Thursday, March 23, 2023

ದಕ್ಷಿಣ ಕನ್ನಡದಲ್ಲಿ ಕೊರೊನಾ ಭೀತಿ :ಮುನ್ನೆಚ್ಚರಿಕೆ ಕ್ರಮದ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಧಿಕಾರಿ..!

ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಮಂಗಳೂರು : ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಕೊರೊನಾ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಜಿಲ್ಲಾಡಳಿತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.

ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಸೂಚಿಸಿದ್ದಾರೆ.

ಶಾಪಿಂಗ್ ಮಾಲ್, ಕಚೇರಿಗಳು, ಸಿನೆಮಾ ಹಾಲ್, ಪಬ್, ಬಾರ್, ರೆಸ್ಟೋರೆಂಟ್ ಅದೇರೀತಿ ಬಸ್, ರೈಲು, ವಿಮಾನ ಯಾನದ ಸಂದರ್ಭದಲ್ಲಿ ಮಾಸ್ಕ್ ಧರಿಸುವುದು ಅಗತ್ಯವಾಗಿದೆ.

ಆರೋಗ್ಯ ಸಮಸ್ಯೆ ಇರುವವರು, ವೃದ್ಧರು ಒಳಾಂಗಣದಲ್ಲಿದ್ದಾಗಲೂ ಮಾಸ್ಕ್ ಧರಿಸುವುದು ಉತ್ತಮ ಎಂದು ಅವರು ಸಲಹೆ ನೀಡಿದ್ದಾರೆ.

ಸಾರ್ವಜನಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆದಷ್ಟು ಹೊರಾಂಗಣದಲ್ಲಿ ಆಯೋಜಿಸಬೇಕು.

ಕೈಗಾರಿಕೆ ಸಂಸ್ಥೆ, ಗಾರ್ಮೆಂಟ್ಸ್ ಸಹಿತ ಇತರ ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಕಡ್ಡಾಯವಾಗಿ ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು ಮತ್ತು ಮಾಸ್ಕ್ ಧರಿಸಬೇಕು.

ಹೆಚ್ಚಿನ ಜನರು ಗುಂಪುಗೂಡುವಿಕೆಯನ್ನು, ವಿಶೇಷವಾಗಿ ಒಳಾಂಗಣಗಳಲ್ಲಿ ಗುಂಪುಗೂಡುವಿಕೆಯನ್ನು ಕಟ್ಟುನಿಟ್ಟಾಗಿ ತಡೆಗಟ್ಟಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದ ಕುಮಟಾದ ಯುವತಿ ಡಿಡೀರ್ ನಾಪತ್ತೆ..! 

ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು ಸಂದರ್ಶಿಸಲು ಬಂದಿದ್ದ ಹದಿ ಹರೆಯದ ಯುವತಿ ನಾಪತ್ತೆಯಾಗಿದ್ದಾಳೆ.ಬೆಳ್ತಂಗಡಿ : ಕುಟುಂಬಸ್ಥರ ಜೊತೆ ಉತ್ತರ ಕನ್ನಡದಿಂದ ದಕ್ಷಿಣ ಕನ್ನಡದ ಶ್ರೀ ಕ್ಷೇತ್ರಗಳನ್ನು...

ಚಿಕ್ಕಮಗಳೂರು : ಬೈಕಿಗೆ ಬಸ್ ಡಿಕ್ಕಿ – ಇಬ್ಬರು ಸವಾರರು ಸ್ಥಳದಲ್ಲೇ ಮೃತ್ಯು..!

ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರಿನಲ್ಲಿ ಸಂಭವಿಸಿದೆ. ಚಿಕ್ಕಮಗಳೂರು: ಕೆಎಸ್ಆರ್ ಟಿಸಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು...