Home ಪ್ರಮುಖ ಸುದ್ದಿ ದಕ್ಷಿಣ ಕನ್ನಡದ ಉಳಿದ ಆ 26 ಮಂದಿ ಯಾರು.. ಎಲ್ಲಿ..!?

ದಕ್ಷಿಣ ಕನ್ನಡದ ಉಳಿದ ಆ 26 ಮಂದಿ ಯಾರು.. ಎಲ್ಲಿ..!?

Corona Breaking :ದಕ್ಷಿಣ ಕನ್ನಡದ ಉಳಿದ ಆ 26 ಮಂದಿ ಯಾರು.. ಎಲ್ಲಿ..!?

ಮಂಗಳೂರು: ದಿಲ್ಲಿಯ ಮರ್ಕಝ್ ನಿಝಾಮುದ್ದೀನ್‌ನ ಧಾರ್ಮಿಕ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಿಂದ 28 ಮಂದಿ ಭಾಗಿಯಾಗಿದ್ದರೆಂಬ ಅಘಾತಕಾರಿ ಅಂಶ ಬಯಲಾಗಿದೆ,

ಆ ಪೈಕಿ ಇಬ್ಬರನ್ನು ವೆನ್ಲಾಕ್ ಆಸ್ಪತ್ರೆಯ ಕ್ವಾರಂಟೈನ್ ನಲ್ಲಿಡಲಾಗಿದೆ. ಉಳಿದ 26 ಮಂದಿ ಯಾರು, ಎಲ್ಲಿಯವರು ಎಂಬುವುದನ್ನು ಇನ್ನು ಪತ್ತೆ ಮಾಡಬೇಕಾಗಿದೆ. ಕೊರೋನ ಜಿಲ್ಲಾ ನೋಡಲ್ ಅಧಿಕಾರಿ ನೇತೃತ್ವದ ತಂಡ ಪೊಲೀಸರ ಸಹಕಾರದಲ್ಲಿ ಪತ್ತೆ ಕಾರ್ಯ ಆರಂಭಿಸಿದೆ.

ಎಲ್ಲರನ್ನೂ ಪತ್ತೆ ಹಚ್ಚಿ ವೈದ್ಯಕೀಯ ತಪಾಸಣೆಗೊಳಪಡಿಸಿ ಅವರ ಗಂಟಲ ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲು ಮತ್ತು ವರದಿಯ ಆಧಾರದಲ್ಲಿ ಮುಂದಿನ ಕ್ರಮ ಜರುಗಿಸಲು ಇಂದು ನಡೆದ ತುರ್ತು ಸಭೆಯಲ್ಲಿ ನಿರ್ಧಾರಿಸಲಾಗಿದೆ.

ದೆಹಲಿಯ ನಿಜಾಮುದ್ದೀನ್ ನಲ್ಲಿ ನಡೆದ ಧಾರ್ಮಿಕ ಸಮ್ಮೇಳನದಲ್ಲಿ ವಿದೇಶಗಳ ಸೇರಿದಂತೆ ದೇಶದ ಹಲವಡೆಯಿಂದ ಮುಸ್ಲಿಂ ಧಾರ್ಮಿಕ ಮುಖಂಡರು ಭಾಗವಹಿಸಿದ್ದರು.

ಈ ಸಮ್ಮೇಳನದಲ್ಲಿ ಭಾಗವಹಿಸಿದ ನೂರಕ್ಕೂ ಮಿಕ್ಕಿದ ಜನರಲ್ಲಿ ಕೊರೊನಾ ರೋಗ ಲಕ್ಷಣಗಳು ಪತ್ತೆಯಾಗಿದ್ದು, ತಮಿಳುನಾಡು, ತೆಲಂಗಾಲ, ಕರ್ನಾಟಕ ಹಾಗೂ ಇತರ ರಾಜ್ಯಗಳಲ್ಲಿ ಸಮಾವೇಶದಲ್ಲಿ ಭಾಗವಹಿಸಿದ 10 ಮಂದಿ ಕೊರೊನಾ ಪೀಡಿತರಾಗಿ ಮೃತಪಟ್ಟಿದ್ದಾರೆ.
ದೆಹಲಿಯಿಂದ ಬಂದ ತೊಕ್ಕೋಟಿನ ವ್ಯಕ್ತಿಗಳನ್ನು ಮನೆಯಲ್ಲೇ ಇರುವುದನ್ನು ಪತ್ತೆಹಚ್ಚಿನ ಪೋಲೀಸರು ಹಾಗೂ ಆರೋಗ್ಯಾಧಿಕಾರಿಗಳು ನಿನ್ನೆ ತಡರಾತ್ರಿ ಮನೆಯಿಂದ ನೇರವಾಗಿ ವೆನ್ಲಾಕ್ ಕೊರೊನಾ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಅವರ ಗಂಟಲು ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಿದ್ದಾರೆ.

ತೊಕ್ಕೋಟಿನಲ್ಲಿ ಈ ವ್ಯಕ್ತಿಗಳು ಸೇರಿ ಸಾಮೂಹಿಕ ನಮಾಝ್ ಕಾರ್ಯಕ್ರಮವನ್ನೂ ಹಮ್ಮಿಕೊಂಡಿದ್ದರು ಮಾತ್ರವಲ್ಲ.

ಮೊನ್ನೆ ಲಾಕ್‌ ಸಂದರ್ಭದಲ್ಲಿ ಮನೆಮನೆಗಳಿಗೆ ದಿನಸಿ ಸಾಮಾಗ್ರಿಗಳ ವಿತರಣೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿರುವ ಸಂಶಯ ವ್ಯಕ್ತವಾಗಿದೆ. ಜಿಲ್ಲಾಡಳಿತ ಆ ವ್ಯಕ್ತಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದೆ.

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...