Tuesday, October 19, 2021

ಕೊರೊನಾ ದಕ್ಷಿಣ ಕನ್ನಡ ರಾಜ್ಯದಲ್ಲೇ ನಂ 1 : 410 ಕೊರೊನಾ ಪಾಸಿಟಿವ್- 6 ಬಲಿ

ಮಂಗಳೂರು :ಪಕ್ಕದ ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವುದರ ಪರಿಣಾಮ ಗಡಿ ಜಿಲ್ಲೆ ದಕ್ಷಿಣ ಕನ್ನಡಕ್ಕೂ ಭಾದಿಸಿದೆ.

ಜಿಲ್ಲೆ ಅನ್‌ಲಾಕ್ ಆದ ಸಂದರ್ಭ 200ರ ಗಡಿಯಲ್ಲಿದ್ದ ಕೋವಿಡ್ ಪ್ರಕರಣಗಳು ಈಗ 400ರ ಗಡಿ ದಾಟಿವೆ.

ಈ ಮೂಲಕ ರಾಜ್ಯದ ಕೋವಿಡ್ ಪಟ್ಟಿಯಲ್ಲಿ ದ.ಕ. ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ದಿನದಿಂದ ದಿನಕ್ಕೆ ದಕ್ಷಿಣ ಕನ್ನಡ ಕೊರೋನ ಸೋಂಕು ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗುತ್ತಿವೆ.

ರಾಜ್ಯದಲ್ಲಿ ರವಿವಾರ ಪತ್ತೆಯಾದ ಕೇಸುಗಳ ಪಟ್ಟಿಯಲ್ಲಿ ದ.ಕ. ಜಿಲ್ಲೆಯಲ್ಲಿ ಅತಿಹೆಚ್ಚು (410) ಪಾಸಿಟಿವ್ ಪ್ರಕರಣ ವರದಿಯಾಗಿವೆ.

ರಾಜ್ಯವರದಿ :

ಕಳೆದ 24 ಗಂಟೆಯಲ್ಲಿ 1,875 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 29,06,999ಕ್ಕೆ ಏರಿಕೆಯಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಂದೇ ದಿನದಲ್ಲಿ ಮಹಾಮಾರಿಗೆ 25 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ  ಸಾವಿನ ಸಂಖ್ಯೆ 36,587ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ರಾಜ್ಯದಲ್ಲೇ ನಂಬರ್ ಒಂದರಲ್ಲಿದ್ದು 410 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿನಲ್ಲಿ ಇಂದು 409 ಮಂದಿಗೆ ಸೋಂಕು ದೃಢಪಟ್ಟಿದ್ದು 2 ನೇ ಸ್ಥಾನದಲ್ಲಿದೆ.  ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,27,748ಕ್ಕೆ ಏರಿಕೆಯಾಗಿದೆ.

ಇನ್ನು ನಗರದಲ್ಲಿ ಸೋಂಕಿಗೆ 8 ಮಂದಿ ಬಲಿಯಾಗಿದ್ದಾರೆ. ಇನ್ನು ರಾಜ್ಯದ ವಿವಿಧ ಜಿಲ್ಲೆಗಳ ಅಂಕಿ ಅಂಶ ಗಮನಿಸುವುದಾದರೆ ಬಳ್ಳಾರಿ 13, ಬೆಳಗಾವಿ 39, ಬೆಂಗಳೂರು ಗ್ರಾಮಾಂತರ 37, ಬೆಂಗಳೂರು ನಗರ 409, ಬೀದರ್ 1, ಚಾಮರಾಜನಗರ 33, ಚಿಕ್ಕಬಳ್ಳಾಪುರ 23, ಚಿಕ್ಕಮಗಳೂರು 65, ಚಿತ್ರದುರ್ಗ 32, ದಕ್ಷಿಣಕನ್ನಡ 410, ದಾವಣಗೆರೆ 17, ಧಾರವಾಡ 23, ಗದಗ 12, ಹಾಸನ 108, ಹಾವೇರಿ 2, ಕಲಬುರ್ಗಿ 9, ಕೊಡಗು 83, ಕೋಲಾರ 35, ಕೊಪ್ಪಳ 1, ಮಂಡ್ಯ 42, ಮೈಸೂರು 146, ರಾಯಚೂರು 1, ರಾಮನಗರ 7, ಶಿವಮೊಗ್ಗ 65, ತುಮಕೂರು 52, ಉಡುಪಿ 162, ಉತ್ತರಕನ್ನಡ 46, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ತಲಾ ಒಂದು ಪ್ರಕರಣ ವರದಿಯಾಗಿದೆ.

 

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...