Monday, May 23, 2022

ಮೂರು ತಿಂಗಳ ಮಗುವನ್ನು ಕೊಂದು ದಂಪತಿ ನೇಣುಬಿಗಿದು ಆತ್ಮಹತ್ಯೆ

ಗದಗ: ಮೂರು ತಿಂಗಳ ಮಗುವನ್ನು ಕೊಂದು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ನಡೆದಿದೆ.


ಮಲ್ಲಪ್ಪ ಗಡಾದ (30) ಸುಧಾ (24) ಮಗು ರೂಪಾಶ್ರೀ ಮೃತ ದುರ್ದೈವಿಗಳು.
ಇವರು ತಮ್ಮ ಜಮೀನನಲ್ಲಿದ್ದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪುತ್ರಿ ರೂಪಾಶ್ರೀಯನ್ನ ಕೊಲೆ ಮಾಡಿ ನಂತರ ನೇಣು ಬಿಗಿದಿರುವ ಶಂಕೆ ವ್ಯಕ್ತವಾಗಿದೆ.
ಮನೆಯ ಹಾಲ್​​ನಲ್ಲಿ ಮಲ್ಲಪ್ಪ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರೆ, ಬೆಡ್​ರೂಮ್​ನಲ್ಲಿ ಸುಧಾ ಹಾಗೂ ಮಗು ರೂಪಾಶ್ರೀ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕಳೆದ 2 ವರ್ಷದ ಹಿಂದಷ್ಟೇ ಮಲ್ಲಪ್ಪ ಹಾಗೂ ಸುಧಾ ಮದುವೆ ಆಗಿದ್ದರು. ಆತ್ಮಹತ್ಯೆಗೆ ಕೌಟುಂಬಿಕ ಕಲಹ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳ: ಅಡ್ಡಾದಿಡ್ಡಿ ಕಾರು ಚಾಲನೆ-ಚಾಲಕನನ್ನು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಬಂಟ್ವಾಳ: ಮಹಿಳೆಯರನ್ನು ಕಾರಿನಲ್ಲಿ ಕರೆದುಕೊಂಡು ಹೋಗುವ ಸಂದರ್ಭ ಚಾಲಕ ಅಡ್ಡಾದಿಡ್ಡಿ ಚಲಾಯಿಸಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಬೊಬ್ಬೆ ಹಾಕಿದ್ದರಿಂದ ಕಾರು ನಿಲ್ಲಿಸಿ ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ ತಾಲೂಕಿನ ಸಾಲೆತ್ತೂರು ಸಮೀಪ...

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...