೇಲೆ  ಪೊಲೀಸರ ದಾಳಿ; ಆರೋಪಿ ಪೊಲೀಸರ ವಶಕ್ಕೆ..!

ಬಂಟ್ವಾಳ: ಮಂಡಾಡಿ ವ್ಯಾಪ್ತಿಯ ಮನೆಯೊಂದರಲ್ಲಿ ನಡೆಯುತ್ತಿದ್ದ ಬೃಹತ್ ವೇಶ್ಯಾವಾಟಿಕೆ ದಂಧೆ ಪ್ರಕರಣವೊಂದನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಭೇದಿಸಿದ್ದಾರೆ.ದಂಧೆಯಲ್ಲಿ ನಿರತರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಮೂಡುನಡುಗೋಡು ನಿವಾಸಿ (36)ಸುರೇಶ್ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ.

ಮನೆಯಲ್ಲೇ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಸಂಗ್ರಹಿಸಿದ್ದ 6ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದ್ದು,ಕೃತ್ಯಕ್ಕೆ ಬಳಸುತ್ತಿದ್ದ ಕಾಂಡೋಮ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...