DAKSHINA KANNADA
ಕೋರೋನಾ 3ನೇ ಅಲೆ: ಜಿಲ್ಲೆಯಲ್ಲಿ ಮಕ್ಕಳಿಗೆ 13 ಕ್ವಾರಂಟೈನ್ ಕೇಂದ್ರ
Published
3 years agoon
By
Adminಮಂಗಳೂರು: ಕೋವಿಡ್ 3ನೇ ಅಲೆಯ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಗಾಗಿ ಜಿಲ್ಲೆಯಲ್ಲಿ 13 ಕ್ವಾರಂಟೈನ್ ಕೇಂದ್ರ ಪ್ರಾರಂಭಿಸಲು ಜಿಲ್ಲಾಡಳಿತ ಸಿದ್ಧತೆ ನಡೆದಿದೆ.
ನಗರದ ಸರ್ಕಾರಿ ಬಾಲಕರ ಬಾಲಮಂದಿರದ ಅಧಿಕಾರಿಗಳಿಗೆ ನೂತನವಾಗಿ ನಿರ್ಮಿಸಿರುವ ವಸತಿಗೃಹ, ಶಕ್ತಿನಗರದ ಸಾನ್ನಿಧ್ಯ ವಸತಿಯುತ ಶಾಲೆ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಅಶೋಕ ನಗರದ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಕಂಕನಾಡಿ ಈಶ್ವರಾನಂದ ಬಾಲಿಕಾಶ್ರಮ, ಮಂಜನಾಡಿಯ ಅಲ್–ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್, ಬಬ್ಬುಕಟ್ಟೆಯ ಖೈರಿಯಾ ಟ್ರಸ್ಟ್, ಅಳಿಕೆಯ ಬಾಪೂಜಿ ಬಾಲನಿಕೇತನ ನಿರ್ಗತಿಕ ಕುಟೀರ, ಪುತ್ತೂರು ನೆಲ್ಲಿಕಟ್ಟೆಯ ವಾತ್ಸಲ್ಯಧಾಮ ದತ್ತು ಕೇಂದ್ರ ಹಾಗೂ ಖಾಸಗಿ ಸಂಸ್ಥೆಯಾಗಿರುವ ಬೋಳಾರದ ಶಾಂತಿ ಸಂದೇಶ ಟ್ರಸ್ಟ್‌ನಲ್ಲಿ ಕ್ವಾರಂಟೈನ್ ಕೇಂದ್ರಗಳು ರೂಪುಗೊಂಡಿವೆ.
ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ವಿವಿಧ ರೀತಿಯ ಸಮಸ್ಯೆ ಎದುರಿಸುತ್ತಿರುವ 18 ವರ್ಷದ ಒಳಗಿನ ಮಕ್ಕಳಿಗೆ ಬಾಲನ್ಯಾಯ ಕಾಯ್ದೆ ಅಡಿಯಲ್ಲಿ ರಕ್ಷಣೆ ಮತ್ತು ಪುನರ್ವಸತಿ ಒದಗಿಸುತ್ತದೆ. ಹೀಗೆ ಬರುವ ಮಕ್ಕಳು ಪಾಲನಾ ಸಂಸ್ಥೆಯ ಆರೈಕೆಯಲ್ಲಿ ಇರುತ್ತಾರೆ. ಇಲ್ಲಿಗೆ ಬರುವ ಮಕ್ಕಳನ್ನು ನೇರವಾಗಿ ಪಾಲನಾ ಸಂಸ್ಥೆಗೆ ಸೇರಿಸುವ ಬದಲಾಗಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಕ್ವಾರಂಟೈನ್ ಕೇಂದ್ರ ರೂಪಿಸಿ, ಅಲ್ಲಿ ಅವರನ್ನು ಕ್ವಾರಂಟೈನ್ ಮಾಡಿ ರಕ್ಷಣೆ ಒದಗಿಸಲು ಜಿಲ್ಲಾ ರಕ್ಷಣಾ ಘಟಕ ಮುಂದಾಗಿದೆ.
DAKSHINA KANNADA
ಉಳ್ಳಾಲ: ಚಲಿಸುತ್ತಿದ್ದ ರಿಕ್ಷಾ ಮರಕ್ಕೆ ಡಿ*ಕ್ಕಿ: ಓರ್ವ ಮೃ*ತ್ಯು, ಮೂವರಿಗೆ ಗಾ*ಯ
Published
18 minutes agoon
25/11/2024ಉಳ್ಳಾಲ: ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃ*ತಪಟ್ಟು ಮೂವರು ಗಾ*ಯಗೊಂಡಿರುವ ಘಟನೆ ಉಳ್ಳಾಲ ತಾಲೂಕಿನ ಕೊಣಾಜೆ ಸಮೀಪದ ಪುಳಿಂಚಾಡಿ ಎಂಬಲ್ಲಿ ಭಾನುವಾರ (ನ.24) ಸಂಜೆ ಸಂಭವಿಸಿದೆ.
ಕಾಸರಗೋಡು ಜಿಲ್ಲೆಯ ಕುಂಬಳೆ ಮಂಜತ್ತಡ್ಕ ನಿವಾಸಿ ನಾರಾಯಣ ಗಟ್ಟಿ (50) ಮೃ*ತರು ಎಂದು ಗುರುತಿಸಲಾಗಿದೆ.
ಸಂಬಂಧಿಕರೊಬ್ಬರ ಆರೋಗ್ಯ ವಿಚಾರಿಸಲೆಂದು ಕೊಣಾಜೆ ಪುಳಿಂಚಾಡಿಯ ಕಲ್ಕಾರ್ ಎಂಬಲ್ಲಿಗೆ ನಾರಾಯಣ ಗಟ್ಟಿ ಅವರು ರಿಕ್ಷಾದಲ್ಲಿ ತೆರಳಿದ್ದರು. ಅಲ್ಲಿ ಇಳಿಜಾರು ಪ್ರದೇಶದಲ್ಲಿ ರಿಕ್ಷಾ ಇಳಿಯುತ್ತಿದ್ದಂತೆ ಬ್ರೇಕ್ ವೈಫಲ್ಯಕ್ಕೀಡಾಗಿ ಮರವೊಂದಕ್ಕೆ ಡಿ*ಕ್ಕಿ ಹೊಡೆದಿದೆ.
ಈ ಸಂದರ್ಭ ಗಂಭೀರ ಗಾಯಗೊಂಡ ನಾರಾಯಣ ಗಟ್ಟಿ ಅವರು ಮೃ*ತಪಟ್ಟಿದ್ದು, ಘಟನೆಯಲ್ಲಿ ರಿಕ್ಷಾದೊಳಗಿದ್ದ ಸಂಬಂಧಿ ಮಹಿಳೆ, ಅವರ ಪುತ್ರ ಹಾಗೂ ಇನ್ನೋರ್ವರಿಗೆ ಗಾ*ಯಗಳಾಗಿವೆ. ನಾರಾಯಣ ಗಟ್ಟಿ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಅತ್ಯಂತ ಉದ್ದದ ಮಾನವ ಸರಪಳಿ: ದ.ಕ.ಜಿಲ್ಲೆಗೆ ದ್ವಿತೀಯ ಸ್ಥಾನ
Published
23 hours agoon
24/11/2024By
NEWS DESK2ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.15ರಂದು ಬೀದರ್‌ನಿಂದ ಚಾಮರಾಜ ನಗರದವರೆಗೆ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಜಿಲ್ಲೆಗಳಿಗೆ ಒಟ್ಟು ಐದು ವಿಭಾಗಗಳಲ್ಲಿ ತಲಾ 3 ಪ್ರಶಸ್ತಿಗಳನ್ನು ನೀಡಲು ನಿರ್ಧರಿಸಲಾಗಿತ್ತು. ಈ ವಿಭಾಗಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯು ಅತ್ಯಂತ ಉದ್ದದ ಮಾನವ ಸರಪಳಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.
ನ.26ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರಿಂದ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
BIG BOSS
ಉಪಚುನಾವಣೆಯಲ್ಲಿ ಗೆಲುವು; ಪಟಾಕಿ ಸಿಡಿಸಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆ
Published
2 days agoon
23/11/2024ಮಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು, ಮಲ್ಲಿಕಟ್ಟೆಯಲ್ಲಿರುವ ಕಚೇರಿಯೆದುರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹಮದ್ ಖಾನ್ ಪರ ಘೋಷಣೆ ಕೂ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ‘ರಾಜ್ಯದ ಮೂರು ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶವು ರಾಜ್ಯ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಹಿಡಿದ ಕನ್ನಡಿಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಗೆಲುವಿನ ನಿರೀಕ್ಷೆ ಇತ್ತು. ಆದರೆ, ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದ ಫಲಿತಾಂಶ ತಲೆಕೆಳಗಾಗಿದೆ’ ಎಂದರು.
‘ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಚುನಾವಣೆಯಲ್ಲಿ ಸೋತಿದ್ದಾರೆ. ಇದು ರಾಜ್ಯದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬಿಜೆಪಿ ಮೈತ್ರಿಕೂಟದ ಬಗೆಗಿರುವ ಅಪನಂಬಿಕೆಗೆ ಸಾಕ್ಷಿಯಾಗಿದೆ. ಇನ್ನಾದರೂ ಬಿಜೆಪಿ ಜಾತಿ, ಧರ್ಮಗಳ ನಡುವೆ ದ್ವೇಷ ಬಿತ್ತುವ ಕೆಲಸ ಬಿಟ್ಟು, ಅಭಿವೃದ್ಧಿ ಬಗ್ಗೆ ಯೋಚಿಸಲಿ’ ಎಂದು ಹೇಳಿದರು
LATEST NEWS
ಪತ್ನಿಗೆ ಬೆಂ*ಕಿ ಹಚ್ಚಿ ತಲೆಮರೆಸಿಕೊಂಡಿದ್ದ ವ್ಯಕ್ತಿ 12 ವರ್ಷಗಳ ಬಳಿಕ ಅರೆಸ್ಟ್
ಯಶ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ ಖ್ಯಾತ ಕ್ರಿಕೆಟಿಗನ ಪತ್ನಿ
ಬಿಗ್ಬಾಸ್ ಮನೆಯಲ್ಲಿನ ಸ್ಪರ್ಧಿಗಳ ವಯಸ್ಸೆಷ್ಟು ಗೊತ್ತಾ..?
ಮಂಗಳೂರಲ್ಲಿ ಸಮುದ್ರಕ್ಕೆ ಜಿಗಿದು ಕಾಲೇಜು ವಿದ್ಯಾರ್ಥಿನಿ ಆತ್ಮಹ*ತ್ಯೆಗೆ ಯತ್ನ
ಚಲಿಸುತ್ತಿರುವ ಬಸ್ಸಿನಲ್ಲಿ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟ ಯುವಕ
ನಿದ್ದೆಯಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ: ನಿಮಗೆ ಗೊತ್ತಾ!
Trending
- LATEST NEWS5 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- Baindooru3 days ago
ಯಾವುದೇ ಕಾರಣಕ್ಕೂ ಕೂಡ ಇಂತಹ ಹಣ್ಣುಗಳನ್ನು ಫ್ರಿಡ್ಜ್ ನಲ್ಲಿ ಮಾತ್ರ ಇಡಬೇಡಿ!
- LIFE STYLE AND FASHION4 days ago
ಚಿಕನ್ ಪ್ರಿಯರೇ ಗಮನಿಸಿ; ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ
- LATEST NEWS7 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!