ಮಂಗಳೂರು : ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಕೊರೊನಾ ಮತ್ತೆ ನಾಗಲೋಟ ಆರಂಭಿಸಿದ್ದು, ಇಂದು ರಾಜ್ಯದಲ್ಲೇ ಅತೀ ಹೆಚ್ಚು ಪ್ರಕರಣಗಳು ದಾಖಲಾಗುವ ಮೂಲಕ ಇಂದು ಮೊದಲ ಸ್ಥಾನದಲ್ಲಿದೆ.
ಇಂದು ಜಿಲ್ಲೆಯಲ್ಲಿ ಕೊರೊನಾದಿಂದ 6 ಮಂದಿ ಸಾವನ್ನಪ್ಪಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾದಿಂದ ಒಟ್ಟು ಮೃತಪಟ್ಟವರ ಸಂಖ್ಯೆ 1466ಕ್ಕೆ ಏರಿಕೆಯಾಗಿದೆ .
ಜಿಲ್ಲೆಯಲ್ಲಿಂದು 438 ಹೊಸ ಕೊರೊನಾ ಪ್ರಕಣಗಳು ದಾಖಲಾಗಿವೆ. ಜಿಲ್ಲೆಯಲ್ಲಿನ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡ 4.57 ರಷ್ಟು ದಾಖಲಾಗಿದೆ. ಜೊತೆಗೆ 311 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,03,184 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಜಿಲ್ಲೆಯಲ್ಲಿ 3,415 ಸಕ್ರೀಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.