Home ಕರ್ನಾಟಕ ವಾರ್ತೆ ದ.ಕ ಸೇರಿ 9 ಜಿಲ್ಲೆಗಳಲ್ಲಿ ಮಾರ್ಚ್‌ 31ರವರೆಗೆ ಲಾಕ್‌ಡೌನ್..! ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಗಿತ..

ದ.ಕ ಸೇರಿ 9 ಜಿಲ್ಲೆಗಳಲ್ಲಿ ಮಾರ್ಚ್‌ 31ರವರೆಗೆ ಲಾಕ್‌ಡೌನ್..! ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಗಿತ..

ದ.ಕ ಸೇರಿ 9 ಜಿಲ್ಲೆಗಳಲ್ಲಿ ಮಾರ್ಚ್‌ 31ರವರೆಗೆ ಲಾಕ್‌ಡೌನ್..!ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ಥಗಿತ..

ಬೆಂಗಳೂರು : ಕೊರೋನಾ ವೈರಸ್ ವಿರುದ್ಧ ಹೋರಾಟದ ಭಾಗವಾಗಿ ಪ್ರಧಾನಿ ಮೋದಿ ಕರೆ ನೀಡಿದ ಜನತಾ ಕರ್ಫ್ಯೂಗೆ ದೇಶಾದ್ಯಂತ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ.

ಈ ಹಿನ್ನೆಲೆಯಲ್ಲಿ ಕೋವಿಡ್-19 ಸೋಂಕು ದೊಡ್ಡ ಮಟ್ಟಕ್ಕೆ ಉಲ್ಬಣಿಸುವ ಅಪಾಯ ಇರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಇನ್ನಷ್ಟು ದಿನಗಳ ಕಾಲ ನಿರ್ಬಂಧಗಳನ್ನ ಮುಂದುವರಿಸಲು ನಿರ್ಧರಿಸಿದೆ.

ಮಾರ್ಚ್ 31ರವರೆಗೆ ದೇಶಾದ್ಯಂತ ಬಂದ್ ಮಾಡಲು ತೀರ್ಮಾನಿಸಿದೆ.

ಇಂದು ಪ್ರಧಾನಿಯ ಮುಖ್ಯ ಕಾರ್ಯದರ್ಶಿ ಅವರು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಜೊತೆ  ತುರ್ತು ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಈ ನಿರ್ಧಾರಕ್ಕೆ ಬಂದಿದ್ದಾರೆ.

ಇನ್ನು ರಾಜ್ಯದಲ್ಲೂ ಕೊರೋನಾ ಹರಡುವುದನ್ನು ತಪ್ಪಿಸಲು ಸರ್ಕಾರ  ಕಠಿಣ ಕ್ರಮ ಕೈಗೊಂಡಿದೆ. ಅಗತ್ಯ ಸೇವೆ ಹೊರತುಪಡಿಸಿ ಮಿಕ್ಕೆಲ್ಲವನ್ನೂ ಬಂದ್ ಮಾಡಲು ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ತುರ್ತು ಸಭೆ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ‘ರಾಜ್ಯದಲ್ಲಿ ‌ನಾಳೆಯೂ ಸಾರ್ವಜನಿಕ ಸಾರಿಗೆ ವ್ಯವಸ್ಥೆ ರದ್ದುಗೊಳಿಸಲಾಗಿದೆ. ಎಸಿ ಬಸ್ ಸೇವೆ ಮಾರ್ಚ್‌ 31ರವರೆಗೆ ಇರುವುದಿಲ್ಲ’ ಎಂದರು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಧಾರವಾಡ, ಮೈಸೂರು, ಕೊಡಗು, ಕಲಬುರ್ಗಿ, ಬೆಳಗಾವಿ, ಮಂಗಳೂರು ಜಿಲ್ಲೆಗಳಲ್ಲಿ ಮಾರ್ಚ್ 31ರ ವರೆಗೆ ಲಾಕ್‌ಡೌನ್ ಮುಂದುವರಿಯಲಿದೆ.

ಈ 9 ಜಿಲ್ಲೆಗಳಲ್ಲಿ ವೈದ್ಯಕೀಯ, ಔಷದಿ, ದಿನಸಿ, ಕೃಷಿ ಮೊದಲಾದ ಅಗತ್ಯ ಸೇವೆ ಹೊರತುಪಡಿಸಿ ಸಾರಿಗೆ ಸೇರಿದಂತೆ ಯಾವುದೇ ವ್ಯವಸ್ಥೆ ಇರುವುದಿಲ್ಲ ಎಂದ ಸಿಎಂ ಈ 9 ಜಿಲ್ಲೆಗಳಲ್ಲಿ ಕಾರ್ಮಿಕರು ಹೆಚ್ಚಿರುವ ಕೈಗಾರಿಕೆಗಳಲ್ಲಿ, ದಿನ ಬಿಟ್ಟು ದಿನ ಅರ್ಧ ಸಂಖ್ಯೆಯಲ್ಲಿ ಕಾರ್ಮಿಕರನ್ನು ನಿಯೋಜಿಸಬೇಕು.

ಈ 9 ಜಿಲ್ಲೆಗಳಲ್ಲಿ ಅಂತರ ಜಿಲ್ಲೆಯ ಸಾರಿಗೆ ವ್ಯವಸ್ಥೆಯನ್ನು ಮಾರ್ಚ್ 31ರರವರೆಗೆ ಸ್ಥಗಿತಗೊಳಿಸಲಾಗುವುದು ಇಂದು ರಾತ್ರಿ 9 ಗಂಟೆಗೆ ಜನತಾ ಕರ್ಫ್ಯೂ ಮುಗಿಯಲಿದೆ.

ಆದರೆ ರಾತ್ರಿ 9 ಗಂಟೆಯಿಂದ 12 ಗಂಟೆಯವರೆಗೂ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...